ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಕಾಯ್ದೆಗಳ ರದ್ದುಗೊಳಿಸುವುದು ಇಂದಿನ್ನೂ ಘೋಷಣೆಯಷ್ಟೇ: ಇಲ್ಲಿಂದ ಮುಂದೇನು ಕಥೆ?

|
Google Oneindia Kannada News

ನವದೆಹಲಿ, ನವೆಂಬರ್ 19: ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸಿದ ಸುದೀರ್ಘ ಹೋರಾಟದ ಬಳಿಕ ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಿಸಿದ್ದಾರೆ.

ನವೆಂಬರ್ 19ರ ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ನವೆಂಬರ್ ತಿಂಗಳಾಂತ್ಯದ ವೇಳೆಗೆ ಆರಂಭವಾಗಲಿರುವ ಚಳಿಗಾಲ ಅಧಿವೇಶನದಲ್ಲಿ ವಿವಾದಿಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಕಳೆದ 2020ರ ಸೆಪ್ಟೆಂಬರ್ ತಿಂಗಳಿನಲ್ಲೇ ಆರಂಭಗೊಂಡ ರೈತ ಹೋರಾಟದ ಮೊದಲ ಬೇಡಿಕೆಯೇ ಈ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿತ್ತು.

Timeline: ವಿವಾದಿತ ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಹೋರಾಟದ ಹಾದಿTimeline: ವಿವಾದಿತ ಕೃಷಿ ಕಾಯ್ದೆ ವಿರುದ್ಧ ಅನ್ನದಾತರ ಹೋರಾಟದ ಹಾದಿ

ಈಗ ಕೃಷಿ ಕಾಯ್ದೆಗಳ ರದ್ದತಿ ಬಗ್ಗೆ ಘೋಷಣೆ ಮಾಡಲಾಗಿದೆ, ಆದರೆ ಕಾನೂನುಗಳನ್ನು ರದ್ದುಗೊಳಿಸಲು ಯಾವ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು? ಕಾನೂನು ತಜ್ಞರ ಪ್ರಕಾರ, ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ತಿನಲ್ಲಿ ಮಸೂದೆಯನ್ನು ಅಂಗೀಕರಿಸಬೇಕು. "ರದ್ದತಿಗಾಗಿ, ಸಂಸತ್ತಿನ ಅಧಿಕಾರವು ಸಂವಿಧಾನದ ಅಡಿಯಲ್ಲಿ ಕಾನೂನನ್ನು ಜಾರಿಗೊಳಿಸುವಂತೆಯೇ ಇರುತ್ತದೆ" ಎಂದು ಕೇಂದ್ರದ ಮಾಜಿ ಕಾನೂನು ಕಾರ್ಯದರ್ಶಿ ಪಿಕೆ ಮಲ್ಹೋತ್ರಾ ತಿಳಿಸಿದ್ದಾರೆ.

ಮೂರು ಕೃಷಿ ಕಾಯ್ದೆ ರದ್ಧುಗೊಳಿಸಲು ಒಂದು ಮಸೂದೆ

ಮೂರು ಕೃಷಿ ಕಾಯ್ದೆ ರದ್ಧುಗೊಳಿಸಲು ಒಂದು ಮಸೂದೆ

ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಪಿಡಿಟಿ ಆಚಾರ್ಯ ಮಾತನಾಡಿ, ಒಂದೇ ರದ್ದತಿ ಮಸೂದೆಯ ಮೂಲಕ ಸರ್ಕಾರವು ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬಹುದು ಎಂದು ಹೇಳಿದರು. ಕೃಷಿ ಕಾಯ್ದೆ ವಿರೋಧಿಸಲು ಕಾರಣವೇನು ಎಂಬುದನ್ನು ಉಲ್ಲೇಖಿಸಬೇಕು. ಹೀಗೆ ಮೂರು ಕೃಷಿ ಕಾಯ್ದೆ ರದ್ದುಗೊಳಿಸಲು ಎಲ್ಲ ಕಾರಣಗಳನ್ನು ಒಂದು ಮಸೂದೆಯಲ್ಲಿ ಉಲ್ಲೇಖಿಸಬೇಕು. ರದ್ಧತಿ ಮಸೂದೆಯನ್ನು ಅಂಗೀಕರಿಸಿದ ನಂತರದಲ್ಲಿ ಅದೂ ಕೂಡ ಕಾಯ್ದೆಯಾಗುತ್ತದೆ," ಎಂದು ಪಿಕೆ ಮಲ್ಹೋತ್ರಾ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳು ಜಾರಿಗೆ ಬಂದಿಲ್ಲ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳು ಜಾರಿಗೆ ಬಂದಿಲ್ಲ

"ದೇಶದಲ್ಲಿ ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿಲ್ಲ. ಆದರೆ ಅವು ಸಂಸತ್ತು ಅಂಗೀಕರಿಸಿದ ಕಾನೂನುಗಳಾಗಿದ್ದು, ಆ ಕಾಯ್ದೆಗಳು ರಾಷ್ಟ್ರಪತಿಗಳ ಒಪ್ಪಿಗೆಯನ್ನೂ ಪಡೆದಿದೆ" ಎಂದು ಮಲ್ಹೋತ್ರಾ ಹೇಳಿದರು. ಅಲ್ಲದೇ ಅವುಗಳನ್ನು ಸಂಸತ್ತಿನಲ್ಲಿ ಮಾತ್ರ ರದ್ದುಗೊಳಿಸುವುದಕ್ಕೆ ಸಾಧ್ಯವಿದೆ," ಎಂದು ತಿಳಿಸಿದರು.

"ಕೃಷಿ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ಸದಸ್ಯಕ್ಕೆ ಹಿಂಪಡೆಯುವುದಿಲ್ಲ. ಸಂಸತ್ತಿನಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ದಿನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ. ಎಂಎಸ್‌ಪಿ ಹೊರತುಪಡಿಸಿ ರೈತರ ಇತರ ಸಮಸ್ಯೆಗಳ ಬಗ್ಗೆಯೂ ಸರ್ಕಾರ ಮಾತನಾಡಬೇಕು," ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖ್ಯಸ್ಥ ರಾಕೇಶ್ ಟಿಕಾಯತ್ ಟ್ವೀಟ್ ಮಾಡಿದ್ದಾರೆ.

ವಿವಾದಿತ ಕೃಷಿ ಕಾಯ್ದೆ ರದ್ದು ಬಗ್ಗೆ ಪ್ರಧಾನಿ ಹೇಳಿಕೆ

ವಿವಾದಿತ ಕೃಷಿ ಕಾಯ್ದೆ ರದ್ದು ಬಗ್ಗೆ ಪ್ರಧಾನಿ ಹೇಳಿಕೆ

ಕೇಂದ್ರ ಸರ್ಕಾರದಿಂದ ಜಾರಿಗೆ ತರಲಾಗಿರುವ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದರು. ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, "ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ , ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ, ಸಂಪೂರ್ಣ ಪ್ರಾಮಾಣಿಕತೆಯಿಂದ ಒಳ್ಳೆಯ ಉದ್ದೇಶದಿಂದ ಈ ಕಾನೂನನ್ನು ತಂದಿದ್ದೆವು. ಆದರೆ ಅಂತಹ ಪವಿತ್ರವಾದ, ಸಂಪೂರ್ಣ ಶುದ್ಧವಾದ ರೈತರ ಅನುಕೂಲಕ್ಕಾಗಿ ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ," ಎಂದು ಹೇಳಿದ್ದಾರೆ.

ರದ್ದುಗೊಳಿಸಲು ಉದ್ದೇಶಿಸಿರುವ ಕೃಷಿ ಕಾಯ್ದೆಗಳು

ರದ್ದುಗೊಳಿಸಲು ಉದ್ದೇಶಿಸಿರುವ ಕೃಷಿ ಕಾಯ್ದೆಗಳು

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳು ರೈತರ ವಿರೋಧಕ್ಕೆ ಕಾರಣವಾಗಿದ್ದವು. ಇದೇ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಇದೀಗ ಸಮ್ಮತಿ ಸೂಚಿಸಿದೆ.

English summary
PM Modi announced that the three contentious farm laws will be repealed during the Winter session of the Parliament. Here is How these farm laws repealed in india; explained in kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X