ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ರ್ಯಾಕ್ಟರ್ ಮೂಲಕ ಬಲವಂತವಾಗಿ ಗಡಿ ದಾಟುವ ರೈತರ ಪ್ರಯತ್ನಕ್ಕೆ ಪೊಲೀಸರ ತಡೆ

|
Google Oneindia Kannada News

ನವದೆಹಲಿ, ಜನವರಿ 26: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು, ಗಣರಾಜ್ಯೋತ್ಸವ ದಿನದಂದು ಬೃಹತ್ ಟ್ರ್ಯಾಕ್ಟರ್ ಮೆರವಣಿಗೆಗೆ ಕರೆ ನೀಡಿದ್ದು, ಲೋನಿ ಗಡಿ ಮೂಲಕ ಸೋಮವಾರ ಬಲವಂತವಾಗಿ ದೆಹಲಿ ಪ್ರವೇಶಿಸಲು ಕೆಲವು ಟ್ರ್ಯಾಕ್ಟರ್‌ಗಳು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ದೆಹಲಿಯ ಐತಿಹಾಸಿಕ ಸಿಗ್ನೇಚರ್ ಸೇತುವೆಯನ್ನು ಪೊಲೀಸರು ಬಂದ್ ಮಾಡಿದ್ದಾರೆ.

ರೈತರು ಬ್ಯಾರೇಕೇಡ್‌ಗಳನ್ನು ಮುರಿದು ಟ್ರ್ಯಾಕ್ಟರ್‌ನಲ್ಲಿ ದೆಹಲಿ ಒಳಗೆ ಪ್ರವೇಶಿಸಲು ಯತ್ನಿಸಿದರು. ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಅಲ್ಪ ಪ್ರಮಾಣದಲ್ಲಿ ಬಲ ಪ್ರಯೋಗಿಸಿದ್ದರಿಂದ ಸ್ಥಳದಲ್ಲಿ ಗದ್ದಲದ ವಾತಾವರಣ ನಿರ್ಮಾನವಾಗಿತ್ತು.

Police Shut Signature Bridge In Loni Border Side After Some Tractor Tried To Enter Forcefully

ಟ್ರ್ಯಾಕ್ಟರ್ ಮೆರವಣಿಗೆ: ರೈತರಿಗೆ ಡೀಸೆಲ್ ನೀಡದಂತೆ ಪೊಲೀಸರ ಸೂಚನೆ ಟ್ರ್ಯಾಕ್ಟರ್ ಮೆರವಣಿಗೆ: ರೈತರಿಗೆ ಡೀಸೆಲ್ ನೀಡದಂತೆ ಪೊಲೀಸರ ಸೂಚನೆ

ಸಿಂಘು, ಟಿಕ್ರಿ ಮತ್ತು ಘಾಜಿಪುರ ಗಡಿಗಳಿಂದ ಮಾತ್ರವೇ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ದೆಹಲಿ ಪೊಲೀಸರು ರೈತರಿಗೆ ಅನುಮತಿ ನೀಡಿದ್ದಾರೆ. ಇಂದು ಕರೆ ನೀಡಿರುವ ಟ್ರ್ಯಾಕ್ಟರ್ ಮೆರವಣಿಗೆಗೆ ಭಾರಿ ಪ್ರಮಾಣದಲ್ಲಿ ಪ್ರತಿಕ್ರಿಯೆ ವ್ಯಕ್ತವಾಗಿರುವುದರಿಂದ ದೆಹಲಿ ಪೊಲೀಸರು ಎಲ್ಲ ಸ್ಥಳಗಳಲ್ಲಿಯೂ ಭದ್ರತೆಯನ್ನು ಸಾಕಷ್ಟು ಬಿಗಿಗೊಳಿಸಿದ್ದಾರೆ. ಸಿಮೆಂಟ್ ಬ್ಲಾಕ್‌ಗಳು, ಕ್ರೇನ್‌ಗಳನ್ನು ಪ್ರಮುಖ ಸ್ಥಳಗಳಲ್ಲಿ ಇರಿಸಲಾಗಿದೆ. ಪ್ರತಿ ಗಡಿ ಭಾಗದಲ್ಲಿಯೂ ಸೀಮಿತ ಸಂಖ್ಯೆಯ ಟ್ರ್ಯಾಕ್ಟರ್‌ಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ.

ರೈತರು ಶಾಂತಿಯುತವಾಗಿ ಮೆರವಣಿಗೆ ನಡೆಸಲು ಉದ್ದೇಶಿಸಿದ್ದಾರೆ. ಆದರೆ ಇಲ್ಲಿ ಅನಗತ್ಯ ಗೊಂದಲಗಳನ್ನು ಸೃಷ್ಟಿಸುವ ಮೂಲಕ ಸಂಘರ್ಷ ಉಂಟುಮಾಡುವ ಪ್ರಯತ್ನಗಳು ನಡೆಯುವ ಸಾಧ್ಯತೆ ಇದೆ ಎಂಬ ಮಾಹಿತಿ ಬಂದಿದೆ. ಈ ಕಾರಣದಿಂದ ದೆಹಲಿ ಪೊಲೀಸರು ಎಲ್ಲ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ.

ರೈತರ ಟ್ರಾಕ್ಟರ್ ಪರೇಡ್ ತಡೆಯಬೇಡಿ; ಪೊಲೀಸರಿಗೆ ಎಚ್ಚರಿಕೆರೈತರ ಟ್ರಾಕ್ಟರ್ ಪರೇಡ್ ತಡೆಯಬೇಡಿ; ಪೊಲೀಸರಿಗೆ ಎಚ್ಚರಿಕೆ

ಯಾವ ರಸ್ತೆಗಳು ಬಂದ್ ಆಗಿವೆ ಮತ್ತು ವಾಹನ ಸವಾರರು ಯಾವ ಮಾರ್ಗದ ಮೂಲಕ ಸಂಚರಿಸಬೇಕು ಎಂಬ ಬಗ್ಗೆ ಸಂಚಾರ ಪೊಲೀಸರು ವಿವರವಾದ ಮಾಹಿತಿ ನೀಡಿದ್ದಾರೆ.

English summary
Delhi police closed the Signature Bridge on Monday after some tractors forcefully tried to enter from Loni border side.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X