ಮಂಡ್ಯದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?

ಮಂಡ್ಯ, ಅಕ್ಟೋಬರ್ 09 : 'ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರಾಷ್ಟ್ರಗಳಿಗೆ ಭೇಟಿ ನೀಡುತ್ತಾರೆ. ಆದರೆ, ದೇಶದಲ್ಲಿನ ಕೃಷಿಕರ ಸಮಸ್ಯೆಯನ್ನು ಆಲಿಸಲು ಅವರನ್ನು ಭೇಟಿ ಮಾಡಿಲ್ಲ. ಕೇಂದ್ರ ಸರ್ಕಾರ ರೈತರಿಗೆ ಅಗತ್ಯ ಸಹಕಾರ ನೀಡುತ್ತಿಲ್ಲ ಎಂದು' ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದರು.

ಮಂಡ್ಯ ವಿಸಿ ಫಾರ್ಮ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು, 'ಪ್ರಧಾನಿ ಮೋದಿ ವಿದೇಶ ಪ್ರವಾಸದ ಹೆಸರಿನಲ್ಲಿ ವಿವಿಧ ರಾಷ್ಟ್ರಗಳಿಗೆ ಭೇಟಿ ನೀಡುತ್ತಾರೆ. ಆದರೆ, ದೇಶದ ಎಲ್ಲಾ ರಾಜ್ಯಗಳಿಗೆ ಏಕೆ ಭೇಟಿ ನೀಡುತ್ತಿಲ್ಲ?' ಎಂದು ಪ್ರಶ್ನಿಸಿದರು. [ಕರ್ನಾಟಕದಲ್ಲಿ ರಾಹುಲ್ Live]

mandya

'ಪ್ರಧಾನಿ ಮೋದಿ ಅವರು ವಿವಿಧ ರಾಷ್ಟ್ರಗಳಿಗೆ ಭೇಟಿ ನೀಡುತ್ತಾರೆ. ಆದರೆ, ಕೃಷಿಕರ ಸಮಸ್ಯೆಯನ್ನು ಕೇಳುತ್ತಿಲ್ಲ. ದೇಶದ ರೈತರ ಜೊತೆಯೂ ಸ್ವಲ್ಪ ಸಮಯ ಕಳೆಯಬೇಕು' ಎಂದು ಮೋದಿಯ ವಿದೇಶ ಪ್ರವಾಸವನ್ನು ಟೀಕಿಸಿದರು.

ಶನಿವಾರ ಪ್ಯಾಕೇಜ್ ಘೋಷಣೆ? : 'ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರ ಜೊತೆ ಚರ್ಚೆ ನಡೆಸಿ, ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಸೂಚನೆ ನೀಡಿದ್ದೇನೆ. ಈ ಬಗ್ಗೆ ಶನಿವಾರ ಸಿದ್ದರಾಮಯ್ಯ ಅವರು ಮಾಹಿತಿ ನೀಡಲಿದ್ದಾರೆ. ಕೇಂದ್ರ ಸರ್ಕಾರ ಕಾಂಗ್ರೆಸ್ ಆಡಳಿತವಿರುವ ರಾಜ್ಯಕ್ಕೆ ಸಹಕಾರ ನೀಡುತ್ತಿಲ್ಲ' ಎಂದು ದೂರಿದರು.

'ಯುಪಿಎ ಸರ್ಕಾರ ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿತ್ತು. ಆದರೆ, ಕೇಂದ್ರ ಸರ್ಕಾರ ರೈತರನ್ನು ಕಡೆಗಣಿಸಿದೆ. ರೈತರು ಯಾವುದೇ ರಾಜ್ಯಕ್ಕೆ ಸೀಮಿತವಲ್ಲ. ಎಲ್ಲ ರೈತರು ಭಾರತ ರೈತರು ಎಂದು ತಿಳಿದು ಪ್ರಧಾನಿ ಮೋದಿ ಕೃಷಿಕರ ಸಮಸ್ಯೆಯನ್ನು ಪರಿಹಾರ ಮಾಡಬೇಕು' ಎಂದು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+