ಹಾಸನ ಜಿಲ್ಲೆಯ ಹಲವೆಡೆ ತುಂತುರು ಮಳೆ, ರೈತರ ಮುಖದಲ್ಲಿ ಮಂದಹಾಸ

ಹಾಸನ, ಜೂನ್‌, 11: ರಾಜ್ಯದ ಹಲವೆಡೆ ಮುಂಗಾರು ಮಳೆಯ ಸಿಂಚನ ಆರಂಭವಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಚಂಡಮಾರುತರದ ಜೊತೆ ಮುಂಗಾರು ಆರ್ಭಟವೂ ಕೂಡ ಹೆಚ್ಚಾಗಿದ್ದು, ಇಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಅದೇ ರೀತಿ ಇದೀಗ ಹಾನಸ ಜಿಲ್ಲೆಯ ಹಲವೆಡೆ ತುಂತುರು ಮಳೆ ಆರಂಭ ಆಗಿದೆ.

ಹಾಸನಕ್ಕೆ ನೈರುತ್ಯ ಮುಂಗಾರು ಪ್ರವೇಶ ಮಾಡಿ ಇಲ್ಲಿನ ರೈತರ ಮುಖದಲ್ಲಿ ಮಂದಹಾಸ ತರಿಸಿದೆ. ನಗರದಲ್ಲಿ ಅರ್ಧ ಗಂಟೆಯಿಂದಲೂ ಜಿಟಿಜಿಟಿ ಮಳೆ ಸುರಿದಿದೆ. ಇನ್ನು ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಸಂಜೆ ಸುಮಾರಿಗೆ ಮಳೆ ಪ್ರಮಾಣ ಹೆಚ್ಚಾಗುವ ಲಕ್ಷಣಗಳು ಎದ್ದುಕಾಣುತ್ತಿವೆ. ಮತ್ತೊಂದೆಡೆ ಮುಂಗಾರನ್ನೇ ನಂಬಿ ಬಿತ್ತನೆ ಮಾಡಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದಂತಾಗಿದೆ.

Rain in many parts of Hassan district, Farmers Expressed happiness

ಹಾಗೆಯೆ ಇಂದು ಸಂಜೆ ನಂತರ ಮಳೆ ಬಿರುಸಾಗುವ ನಿರೀಕ್ಷೆಯಲ್ಲಿ ಇಲ್ಲಿನ ರೈತರಿದ್ದಾರೆ. ಮುಂಗಾರು ಮಳೆ ಪ್ರವೇಶ ಒಂದು ವಾರ ತಡವಾಗಿದ್ದರಿಂದ ಜಿಲ್ಲೆಯ ರೈತರು ಆತಂಕಕಕ್ಕೆ ಒಳಗಾಗಿದ್ದರು. ಇದೀಗ ಸುರಿದ ಮಳೆ ಜಿಲ್ಲೆಯ ರೈತರ ಮುಖದಲ್ಲಿ ಮಂದಹಾಸ ತರಿಸಿದೆ.

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಮತ್ತೊಂದೆಡೆ ರಾಜ್ಯಕ್ಕೆ ಶನಿವಾರ ಮುಂಗಾರು ಪ್ರವೇಶವಾಗಿದ್ದು, ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆ ಆಗಲಿದೆ.

ಹಾಗೆಯೆ ನಿನ್ನೆ ಕೊಲ್ಲೂರು, ಕಾರ್ಕಳ, ಮಂಗಳೂರು, ಕೋಟ, ಶಿರಾಲಿ, ಉಡುಪಿ, ಅಂಕೋಲಾ, ಚಿಂಚೋಳಿ, ಕೊಟ್ಟಿಗೆಹಾರ, ಕುಂದಾಪುರ, ಬೇಲಿಕೇರಿ, ಕುಕನೂರು, ರೋಣ, ಗೋಕರ್ಣ, ಮುಧೋಳ, ಚಿಕ್ಕನಹಳ್ಳಿ, ಯುಗಟಿಯಲ್ಲಿ ಮಳೆ ಆಗಿದೆ.

ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.

ಕಳೆದ ಕೆಲ ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ಸಂಜೆ ವೇಳೆಗೆ ನಗರದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಬದಲಾಗಿತ್ತು. ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದೀಪ ಸಮೂಹಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+