ಬೆಂಗಳೂರಲ್ಲಿ ರೈತರ ಪ್ರತಿಭಟನೆ; 40 ರೈತರು ಪೊಲೀಸರ ವಶಕ್ಕೆ

ಬೆಂಗಳೂರು, ಸೆಪ್ಟೆಂಬರ್ 25: ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕದಲ್ಲಿ ರೈತರು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಶುಕ್ರವಾರ ಬೆಂಗಳೂರಿನಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿ, ಜೈಲ್ ಭರೋ ನಡೆಸಲಿದ್ದಾರೆ. ಈಗಾಗಲೇ ಕಳೆದ ಐದು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ರೈತ ಸಂಘಟನೆಗಳ ಜೊತೆ ಇತರ ಹಲವು ಸಂಘಟನೆಗಳು ಪ್ರತಿಭಟನೆಗೆ ಕೈ ಜೋಡಿಸಿವೆ.

ಬೆಂಗಳೂರು-ತುಮಕೂರು ರಸ್ತೆಯ ಗೊರಗುಂಟೆಪಾಳ್ಯ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆಯಲು ಪ್ರಯತ್ನ ನಡೆಸಿದ 40ಕ್ಕೂ ಅಧಿಕ ರೈತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರಸ್ತುತ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ.

Protesting Farmers Detained In Goraguntepalya Bengaluru

ರೈತರ ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಪ್ರತಿಭಟನೆ ಉಗ್ರ ಸ್ವರೂಪ ಪಡೆದರೆ ರೈತರನ್ನು ವಶಕ್ಕೆ ಪಡೆಯಲಿದ್ದಾರೆ. ರೈತರನ್ನು ಕರೆದೊಯ್ಯಲು 10 ಬಿಎಂಟಿಸಿ ಬಸ್‌ಗಳನ್ನು ಸಹ ಸಿದ್ಧಪಡಿಸಲಾಗಿದೆ.

ಕುರುಬೂರು ಶಾಂತಕುಮಾರ್ ನೇತೃತ್ವದ ಬಣ, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ಮತ್ತೊಂದು ಬಣ ಸಹ ಮೈಸೂರು ಬ್ಯಾಂಕ್ ವೃತ್ತಕ್ಕೆ ಬಂದು ಸೇರಿದೆ. ನಾಯಂಡಹಳ್ಳಿ ಬಳಿ ಮೈಸೂರು ರಸ್ತೆ ತಡೆಯಲು ಪ್ರಯತ್ನ ನಡೆಸಿದ ರೈತರನ್ನು ವಶಕ್ಕೆ ಪಡೆಯಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+