ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಧ್ಯಾಹ್ನವೇ ಶುರುವಾಯ್ತು ಮಳೆರಾಯನ ಆರ್ಭಟ..ಕಾಫಿ ಬೆಳೆಗಾರರ ಮುಖದಲ್ಲಿ ಮಂದಹಾಸ
ಚಿಕ್ಕಮಗಳೂರು, ಏಪ್ರಿಲ್, 13: ಕಾಫಿನಾಡು ಅಂತಲೇ ಪ್ರಖ್ಯಾತಿ ಪಡೆದಿರುವ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆರಾಯ ತನ್ನ ಆರ್ಭಟವನ್ನು ಇಂದು (ಏಪ್ರಿಲ್) ಕೂಡ ಮುಂದುವರೆಸಿದ್ದಾನೆ. ಇನ್ನು ಇಷ್ಟು ದಿನ ಬಿಸಿಲಿನ ಬೇಗೆಗ ಬೆಂದಿದ್ದ ಈ ಭಾಗದ ಜನರಿಗೆ ಸತತ ಮೂರು ದಿನಗಳಿಂದಲೂ ಮಳೆರಾಯ ತಂಪೆರೆದಿದ್ದಾರೆ. ಹಾಗಾದರೆ ಇಂದು ಜಿಲ್ಲೆಯ ಯಾವೆಲ್ಲ ಭಾಗಗಳಲ್ಲಿ ಮಳೆಯಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಇಂದು ಮಧ್ಯಾಹ್ನವೇ ಬಿರುಗಾಳಿಯೊಂದಿಗೆ ಮಳೆರಾಯ ತನ್ನ ಆರ್ಭಟವನ್ನು ಶುರು ಮಾಡಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಶಿರವಾಸೆ, ಮುತ್ತೋಡಿ ಭಾಗದಲ್ಲಿ ಸುಮಾರು ಕಳೆದ ಒಂದು ಗಂಟೆಯಿಂದಲೂ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಒಣಗುತ್ತಿದ್ದ ಕಾಫಿ ಗಿಡಗಳಿಗೆ ಇದೀಗ ಜೀವ ಬಂದಾತಾಗಿದೆ. ಇದರಿಂದ ಕಾಫಿ ಬೆಳೆಗಾರರು ಹಾಗೂ ರೈತರ ಮುಖದಲ್ಲಿ ಮತ್ತಷ್ಟು ಸಂತಸ ಹೆಚ್ಚಾಗಿದೆ.

ಜಿಲ್ಲೆಯ ಕಳಸ ಹಾಗೂ ಕೊಪ್ಪ ಭಾಗದಲ್ಲೂ ಮಳೆ ಆರಂಭವಾಗಿದೆ. ಇನ್ನು ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಿರವಾಸೆ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಿನ್ನೆಯೂ ಸಹ ಹಾಸನ, ಬಾಗಲಕೋಟೆ, ಕಲಬುರಗಿ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಹುಬ್ಬಳ್ಳಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಡಗು, ಶಿವಮೊಗ್ಗ, ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದೆ. ಇನ್ನು ಮುಂದಿನ ದಿನಗಳಲ್ಲಿ ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರೆಯಲಿದೆ ಎನ್ನುವ ಮುನ್ಸೂಚನೆ ಇದೆ.












Click it and Unblock the Notifications