ಮಳೆರಾಯನ ಅಟ್ಟಹಾಸಕ್ಕೆ ನಲುಗಿದ ಚಾಮರಾಜನಗರ ಜಿಲ್ಲೆ ಜನತೆ, ಎಲ್ಲೆಲ್ಲಿ ಹಾನಿ?, ಇಲ್ಲಿದೆ ವಿವರ

ಚಾಮರಾಜನಗರ, ಮೇ, 22: ಭಾನುವಾರ (ಮೇ 21) ರಂದು ಅಬ್ಬರದ ಮಳೆ ಸುರಿದ ಕಾರಣ ರಾಜ್ಯದ ಹಲವೆಡೆ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಅದೇ ರೀತಿ ಅಬ್ಬರದ ಮಳೆಗೆ ಚಾಮರಾಜನಗರ ಜಿಲ್ಲೆಯ ಹಲವೆಡೆ ಮನೆಗಳು, ದಿನಬಳಕೆ ವಸ್ತುಗಳು, ಕೃಷಿ ಬೆಳೆಗಳು, ಕ್ರೀಡಾಂಗಣ ಸಂಪೂರ್ಣವಾಗಿ ಜಲಾವೃತವಾಗಿವೆ. ಇದರಿಂದ ಜಿಲ್ಲೆಯ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಹಾಗಾದರೆ ಜಿಲ್ಲೆಯ ಯಾವ ಭಾಗಗಳಲ್ಲಿ ಹೆಚ್ಚು ಹಾನಿ ಆಗಿದೆ ಎಂದು ಇಲ್ಲಿ ತಿಳಿಯಿರಿ.

ಹನೂರು‌ ತಾಲೂಕು ವ್ಯಾಪ್ತಿಯಲ್ಲಿ ವಿವಿಧಡೆ ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಕೆಲವಡೆ ಮರಗಳು ಮುರಿದು ಬಿದ್ದಿವೆ. ಇನ್ನೂ ಕೆಲವಡೆ ಮನೆ ಮೇಲ್ಚಾವಣಿ ಹಾರಿ ಹೋಗಿರುವ ಘಟನೆಗಳು ಜರುಗಿವೆ.

Rain in many places of Chamarajanagar district, Know details

ಪಟ್ಟಣ ಸೇರಿದಂತೆ ತಾಲೂಕಿನ ಸುತ್ತಮುತ್ತ ಭಾನುವಾರ ಸಂಜೆ ಬಿರುಗಾಳಿ ಸಹಿತ ಮಳೆ ಸುರಿದಿರುವ ಪರಿಣಾಮ ಕೆಲವಡೆ ಮರಗಳು ಮುರಿದು ಬಿದ್ದು ಸಂಚಾರಕ್ಕೆ ತೊಂದರೆ ಆಗಿದೆ. ಇದರಿಂದ ವಾಹನ ಸವಾರರು ಪರದಾಡಿದ್ದಾರೆ. ಇನ್ನು ಹನೂರು ಪಟ್ಟಣದಲ್ಲಿ ಬಾಲು ಎಂಬುವವರ ಮನೆ ಮೇಲೆ ಇರುವ ನೀರಿನ ಟ್ಯಾಂಕ್‌ನ ಮೇಲೆ ಮರವೊಂದು ಮುರಿದು ಬಿದ್ದು, ಟ್ಯಾಂಕ್ ಹೊಡೆದು ಹೋಗಿದೆ. ಜೊತೆಗೆ ಮನೆಯ ಮೇಲೆ ಮರ ಬಿದ್ದಿರುವುದರಿಂದ ಗೋಡೆಗೂ ಹಾನಿ ಆಗಿದೆ.

ಅಲ್ಲದೇ ಕೆ.ಇ.ಬಿ ಮುಂಭಾಗ ಇರುವ ಬಡಾವಣೆಯೊಂದರ ಕ್ರಷ್ಣ ನಾಯ್ಡು ಎಂಬುವವರ ಮನೆಯ ಸೀಟ್ ಗಾಳಿಗೆ ಹಾರಿ ಹೋಗಿದ್ದು, ಮತ್ತೊಂದೆಡೆ ಮನೆಯಲ್ಲಿದ್ದ ದಿನಬಳಕೆಯ ವಸ್ತುಗಳು ನೀರುಪಾಲಾಗಿವೆ.

ಕೆರೆಯಂತಾದ ಕ್ರೀಡಾಂಗಣ

ಇನ್ನು ಪಟ್ಟಣದಲ್ಲಿನ ಅವೈಜ್ಞಾನಿಕವಾಗಿರುವ ಮಲೆಮಹದೇಶ್ವರ ಕ್ರೀಡಾಂಗಣದಲ್ಲಿ ಎಲ್ಲಿ ನೋಡಿದರೂ ಮಳೆ ನೀರು ನಿಂತು ಕರೆಯಂತೆ ಆಗಿದೆ. ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ಸಾರ್ವಜನಿಕರು ವಾಯು ವಿಹಾರಕ್ಕೆ ಬರುತ್ತಾರೆ. ಯಾವಾಗ ಮಳೆ ಬಂದರೂ ಇಲ್ಲಿ ನೀರು ನಿಲ್ಲುತ್ತದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು ಎಂದು ಅಲ್ಲಿನ ಸ್ಥಳೀಯರು ಒತ್ತಾಯಿಸಿದ್ದಾರೆ.

ನೆಲಕಚ್ಚಿದ ಜೋಳದ ಫಸಲು

ಹಾಗೆಯೆ ಚಿಂಚಳ್ಳಿ ಮುಖ್ಯ ರಸ್ತೆಯ ಮಾದೇಶ್ ಎಂಬುವವರ ಜಮೀನಿನಲ್ಲಿ ಸುಮಾರು ‌ಮೂರು ಹೆಕ್ಟೇರ್‌ನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಗಾಳಿ ಮಳೆಗೆ ನೆಲಕಚ್ಚಿದೆ. ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಿ ನಷ್ಟಕ್ಕೆ ಒಳಾಗಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂಬುದು ಇಲ್ಲಿನ ರೈತರ ಆಗ್ರಹವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+