ಮಂಡ್ಯ, ಹಾವೇರಿಗೆ ಭೇಟಿ ನೀಡಲಿದ್ದಾರೆ ರಾಹುಲ್ ಗಾಂಧಿ
ಬೆಂಗಳೂರು, ಸೆಪ್ಟೆಂಬರ್ 25 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಭೇಟಿಗೆ ದಿನಾಂಕ ನಿಗದಿಯಾಗಿದೆ. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಮಾಡಲಿರುವ ರಾಹುಲ್ ಗಾಂಧಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
ಅಕ್ಟೋಬರ್ 6ರ ಮಂಗಳವಾರ ಮತ್ತು 7ರ ಬುಧವಾರ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅವರ ಕಚೇರಿ ಅಧಿಕೃತವಾಗಿ ಮಾಹಿತಿ ನೀಡಿದೆ. ಎರಡು ದಿನಗಳ ಭೇಟಿಯ ವೇಳೆ ರಾಹುಲ್ ಗಾಂಧಿ ಮಂಡ್ಯ ಮತ್ತು ಹಾವೇರಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. [ರೈತ ಆತ್ಮಹತ್ಯೆ, ಲೋಕಸಭೆಯಲ್ಲಿ ಯಡಿಯೂರಪ್ಪ ಘರ್ಜನೆ]

ರಾಜ್ಯಕ್ಕೆ ಆಗಮಿಸುವ ರಾಹುಲ್ ಗಾಂಧಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ. ಮಂಡ್ಯದಲ್ಲಿ ರೈತರ ಮನೆಗಳಿಗೆ ಭೇಟಿ ನೀಡಲಿರುವ ಅವರು ಹಾವೇರಿಯಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ನಂತರ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.[ರೈತರ ಆತ್ಮಹತ್ಯೆಗಳು ನೋವು ತಂದಿದೆ: ಸಿದ್ದರಾಮಯ್ಯ]
Rahul Gandhi will be on a two day visit to Karnataka on 6th-7th Oct.He will meet sugarcane farmers in Mandya& undertake a Padyatra in Haveri
— Office of RG (@OfficeOfRG) September 24, 2015 ಹಿಂದೆಯೇ ಬರಬೇಕಿತ್ತು : ರಾಹುಲ್ ಗಾಂಧಿ ಜುಲೈ ತಿಂಗಳಿನಲ್ಲಿಯೇ ರಾಜ್ಯ ಪ್ರವಾಸ ಕೈಗೊಳ್ಳಬೇಕಿತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಮತ್ತು ಮಾಜಿ ಕೇಂದ್ರ ಸಚಿವ ಚಲ್ಲಂರಾಜು ಅವರು ಮಂಡ್ಯಕ್ಕೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಮಾಹಿತಿ ಸಂಗ್ರಹಿಸಿ, ವರದಿ ನೀಡಿದ್ದರು.
ಆದರೆ, ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ರಾಹುಲ್ ಭೇಟಿ ಮುಂದಕ್ಕೆ ಹೋಗಿತ್ತು. ಈಗ ಅಧಿಕೃತವಾದ ದಿನಾಂಕ ಘೋಷಣೆಯಾಗಿದೆ. ರಾಹುಲ್ ಗಾಂಧಿ ಬಂದು ಹೋದ ಬಳಿಕ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕಸರತ್ತು ಆರಂಭವಾಗಲಿದೆ. [ಪಿಟಿಐ ಚಿತ್ರ]












Click it and Unblock the Notifications