ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣರಾಜ್ಯೋತ್ಸವದಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿ; ಪೊಲೀಸರ ನಿರ್ಧಾರಕ್ಕೆ ಬಿಟ್ಟ ಕೋರ್ಟ್

|
Google Oneindia Kannada News

ನವದೆಹಲಿ, ಜನವರಿ 18: ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ರೈತರ ಟ್ರ್ಯಾಕ್ಟರ್ ರ‍್ಯಾಲಿಗೆ ಸಂಬಂಧಿಸಿದಂತೆ ನಿರ್ದೇಶನ ಕೋರಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪರಿಶೀಲಿಸಿದೆ.

"ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಪೊಲೀಸರದ್ದು. ಹೀಗಾಗಿ ರೈತರ ಟ್ರ್ಯಾಕ್ಟರ್ ರ‍್ಯಾಲಿಗೆ ಅವಕಾಶ ನೀಡಬೇಕೋ ಬೇಡವೋ ಎಂಬುದನ್ನು ಪೊಲೀಸರು ಮೊದಲು ನಿರ್ಧರಿಸಬೇಕಿದೆ. ಅವರೇ ಈ ವಿಷಯದಲ್ಲಿ ಮೊದಲು ನಿರ್ಧಾರ ತೆಗೆದುಕೊಳ್ಳಬೇಕಿರುವವರು" ಎಂದು ಹೇಳಿದೆ.

ಕೃಷಿ ಕಾಯ್ದೆ: ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನವೇ ಟ್ರ್ಯಾಕ್ಟರ್ ಮೆರವಣಿಗೆಕೃಷಿ ಕಾಯ್ದೆ: ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನವೇ ಟ್ರ್ಯಾಕ್ಟರ್ ಮೆರವಣಿಗೆ

ಸೋಮವಾರ ವಿಚಾರಣೆ ನಡೆಸಿದ ಎಸ್.ಎ ಬೊಬ್ಡೆ ಅವರನ್ನೊಳಗೊಂಡ ಪೀಠವು, "ಪೊಲೀಸರು ಕಾನೂನಿನಡಿಯಲ್ಲಿ ಎಲ್ಲಾ ಅಧಿಕಾರ ಬಳಸಿಕೊಳ್ಳಲು ಅವಕಾಶವಿದೆ" ಎಂದು ತಿಳಿಸಿದ್ದು, ಜನವರಿ 20ಕ್ಕೆ ವಿಚಾರಣೆಯನ್ನು ಮುಂದೂಡಿದೆ.

Police First Authority To Decide On Farmers Tractor Rally In Delhi Said Supreme Court

ಕಳೆದ ವಾರ ಕೇಂದ್ರದ ಮೂರು ವಿವಾದಿತ ಕೃಷಿ ಕಾಯ್ದೆಗಳಿಗೆ ತಡೆಯೊಡ್ಡಿದ್ದ ಸುಪ್ರೀಂ ಕೋರ್ಟ್, ನಾಲ್ಕು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿ ರೈತರು ಹಾಗೂ ಕೇಂದ್ರದ ನಡುವಿನ ಬಿಕ್ಕಟ್ಟನ್ನು ಶಮನಗೊಳಿಸಲು ಮುಂದಾಗಿತ್ತು. ಆದರೆ ಈ ಸಮಿತಿಯ ಯಾವುದೇ ಸಭೆಗಳಿಗೂ ಹೋಗುವುದಿಲ್ಲ ಎಂದು ರೈತ ಸಂಘಟನೆಗಳು ನಿರ್ಧರಿಸಿದ್ದು, ತಮ್ಮ ನಿಲುವಿಗೆ ಬದ್ಧರಾಗಿ ಜನವರಿ 26ರ ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಮೆರವಣಿಗೆಗೆ ಅಡ್ಡಿ ಮಾಡದೇ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

English summary
The question of farmers entry into Delhi is a law and order situation that is to be determined by Police said Supreme Court while hearing about proposed tractor rally on Republic Day
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X