ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಸಲ್ ಭೀಮಾ ಯೋಜನೆ; ಆಲೂಗಡ್ಡೆ ಬೆಳೆ ನೋಂದಣಿಗೆ ಅವಕಾಶ

|
Google Oneindia Kannada News

ಬೆಂಗಳೂರು, ನವೆಂಬರ್ 19 : ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅಡಿ ಆಲೂಗಡ್ಡೆ ಬೆಳೆ ನೋಂದಣಿಗೆ ಅವಕಾಶ ನೀಡಲಾಗಿದೆ. ರೈತರು ಪಾವತಿಸಬೇಕಾದ ವಿಮೆ ಪ್ರತಿ ಹೆಕ್ಟೇರ್‌ಗೆ 7250 ರೂ.ಗಳು.

2020ರ ಹಿಂಗಾರು ಹಂಗಾಮಿಗೆ ಕ್ರಮವಾಗಿ ಹೋಬಳಿವಾರು ಪಟ್ಟಿಯಲ್ಲಿ ನೀಡಲಾಗಿರುವ ಆಲೂಗಡ್ಡೆ ಬೆಳೆಗೆ ಇಚ್ಛೆಯುಳ್ಳ ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ಅರ್ಜಿಯನ್ನು ಸಲ್ಲಿಸಬೇಕು.

ಬಿತ್ತನೆ ಬಳಿಕ ಆಲೂಗಡ್ಡೆ ಬೆಳೆ ರಕ್ಷಣೆಗೆ ರೈತರಿಗೆ ಸಲಹೆಗಳು ಬಿತ್ತನೆ ಬಳಿಕ ಆಲೂಗಡ್ಡೆ ಬೆಳೆ ರಕ್ಷಣೆಗೆ ರೈತರಿಗೆ ಸಲಹೆಗಳು

ರೈತರು ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್ ಸಂಖ್ಯೆ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳನ್ನು ಹತ್ತಿರದ ಆರ್ಥಿಕ ಸಂಸ್ಥೆಗಳಿಗೆ (ಬ್ಯಾಂಕ್) ಸಲ್ಲಿಸಬೇಕು.

ಅಂಗಮಾರಿ ರೋಗದಿಂದ ಆಲೂಗಡ್ಡೆ ಬೆಳೆ ಸಂರಕ್ಷಣೆ ಹೇಗೆ? ಅಂಗಮಾರಿ ರೋಗದಿಂದ ಆಲೂಗಡ್ಡೆ ಬೆಳೆ ಸಂರಕ್ಷಣೆ ಹೇಗೆ?

Register Potato Crop Under Pradhan Mantri Fasal Bima Yojanaa

ಬೆಳೆ ಸಾಲಪಡೆದ ರೈತರು ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಇಚ್ಚಿಸದೇ ಇದ್ದಲ್ಲಿ ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿದೆ.

ಲಾಭದಾಯಕ ಆಲೂಗಡ್ಡೆ ಬೇಸಾಯಕ್ಕೆ ರೈತರಿಗೆ ಸಲಹೆಗಳು ಲಾಭದಾಯಕ ಆಲೂಗಡ್ಡೆ ಬೇಸಾಯಕ್ಕೆ ರೈತರಿಗೆ ಸಲಹೆಗಳು

ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಆಲೀಕಲ್ಲು ಮಳೆ ಮತ್ತು ಮೇಘ ಸ್ಪೋಟ ಹಾಗೂ ಭೂಕುಸಿತ ಇವುಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುತ್ತದೆ. ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾಸಂಸ್ಥೆಯ ಕಛೇರಿಗಳಿಗೆ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಕಾರಣವನ್ನು 72 ಘಂಟೆಗಳೊಳಗೆ ತಿಳಿಸಬೇಕು.

ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಅವಕಾಶವಿದೆ.

ಆಲೂಗಡ್ಡೆ ಬೆಳೆಗೆ ರೈತರು ಪಾವತಿಸಬೇಕಾದ ವಿಮಾ ಪ್ರತಿ ಹೆಕ್ಟೇರ್‌ಗೆ 7,250 ರೂ.ಗಳು ಆಗಿರುತ್ತದೆ. ಸಾಲ ಪಡೆಯುವ ಮತ್ತು ಪಡೆಯದ ರೈತರಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 30 ಆಗಿರುತ್ತದೆ. ವಿಮಾ ಮೊತ್ತವು ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ಒಂದೇ ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಟ್ಟದಲ್ಲಿ ತೋಟಗಾರಿಕೆ ಉಪ ನಿರ್ದೇಶಕರು, ತಾಲ್ಲೂಕು ಮಟ್ಟದಲ್ಲಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ಹೋಬಳಿ ಮಟ್ಟದಲ್ಲಿ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.

English summary
Horticulture department of Karnataka called farmers to register Potato crop under Pradhan Mantri Fasal Bima Yojanaa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X