ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ದೇಶದ್ರೋಹ' ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಶಿ ತರೂರ್, ಪತ್ರಕರ್ತ ಸರ್ದೇಸಾಯಿ

|
Google Oneindia Kannada News

ನವದೆಹಲಿ, ಫೆಬ್ರವರಿ 3: ಗಣರಾಜ್ಯೋತ್ಸವ ದಿನದಂದು ರೈತರ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ವೇಳೆ ಯುವಕನೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡುವ ಟ್ವೀಟ್ ಮಾಡಿದ್ದಕ್ಕಾಗಿ ವಿವಿಧ ರಾಜ್ಯಗಳಲ್ಲಿ ತಮ್ಮ ಮೇಲೆ ಎಫ್‌ಐಆರ್ ದಾಖಲಿಸಿರುವುದರ ವಿರುದ್ಧ ಕಾಂಗ್ರೆಸ್‌ನ ಸಂಸದ ಶಶಿ ತರೂರ್ ಮತ್ತು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜನವರಿ 26ರಂದು ಟ್ರ್ಯಾಕ್ಟರ್ ಮಗುಚಿ ಮೃತಪಟ್ಟಿದ್ದ ಯುವಕ ಪೊಲೀಸರ ಗುಂಡೇಟಿನಿಂದ ಸತ್ತಿರುವುದು ಎಂದು ಟ್ವೀಟ್ ಮಾಡಿದ್ದಕ್ಕಾಗಿ ವಿವಿಧ ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಾಗಿವೆ. ಪತ್ರಕರ್ತರಾದ ಮೃಣಾಲ್ ಪಾಂಡೆ, ಜಾಫರ್ ಅಘಾ, ಪರೇಶ್ ನಾಥ್ ಮತ್ತು ಅನಂತ್ ನಾಥ್ ಅವರೂ ಕೂಡ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಶಶಿ ತರೂರ್, ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣಶಶಿ ತರೂರ್, ಆರು ಪತ್ರಕರ್ತರ ವಿರುದ್ಧ ದೇಶದ್ರೋಹ ಪ್ರಕರಣ

ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ಸಂದರ್ಭದಲ್ಲಿ 'ಸುಳ್ಳು ವರದಿಗಾರಿಕೆ' ಮತ್ತು 'ಅಸಾಮರಸ್ಯ ಹರಡುವಿಕೆ' ಕೃತ್ಯ ಮಾಡಿದ್ದಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹಾಗೂ ಆರು ಮಂದಿ ಪತ್ರಕರ್ತರ ವಿರುದ್ಧ ಬೆಂಗಳೂರು, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶಗಳಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು. ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ದೇಶದ್ರೋಹ, ಅಪರಾಧ ಸಂಚು ಮತ್ತು ವೈರತ್ವಕ್ಕೆ ಪ್ರಚೋದನೆ ನೀಡುವ ಪ್ರಕರಣಗಳನ್ನು ದಾಖಲಿಸಲಾಗಿದೆ.

Shashi Tharoor, Rajdeep Sardesai Move Supreme Court Against FIRs For Tweet On Violence

ಬೆಂಗಳೂರಿನಲ್ಲಿ ಒಂದು, ಉತ್ತರ ಪ್ರದೇಶದ ನೋಯ್ಡಾದಲ್ಲಿ ಒಂದು, ಮಧ್ಯಪ್ರದೇಶದ ಭೋಪಾಲ್, ಹೊಸಂಗಾಬಾದ್, ಮುಲ್ತೈ ಮತ್ತು ಬೇಟುಲ್‌ಗಳಲ್ಲಿ ನಾಲ್ಕು ಸೇರಿದಂತೆ ಒಟ್ಟು ಆರು ಎಫ್‌ಐಆರ್ ದಾಖಲಾಗಿರುವುದು ವರದಿಯಾಗಿದೆ.

ಶಶಿ ತರೂರ್ ಮತ್ತು ಪತ್ರಕರ್ತರಾದ ರಾಜ್‌ದೀಪ್ ಸರ್ದೇಸಾಯಿ, ಮೃಣಾಲ್ ಪಾಂಡೆ, ಜಾಫರ್ ಅಘಾ, ವಿನೋದ್ ಜೋಸ್, ಪರೇಶ್ ನಾಥ್ ಮತ್ತು ಅನಂತ್ ನಾಥ್

English summary
Shashi Tharoor, Rajdeep Sardesai and four other journalists moves to Supreme Court against FIR's for tweet on youth's death during farmers tractor rally on Republic Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X