ರೈತರಿಂದ ಕುಂಬಳಕಾಯಿ ಖರೀದಿ ಮಾಡಿ, ಬಡವರಿಗೆ ನೀಡಿದ ಶಿಕ್ಷಕ
ಮಂಡ್ಯ, ಏಪ್ರಿಲ್ 15: ಲಾಕ್ಡೌನ್ ಘೋಷಣೆ ಆಗಿರುವುದರಿಂದ ರೈತರಿಗೆ ಸಾಕಷ್ಟು ತೊಂದರೆಯಾಗಿದೆ. ಅನೇಕ ರೈತರು ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಆಗದೆ, ತಾವು ಬೆಳೆದ ಬೆಳೆಯನ್ನು ತಾವೇ ನಾಶ ಮಾಡಿದ ಘಟನೆಯೂ ನಡೆದಿದೆ.
ಈ ರೀತಿಯ ಪರಿಸ್ಥಿತಿ ನಡುವೆ ಶಿಕ್ಷಕರೊಬ್ಬರು ರೈತರು ಬೆಳೆದ ಕುಂಬಳಕಾಯಿಯನ್ನು ಕೊಂಡುಕೊಂಡಿದ್ದಾರೆ. ಒಂದು ಲೋಡ್ ಕುಂಬಳಕಾಯಿವನ್ನು ತಮ್ಮ ಹಣ ಕೊಟ್ಟು ಖರೀದಿ ಮಾಡಿದ್ದಾರೆ. ಬೆಳೆಯನ್ನು ಮಾರಾಟ ಮಾಡಲು ಪರದಡುತ್ತಿದ್ದ ರೈತರಿಗೆ ನೆರವಾಗಿದ್ದಾರೆ.
ಈ ಶಿಕ್ಷಕರ ಹೆಸರು ಎಸ್ ರಂಗಸ್ವಾಮಿ. ಕೆ ಆರ್ ಪೇಟೆಯವರು. ಇವರು ಚಿಕ್ಕೊನಳ್ಳಿ ಗ್ರಾಮದ ರೈತರಿಂದ ಕುಂಬಳಕಾಯಿಯನ್ನು ಕೊಂಡುಕೊಂಡಿದ್ದಾರೆ. ಆದರೆ, ಇಷ್ಟೊಂದು ಪ್ರಮಾಣದ ಕುಂಬಳಕಾಯಿ ಇಟ್ಟುಕೊಂಡು ಏನು ಮಾಡುತ್ತಾರೆ ಎನ್ನುವ ಕುತೂಹಲ ಮೂಡಬಹುದು.

ಬರೀ ರೈತರಿಗೆ ಮಾತ್ರವಲ್ಲದೆ, ರಂಗಸ್ವಾಮಿ ಬಡವರಿಗೆ ನೆರವಾಗಿದ್ದಾರೆ. ರೈತರಿಂದ ಪಡೆದ ಕುಂಬಳಕಾಯಿಗಳನ್ನು ಪೌರ ಕಾರ್ಮಿಕರಿಗೆ ಹಾಗೂ ಕೆ ಆರ್ ಪೇಟೆ ಸ್ಲಂ ನಲ್ಲಿ ಇರುವ ಬಡ ಜನರಿಗೆ ವಿತರಣೆ ಮಾಡಿದ್ದಾರೆ.
ಸರ್ಕಾರಿ ಶಾಲೆಯ ಶಿಕ್ಷಕ ರಂಗಸ್ವಾಮಿಯವರ ಔದಾರ್ಯಕ್ಕೆ ಶರಣು. https://t.co/9x0FYGPFYn
— S.Suresh Kumar, Minister - Govt of Karnataka (@nimmasuresh) April 13, 2020
ಶಿಕ್ಷಕ ರಂಗಸ್ವಾಮಿ ಅವರ ಕೆಲಸಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅಶ್ವಿನಿ ಎಂ ಎಂಬ ಪತ್ರಕರ್ತರೊಬ್ಬರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ರಂಗಸ್ವಾಮಿ ಅವರನ್ನು ಟ್ವಿಟ್ಟರ್ ಖಾತೆಯಲ್ಲಿ ಬೇಷ್ ಎಂದಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications