PM Kisan Samman: ಕಿಸಾನ್ ಸಮ್ಮಾನ್ 15ನೇ ಕಂತು ಬಿಡುಗಡೆ ಯಾವಾಗ? ಅರ್ಜಿ ಸಲ್ಲಿಸುವುದು ಹೇಗೆ?
ದೇಶದ ಅರ್ಹ ರೈತರ ಬ್ಯಾಂಕ್ ಖಾತೆಗೆ 2000 ರೂಪಾಯಿ ಹಣ ಹಾಕುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತು ಬಿಡುಗಡೆಗೆ ರೈತರು ಕಾಯುತ್ತಿದ್ದಾರೆ. ವರದಿಗಳ ಪ್ರಕಾರ ಪಿಎಂ-ಕಿಸಾನ್ ಯೋಜನೆಯ 15 ನೇ ಕಂತು ನವೆಂಬರ್ ಕೊನೆಯ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.
ಯೋಜನೆಯ 14ನೇ ಕಂತನ್ನು ಈ ವರ್ಷ ಜುಲೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು. ಫೆಬ್ರವರಿ 2023 ರಲ್ಲಿ ಬಿಡುಗಡೆಯಾದ 13ನೇ ಕಂತು ಬಿಡುಗಡೆಯಾದ 5 ತಿಂಗಳ ಬಳಿಕ 14ನೇ ಕಂತಿನ ಹಣ ಬಿಡುಗಡೆ ಮಾಡಲಾಗಿತ್ತು, 12 ನೇ ಕಂತು ಅಕ್ಟೋಬರ್ 2022 ರಲ್ಲಿ ಬಿಡುಗಡೆಯಾಯಿತು, 11 ನೇ ಕಂತು ಮೇ 2022 ರಲ್ಲಿ ಬಿಡುಗಡೆಯಾಯಿತು.

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ, ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಅವಧಿಗೆ ಹಣ ನೀಡಲಾಗುತ್ತದೆ. ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ಫೆಬ್ರವರಿ 2019 ರಲ್ಲಿ ಈ ಮಹತ್ವದ ಯೋಜನೆಯನ್ನು ಪ್ರಾರಂಭಿಸಲಾಯಿತು. ಇಲ್ಲಿಯವರೆಗೆ, ಸರ್ಕಾರವು ಪಿಎಂ-ಕಿಸಾನ್ ಯೋಜನೆಯಡಿ ಫಲಾನುಭವಿಗಳಿಗೆ ಒಟ್ಟು 2.50 ಲಕ್ಷ ಕೋಟಿ ರೂಪಾಯಿಗಳನ್ನು ರೈತರ ಖಾತೆಗೆ ವರ್ಗಾಯಿಸಿದೆ.
ಫಲಾನುಭವಿಯ ಸ್ಥಿತಿ ಪರಿಶೀಲನೆ
pmkisan.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಫಲಾನುಭವಿಯ ಸ್ಥಿತಿಯನ್ನು ತಿಳಿಯಬಹುದು.
1) ಪುಟದ ಬಲಭಾಗದಲ್ಲಿರುವ 'ನಿಮ್ಮ ಸ್ಥಿತಿಯನ್ನು ತಿಳಿಯಿರಿ' ಟ್ಯಾಬ್ ಅನ್ನು ಕ್ಲಿಕ್ ಮಾಡಿ
2) ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ ಮತ್ತು 'ಡೇಟಾ ಪಡೆಯಿರಿ' ಆಯ್ಕೆಯನ್ನು ಆರಿಸಿ.
3) ನಿಮ್ಮ ಫಲಾನುಭವಿಯ ಸ್ಥಿತಿಯು ಪರದೆಯ ಮೇಲೆ ಕಾಣಿಸಿಕೊಳ್ಳುತ್ತದೆ.
ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವುದು ಹೇಗೆ?
ಪಿಎಂ ಕಿಸಾನ್ ಅಧಿಕೃತ ವೆಬ್‌ಸೈಟ್ www.pmkisan.gov.in ಗೆ ಭೇಟಿ ನೀಡಿ
'ಫಲಾನುಭವಿಗಳ ಪಟ್ಟಿ' ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಡ್ರಾಪ್-ಡೌನ್‌ನಿಂದ ಆಯ್ದ ರಾಜ್ಯ, ಜಿಲ್ಲೆ, ಉಪ-ಜಿಲ್ಲೆ, ಬ್ಲಾಕ್ ಮತ್ತು ಹಳ್ಳಿಯಂತಹ ವಿವರಗಳನ್ನು ಆಯ್ಕೆಮಾಡಿ
'ಗೆಟ್ ರಿಪೋರ್ಟ್' ಆಯ್ಕೆ ಮೇಲೆ ಕ್ಲಿಕ್ ಮಾಡಿ
ಇದರ ನಂತರ, ಫಲಾನುಭವಿಗಳ ಪಟ್ಟಿಯ ವಿವರವನ್ನು ನೋಡಬಹುದಾಗಿದೆ.
155261 ಮತ್ತು 011-24300606 ಈ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆಯಬಹುದು.
ಅರ್ಜಿ ಸಲ್ಲಿಸುವುದು ಹೇಗೆ?
pmkisan.gov.in ಗೆ ಭೇಟಿ ನೀಡಿ
'ಹೊಸ ರೈತರ ನೋಂದಣಿ' ಮೇಲೆ ಕ್ಲಿಕ್ ಮಾಡಿ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾವನ್ನು ಭರ್ತಿ ಮಾಡಿ
ಅಗತ್ಯವಿರುವ ವಿವರಗಳನ್ನು ನಮೂದಿಸಿ ಮತ್ತು 'ಹೌದು' ಕ್ಲಿಕ್ ಮಾಡಿ
ಪಿಎಂ ಕಿಸಾನ್ ಅರ್ಜಿ ನಮೂನೆ 2023 ರಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಿ, ಅದನ್ನು ಉಳಿಸಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್‌ಔಟ್ ತೆಗೆದುಕೊಳ್ಳಿ.












Click it and Unblock the Notifications