ಜನವರಿ 8 ರಂದು ಗ್ರಾಮೀಣ ಕರ್ನಾಟಕ ಬಂದ್
ಶಿವಮೊಗ್ಗ, ಜನವರಿ 03: ಜನವರಿ 8ಕ್ಕೆ ಅಖಿಲ ಭಾರತ ರೈತ ಸಂಘರ್ಷ ಸಮಿತಿ ರಾಜ್ಯದಾದ್ಯಂತ ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದೆ.
ಶಿವಮೊಗ್ಗ ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಅವರು, ಸುಮಾರು 200 ಕ್ಕೂ ಹೆಚ್ಚು ರೈತ ಸಂಘಟನೆಗಳು ಒಳಗೊಂಡಿರುವ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ರಚನೆಯಾಗಿದೆ ಎಂದರು.
ನಿರ್ದಿಷ್ಟ ಬೆಲೆ, ಸಾಲ ಮನ್ನಾ ಸೇರಿದಂತೆ ರೈತರ ಹಲವು ಬೇಡಿಕೆ ಈಡೇರಿಸಲು ಆಗ್ರಹಿಸಿ ಜನವರಿ 8 ರಂದು ಅಖಿಲ ಭಾರತ ರೈತ ಸಂಘರ್ಷ ಸಮಿತಿಯಿಂದ ಗ್ರಾಮೀಣ ಕರ್ನಾಟಕ ಬಂದ್ ನಡೆಯಲಿದೆ ಎಂದು ತಿಳಿಸಿದರು.

ಅಂದು ಹಳ್ಳಿಗಳಲ್ಲಿ ರೈತರು ತರಕಾರಿ, ಧಾನ್ಯ, ಹಾಲು ಸೇರಿದಂತೆ ಯಾವುದೇ ಉತ್ಪನ್ನ ಮಾರಾಟ ಮಾಡದೇ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ತೊಂದರೆ ಮಾಡಲ್ಲ ಎಂದು ಬಸವರಾಜಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಪ್ರತಿಭಟನೆ ಮೂಲಕ ಋಣಮುಕ್ತ ಕಾಯ್ದೆಗೆ ಆಗ್ರಹಿಸಿ, ಡಾ.ಸ್ವಾಮಿನಾಥನ್ ವರದಿ ಜಾರಿಗಾಗಿ ರಾಜ್ಯದ ಪ್ರವಾಹ ಪೀಡಿತರಿಗೆ ಸೂಕ್ತ ಪರಿಹಾರ ನೀಡಲು ಒತ್ತಾಯಿಸಿ ಬಗರ್ ಹುಕುಂ ಸಕ್ರಮಕ್ಕಾಗಿ, ಭೂ ಸುಧಾರಣಾ ತಿದ್ದುಪಡಿ ಕೈ ಬಿಡಲು ಒತ್ತಾಯಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಡಾ.ಚಿಕ್ಕಸ್ವಾಮಿ, ಹಿಟ್ಟೂರು ರಾಜು, ರಾಮಚಂದ್ರ, ಟಿ.ಎಂ.ಚಂದ್ರಪ್ಪ ಹಾಜರಿದ್ದರು.












Click it and Unblock the Notifications