ಬೀಜ, ರಸಗೊಬ್ಬರದ ದರ ಪ್ರಕಟಿಸಲು ಖಡಕ್ ಸೂಚನೆ
ಬೆಂಗಳೂರು, ಜೂನ್ 03: ನೈಋತ್ಯ ಮುಂಗಾರು ಹಂಗಾಮು ಆರಂಭವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿದೆ. ರೈತರಿಗೆ ನೆರವಾಗಲು ಸಾಕಷ್ಟು ಬೀಜ, ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಆದರೆ ದರಗಳನ್ನು ಏರಿಕೆ ಮಾಡಲಾಗುತ್ತಿದೆ ಎಂಬ ಆರೋಪವಿದೆ.
ಮುಂಗಾರು ಹಂಗಾಮು 2024ರ ಬಿತ್ತನೆ ಆರಂಭಗೊಂಡಿದ್ದು, ಸಾಕಷ್ಟು ಬೀಜ, ರಸಗೊಬ್ಬರ ದಾಸ್ತಾನು ಲಭ್ಯವಿರುತ್ತದೆ. ರೈತರಿಗೆ ಗುಣಮಟ್ಟದ ಬೀಜ, ರಸಗೊಬ್ಬರವನ್ನು ವಿತರಿಸಬೇಕು, ಕೃತಕ ಅಭಾವ ಸೃಷ್ಟಿಸುವ ಅಥವಾ ನಿಗದಿತ ದರಕ್ಕಿಂತ ಹೆಚ್ವಿನ ದರ ಪಡೆಯುವ ವರ್ತಕರು ಮತ್ತು ವಿತರಕರ ಲೈಸೆನ್ಸ್ ರದ್ದುಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳು ಈಗಾಗಲೇ 2024-25 ನೇ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ಧತೆಗಾಗಿ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳ ಸಗಟು ವ್ಯಾಪಾರಿಗಳ ಮತ್ತು ವಿತರಕರ ಸಭೆಯನ್ನು ನಡೆಸಿ, ಹಲವು ಸೂಚನೆಗಳನ್ನು ಕೊಟ್ಟಿದ್ದಾರೆ.
ದರಪಟ್ಟಿ ಪ್ರಕಟಿಸಲು ಸೂಚನೆ: ವಿವಿಧ ಜಿಲ್ಲೆಗಳಲ್ಲಿ ಮಳೆ ಆರಂಭಗೊಂಡ ಬಳಿಕ ಮುಂಗಾರು ಹಂಗಾಮು ಬಿತ್ತನೆ ಆರಂಭಗೊಂಡಿರುತ್ತದೆ. ರೈತರು ಬಿತ್ತನೆ ಬೀಜ ಹಾಗೂ ರಸಗೊಬ್ಬರ ಖರೀದಿಗೆ ಅಂಗಡಿಗಳಿಗೆ ಆಗಮಿಸುತ್ತಿದ್ದಾರೆ. ಕಳೆದ ವರ್ಷ ಬರಗಾಲದಿಂದ ರೈತರು ತತ್ತರಿಸಿದ್ದರು. ಈ ಬಾರಿ ಉತ್ತಮ ಮಳೆಯ ಮುನ್ಸೂಚನೆಯಿದೆ.
ಆದ್ದರಿಂದ ರೈತರು ಉತ್ಸಾಹದಲ್ಲಿಯೇ ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಆದ್ದರಿಂದ ರೈತರಿಗೆ ಉತ್ತಮ ಗುಣಮಟ್ಟದ ಬೀಜ ವಿತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ವರ್ತಕರಿಗೆ ಎಚ್ಚರಿಕೆ ನೀಡಲಾಗಿದೆ.
ಬೀಜ ವಿತರಣಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು. ನಿಗದಿತ ದರಕ್ಕಿಂತ ಹೆಚ್ಚಿನ ದರ ಪಡೆದುಕೊಂಡರೆ ವರ್ತಕರ ನೋಂದಣಿಯನ್ನು ರದ್ದುಗೊಳಿಸಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಹಾಗೆಯೇ ರಸಗೊಬ್ಬರ ಲಭ್ಯತೆ ಹಾಗೂ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಹೆಚ್ಚುವರಿ ಹಣ ಪಡೆದರೆ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಸಾರಿಗೆ ವೆಚ್ಚ ಮತ್ತಿತರ ವೆಚ್ಚಗಳ ನೆಪವೊಡ್ಡಿ ರೈತರಿಂದ ಹೆಚ್ಚಿನ ಹಣ ಪಡೆದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಈಗಾಗಲೇ ಸಾಕಷ್ಟು ರಸಗೊಬ್ಬರ ಅಥವಾ ಬೀಜ ದಾಸ್ತಾನು ಮಾಡಲಾಗಿದೆ. ಆದರೆ ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಮಳೆ ಆರಂಭವಾಗಿರುವ ಹಿನ್ನಲೆಯಲ್ಲಿ ರೈತರು ಏಕಕಾಲಕ್ಕೆ ಬೀಜ ವಿತರಣಾ ಕೇಂದ್ರಗಳಿಗೆ ಆಗಮಿಸಿದರೆ ಗೊಂದಲ ಉಂಟಾಗಬಹುದು. ಆದ್ದರಿಂದ ಟೋಕನ್ ವ್ಯವಸ್ಥೆ ಮಾಡುವ ಮೂಲಕ ಪ್ರತಿಯೊಬ್ಬರಿಗೂ ಅಗತ್ಯಕ್ಕೆ ಅನುಸಾರ ಬೀಜ, ರಸಗೊಬ್ಬರವನ್ನು ಪೂರೈಸಬೇಕು ಎಂದು ಸೂಚನೆ ನೀಡಲಾಗಿದೆ.
ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಾಕಾಷ್ಟು ದಾಸ್ತಾನು ಇರುತ್ತದೆ. ಸರ್ಕಾರದಿಂದ ವಿವಿಧ ಬಗೆಯ ಬಿತ್ತನೆ ಬೀಜಗಳಿಗೆ ನಿಗದಿಪಡಿಸಲಾಗಿರುವ ದರಗಳ ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral











Click it and Unblock the Notifications