ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳದಲ್ಲಿ ಹೆಸರು ಕಾಳು ಖರೀದಿ ಕೇಂದ್ರ ತೆರೆಯಲು ಮನವಿ

|
Google Oneindia Kannada News

ಕೊಪ್ಪಳ, ಆಗಸ್ಟ್ 07; " ಕೊಪ್ಪಳ ಜಿಲ್ಲೆಯಲ್ಲಿ ಹೆಸರು ಕಾಳು ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ" ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಕೇಂದ್ರಗಳ ತೆರೆಯುವ ಕುರಿತಂತೆ ಜಿಲ್ಲಾ ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಮಿತಿ ವತಿಯಿಂದ ಮನವಿ ಮಾಡಲಾಗಿದೆ.

ಕೊಪ್ಪಳ; ದುಬಾರಿ ಬೆಲೆಗೆ ಗೊಬ್ಬರ ಮಾರಾಟ, ಎಚ್ಚರಿಕೆ ಕೊಪ್ಪಳ; ದುಬಾರಿ ಬೆಲೆಗೆ ಗೊಬ್ಬರ ಮಾರಾಟ, ಎಚ್ಚರಿಕೆ

ಮುಂಗಾರು ಹೆಸರು ಕಾಳು ಪ್ರಸ್ತುತ ಕಾಟಾವಿನ ಹಂತದಲ್ಲಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹೆಸರನ್ನು ಖರೀದಿಸಬೇಕಾಗಿದೆ. ಬಿತ್ತನೆ ಕ್ಷೇತ್ರವನ್ನು ಆಧಾರವಾಗಿಟ್ಟುಕೊಂಡು ಇಳುವರಿ ಪ್ರಮಾಣವನ್ನು ಅಂದಾಜಿಸಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಾಗಿದೆ.

ಕೊಪ್ಪಳದಲ್ಲಿ ಪೇರಲ ಬೆಳೆ ಸಂಸ್ಕರಣೆ ಕ್ಲಸ್ಟರ್‌ ಸ್ಥಾಪನೆ ಕೊಪ್ಪಳದಲ್ಲಿ ಪೇರಲ ಬೆಳೆ ಸಂಸ್ಕರಣೆ ಕ್ಲಸ್ಟರ್‌ ಸ್ಥಾಪನೆ

Proposal For Govt To Open Mung Bean Purchase Center In Koppal

ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಕುರಿತಂತೆ ಹಾಗೂ ಖರೀದಿ ಕೇಂದ್ರಗಳ ಬಗ್ಗೆ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡುವುದರ ಜೊತೆಗೆ ಬೆಂಬಲ ಬೆಲೆ ಯೋಜನೆಯ ಲಾಭ ಸಿಗುವ ನಿಟ್ಟಿನಲ್ಲಿ ರೈತರಿಗೆ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ನರೇಗಾ ಯೋಜನೆಯಡಿ ಪಪ್ಪಾಯ ಬೆಳೆದು ಲಾಭ ಪಡೆದ ರೈತ ನರೇಗಾ ಯೋಜನೆಯಡಿ ಪಪ್ಪಾಯ ಬೆಳೆದು ಲಾಭ ಪಡೆದ ರೈತ

ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವ ಹಿನ್ನೆಲೆಯಲ್ಲಿ ಸರ್ಕಾರದಿಂದ ನಿರ್ದೇಶನ ಬಂದ ತಕ್ಷಣ ಗುರುತಿಸಲಾದ ಸ್ಥಳಗಳಲ್ಲಿ ಹೆಸರು ಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಖರೀದಿಸುವ ಹೆಸರು ಕಾಳಿನ ದಾಸ್ತಾನು ಮಾಡುವ ಕುರಿತಂತೆ ಗೋದಾಮುಗಳ ಸ್ಥಳಗಳ ಲಭ್ಯತೆ ಹಾಗೂ ಅಗತ್ಯ ಮುಂಜಾಗೃತ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿ ಎಸ್. ಶ್ಯಾಮ್ ಮಾತನಾಡಿ, "ಕೃಷಿ ಇಲಾಖೆಯ ಮಾಹಿತಿ ಆಧಾರದ ಮೇಲೆ ಪ್ರಸ್ತುತ ಜಿಲ್ಲೆಯಲ್ಲಿ 21,307 ಹೆಕ್ಟೇರ್ ಪ್ರದೇಶದಲ್ಲಿ ಹೆಸರುಕಾಳು ಬಿತ್ತನೆ ಮಾಡಲಾಗಿದೆ. ಒಂದು ಹೆಕ್ಟರ್‌ಗೆ ಅಂದಾಜು 8 ಕ್ವಿಂಟಾಲ್‌ನಂತೆ ಹೆಸರು ಕಾಳು ಸುಮಾರು 1 ಲಕ್ಷ 80 ಸಾವಿರ ಕ್ವಿಂಟಾಲ್ ಇಳುವರಿ ಬರುವ ಸಾಧ್ಯತೆ ಇದೆ" ಎಂದರು.

Proposal For Govt To Open Mung Bean Purchase Center In Koppal

ಪ್ರಸ್ತುತ ಹೆಸರು ಕಾಳಿನ ದರವು ರೂ. 6400 ರಿಂದ 7400 ವರೆಗೆ ಇದ್ದು, ಕಳೆದ ಬಾರಿಯಂತೆಯೇ ಖರೀದಿ ಕೇಂದ್ರಗಳನ್ನು ಜಿಲ್ಲೆಯ ಕೊಪ್ಪಳ ಎಪಿಎಂಸಿ ಹಾಗೂ ತಾಲ್ಲೂಕಿನ ಹಿರೇಸಿಂಧೋಗಿ, ಕುಷ್ಟಗಿ ತಾಲ್ಲೂಕಿನ ತಾವರಗೇರಾ ಹಾಗೂ ಹನುಮಸಾಗರ ಮತ್ತು ಕುಕನೂರು ಹಾಗೂ ಯಲಬುರ್ಗಾ ಟಿಎಪಿಎಂಸಿಗಳು ಸೇರಿ ಜಿಲ್ಲೆಯಲ್ಲಿ ಒಟ್ಟು ಆರು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿಬೇಕಿದೆ.

ಎರೆಹುಳು ಗೊಬ್ಬರ ತಯಾರಿಕೆ ತರಬೇತಿ; ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಕೊಪ್ಪಳ ಇವರ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ 10 ದಿನಗಳ ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ನೀಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿದಾರರಿಗೆ ವಯೋಮಿತಿ 18 ರಿಂದ 45 ವರ್ಷ. ಕನಿಷ್ಠ 8ನೇ ತರಗತಿ ಪಾಸಾಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ಆಗಸ್ಟ್ 16. ಆಗಸ್ಟ್ 17 ರಿಂದ ತರಬೇತಿಗಳು ಪ್ರಾರಂಭ.

ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ್‌ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಸೈಜ್ ಫೋಟೋ 3, ಅಂಕಪಟ್ಟಿ ಜೆರಾಕ್ಸ್ ಪ್ರತಿ ಸೇರಿದಂತೆ ಎಲ್ಲಾ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೆ ವಿಳಾಸ; ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ ಅಶೋಕ ಸರ್ಕಲ್ ಹತ್ತಿರ ಕೊಪ್ಪಳ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 08539-231038.

English summary
Koppal deputy commissioner M. Sundaresh Babu said that proposal will submit to government to open Mung Bean purchase center.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X