ರಾಹುಲ್ ಗಾಂಧಿ ಹಾವೇರಿ ಭೇಟಿ ಕಾರ್ಯಕ್ರಮಗಳು
ಹಾವೇರಿ, ಅಕ್ಟೋಬರ್ 06 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಎರಡು ದಿನಗಳ ಭೇಟಿಗಾಗಿ ಅಕ್ಟೋಬರ್ 8ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಹಾವೇರಿ ಮತ್ತು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿರುವ ಅವರು ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ.
ಅಕ್ಟೋಬರ್ 10ರ ಶನಿವಾರ ರಾಹುಲ್ ಗಾಂಧಿ ಅವರು ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ. ನಂತರ ರಾಣೆಬೆನ್ನೂರು ತಾಲೂಕಿನ ಮೈದೂರ ಗ್ರಾಮದಿಂದ ಪಾದಯಾತ್ರೆ ನಡೆಸಿ ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಲಿದ್ದಾರೆ. [ಅಕ್ಟೋಬರ್ 9, 10ರಂದು ರಾಹುಲ್ ಗಾಂಧಿ ರಾಜ್ಯ ಪ್ರವಾಸ]

ಅಂದು ಮಧ್ಯಾಹ್ನ 3ಗಂಟೆಗೆ ಗುಡಗೇರಿ ಗ್ರಾಮದ ತಾಂಡಾಗಳಲ್ಲಿ ರೈತರೊಂದಿಗೆ ಕಂದಾಯ ಗ್ರಾಮಗಳ ಕುರಿತು ಸಂವಾದ ನಡೆಸುವರು. ರಾಹುಲ್ ಗಾಂಧಿಯವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮತ್ತು ಸಚಿವರು, ಶಾಸಕರು, ಕಾರ್ಯಕರ್ತರು ಹಾವೇರಿಗೆ ಆಗಮಿಸಲಿದ್ದಾರೆ. [ರೈತ ಆತ್ಮಹತ್ಯೆ, ಲೋಕಸಭೆಯಲ್ಲಿ ಯಡಿಯೂರಪ್ಪ ಘರ್ಜನೆ]
ಅಕ್ಟೋಬರ್ 9ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿರುವ ರಾಹುಲ್ ಗಾಂಧಿ ಅವರು ನಂತರ ಬೆಂಗಳೂರಿಗೆ ವಾಪಸ್ ಆಗಲಿದ್ದು, ಅರಮನೆ ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. [ರೈತರ ಆತ್ಮಹತ್ಯೆಗಳು ನೋವು ತಂದಿದೆ]












Click it and Unblock the Notifications