ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯದ ರೈತರಿಗೆ ಸಿಹಿಸುದ್ದಿ ನೀಡಿದ ಜಿಲ್ಲಾಡಳಿತ

|
Google Oneindia Kannada News

ಮಂಡ್ಯ, ಡಿಸೆಂಬರ್ 09; ಮಂಡ್ಯದಲ್ಲಿ ಭತ್ತ, ರಾಗಿ ಬೆಳೆಯುವ ರೈತರಿಗೆ ಜಿಲ್ಲಾಡಳಿತ ಸಿಹಿಸುದ್ದಿ ನೀಡಿದೆ. ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿಗೆ ಡಿಸೆಂಬರ್ 15ರಿಂದ ನೋಂದಣಿ ಆರಂಭಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಶುಕ್ರವಾರ ಜಿಲ್ಲಾಧಿಕಾಗಳ ಕಚೇರಿಯಲ್ಲಿ 2022-23ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಖರೀದಿ ಸಂಬಂಧ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಹೆಚ್. ಎನ್.ಗೋಪಾಲಕೃಷ್ಣ ಸಭೆಯಲ್ಲಿ ಮಾತನಾಡಿದರು.

ಕಟಾವಿಗೆ ಬಂದ ಭತ್ತ: ದೇವದುರ್ಗ ತಾಲೂಕಿನಲ್ಲಿ ಖರೀದಿ ಕೇಂದ್ರಕ್ಕಾಗಿ ರೈತರ ಒತ್ತಾಯ ಕಟಾವಿಗೆ ಬಂದ ಭತ್ತ: ದೇವದುರ್ಗ ತಾಲೂಕಿನಲ್ಲಿ ಖರೀದಿ ಕೇಂದ್ರಕ್ಕಾಗಿ ರೈತರ ಒತ್ತಾಯ

"ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿ ಮಾಡಲಾಗುತ್ತಿದ್ದು, ಜಿಲ್ಲೆಯಲ್ಲಿ ಡಿಸೆಂಬರ್ 15ರಿಂದ ನೋಂದಣಿ ಆರಂಭಿಸಲಾಗುವುದು" ಎಂದು ಜಿಲ್ಲಾಧಿಕಾರಿ ಡಾ. ಹೆಚ್. ಎನ್. ಗೋಪಾಲಕೃಷ್ಣ ಹೇಳಿದರು.

ಮಂಡ್ಯದಲ್ಲಿ ಭತ್ತ, ರಾಗಿ ಖರೀದಿ ಕೇಂದ್ರ ಸ್ಥಾಪಿಸುವಂತೆ ಒತ್ತಾಯ: ಮುಖ್ಯಮಂತ್ರಿಗಳಿಗೆ ಮನವಿ ಪತ್ರಮಂಡ್ಯದಲ್ಲಿ ಭತ್ತ, ರಾಗಿ ಖರೀದಿ ಕೇಂದ್ರ ಸ್ಥಾಪಿಸುವಂತೆ ಒತ್ತಾಯ: ಮುಖ್ಯಮಂತ್ರಿಗಳಿಗೆ ಮನವಿ ಪತ್ರ

Registration For Ragi And Paddy Purchase In Mandya From December 15

ಮಂಡ್ಯ ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದೆ. ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತದೆ.

ಭಾರತದಲ್ಲಿ ಸೆ.2ರವರೆಗೆ ಶೇ.97ರಷ್ಟು ಭತ್ತ ಬಿತ್ತನೆ ಭಾರತದಲ್ಲಿ ಸೆ.2ರವರೆಗೆ ಶೇ.97ರಷ್ಟು ಭತ್ತ ಬಿತ್ತನೆ

ಎಷ್ಟು ಖರೀದಿ ಮಾಡಲಾಗುತ್ತದೆ?; ಮಂಡ್ಯ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಡಿಸೆಂಬರ್ 15ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, ಜನವರಿ 1ರಿಂದ ಮಾರ್ಚ್ 31ರವರೆಗೆ ಭತ್ತ ಹಾಗೂ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ.

ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಓರ್ವ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಪ್ರತಿ ಎಕರೆಗೆ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ವಿವರಣೆ ನೀಡಿದ್ದಾರೆ.

Registration For Ragi And Paddy Purchase In Mandya From December 15

ಎಷ್ಟು ದರ ನಿಗದಿ?; ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‌ಗೆ 2040 ರೂ, ಭತ್ತ-ಗ್ರೇಡ್ 'ಎ' ಗೆ 2060 ರೂ. ದರವನ್ನು ನಿಗದಿಪಡಿಸಲಾಗಿದೆ. ರಾಗಿ ಪ್ರತಿ ಕ್ವಿಂಟಲ್‌ಗೆ 3578 ರೂ. ನಿಗದಿಪಡಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ/ ರಾಗಿ ಖರೀದಿ ಸಂಬಂಧಿಸಿದಂತೆ ಒಟ್ಟು 32 ನೋಂದಣಿ ಕೇಂದ್ರಗಳನ್ನ ತೆರಯಲು ಉದ್ದೇಶಿಸಲಾಗಿದೆ. ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

ಭತ್ತ ಖರೀದಿ ಮಾಡಿದ ಬಳಿಕ ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಬೇಕು. ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತವನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಬ್ಯಾಂಕ್ ಖಾತೆಗೆ ಹಣ ಜಮೆ; ಬೆಂಬಲ ಬೆಲೆ ಯೋಜನೆಯಡಿ ಭತ್ತ ಹಾಗೂ ರಾಗಿಯನ್ನು ಮಾರಾಟ ಮಾಡುವ ರೈತರು ನೋಂದಣಿಗಾಗಿ ಫ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರ ಹಾಗೂ ಅಧಾರ್ ಕಾಡ್೯ ಪ್ರತಿಯನ್ನು ಸಲ್ಲಿಸಬೇಕು. ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತ ಹಾಗೂ ರಾಗಿಯ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ.

ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೊಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮಂಡ್ಯದ ರೈತರು ಜಿಲ್ಲೆಯಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರವನ್ನು ಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಆಗ್ರಹಿಸಿದ್ದರು.

English summary
Good news for Mandya farmers. Registration for Ragi and Paddy purchase in district from December 15th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X