ಮೆಣಸಿನಕಾಯಿ & ದಾಳಿಂಬೆ ಬೆಳೆ ವಿಮಾ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭ: ವಿವರ ಇಲ್ಲಿದೆ
ಬಳ್ಳಾರಿ, ಜೂನ್ 30: ಬಳ್ಳಾರಿ ಜಿಲ್ಲೆಯಲ್ಲಿ ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಸಂತೋಷ ಸಪ್ಪಂಡಿ ತಿಳಿಸಿದ್ದಾರೆ.
ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ, ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯಾಗಬಹುದು.

ಈ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಗ್ರಾಮಪಂಚಾಯಿತಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರವನ್ನು ನೀಡುವುದರ ಮೂಲಕ ರೈತರಿಗೆ ನೆರವಾಗುವುದು ಮರುವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆವಿಮೆ ಯೋಜನೆ ಮುಖ್ಯ ಉದ್ದೇಶವಾಗಿದೆ. ಹಸಿ ಮೆಣಸಿನಕಾಯಿ ಮತ್ತು ದಾಳಿಂಬೆ ಬೆಳೆಗಳು ವಿಮಾ ಯೋಜನೆಯಡಿ ಒಳಪಡುತ್ತದೆ.
ಬಳ್ಳಾರಿ ಜಿಲ್ಲೆಯಲ್ಲಿ ಹಸಿ ಮೆಣಸಿನಕಾಯಿ ಬೆಳೆ ವಿವರ
ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‍ಗೆ ವಿಮಾ ಮೊತ್ತ 71 ಸಾವಿರ ರೂಪಾಯಿ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ 3,550 ರೂಪಾಯಿ ಆಗಿರುತ್ತದೆ.
ಬಳ್ಳಾರಿ ಜಿಲ್ಲೆಯಲ್ಲಿ ದಾಳಿಂಬೆ ಬೆಳೆ ವಿವರ
ಬಳ್ಳಾರಿ, ಕಂಪ್ಲಿ, ಕುರುಗೋಡು, ಸಿರುಗುಪ್ಪ, ಸಂಡೂರು ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿಗಳು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‍ಗೆ ವಿಮಾ ಮೊತ್ತ 1 ಲಕ್ಷ 27 ಸಾವಿರ ರೂಪಾಯಿ ಹಾಗೂ ರೈತರು ಪಾವತಿಸಬೇಕಾದ ವಿಮಾ ಕಂತಿನ ದರ 6,350 ರೂಪಾಯಿ ಆಗಿರುತ್ತದೆ.

ರೈತರು ಅಗತ್ಯ ದಾಖಲೆಗಳೊಂದಿಗೆ ಎರಡು ಬೆಳೆಗಳ ವಿಮೆಗೆ ನೊಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಕುರುಗೋಡು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ: 08392-278177 ಹಾಗೂ ಮೊ.9481305830, ಸಂಡೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(ಜಿಪಂ) ದೂ:08395-260389 ಹಾಗೂ ಮೊ.9740934208, ಕಂಪ್ಲಿ ಮತ್ತು ಸಿರುಗುಪ್ಪದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ಜಿಪಂ) ದೂ:08396-222066 ಹಾಗೂ ಮೊ.9916794371 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.












Click it and Unblock the Notifications