ಚಾಮರಾಜನಗರ ಜಿಲ್ಲೆಯಲ್ಲಿ ಹತ್ತಿ ಬೀಜಕ್ಕಾಗಿ ಪರದಾಟ, ಆಕ್ರೋಶಗೊಂಡ ಅನ್ನದಾತ

ಚಾಮರಾಜನಗರ, ಏಪ್ರಿಲ್‌, 03: ಪೂರ್ವ ಮುಂಗಾರು ಕೃಷಿಗೆ ಜಿಲ್ಲೆಯ ರೈತರು ಅಣಿಯಾಗುತ್ತಿದ್ದು, ಈಗಾಗಲೇ ಭೂಮಿ ಹದ ಮಾಡಿ ಮಳೆಗಾಗಿ ಕಾಯುತ್ತಿದ್ದಾರೆ. ಈ ಸಮಯದಲ್ಲಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯಲ್ಲಿ ಬಿತ್ತನೆ ಬೀಜ ಸಿಗದೇ ರೈತರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಎರಡು ವಾರಗಳಿಂದ ಜಿಲ್ಲೆಯಲ್ಲಿ ಸುಡು ಬಿಸಿಲು ಹೆಚ್ಚಾಗಿದೆ. ಇದರ ನಡುವೆಯೂ ಕೂಡ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಅಲ್ಲಲ್ಲಿ ಜಿನುಗು ಮಳೆಯಾಗಿದೆ. ಆದ್ದರಿಂದ ಇಲ್ಲಿನ ರೈತರು ಮುಂಗಾರು ಪೂರ್ವ ಮಳೆಯ ನಿರೀಕ್ಷೆಯಲ್ಲಿ ಭೂಮಿಯನ್ನು ಹದಗೊಳಿಸಿ ಬಿತ್ತನೆ ಮಾಡಲು ತಯಾರಾಗುತ್ತಿದ್ದು, ಇದೀಗ ಹತ್ತಿ ಬೀಜ ಕೊರತೆಯಿಂದಾಗಿ ಅನ್ನದಾತರು ಆತಂಕಕ್ಕೆ ಒಳಗಾಗಿದ್ದಾರೆ.

Shortage of cotton seeds in Chamarajanagar district, farmers worried

ಹತ್ತಿ ಬೀಜಕ್ಕಾಗಿ ಪರದಾಟ

ಕೇವಲ ಎರಡೇ ತಾಸಿಗೆ ಬೇಗೂರಿನ ಬೀಜ ಮಾರಾಟ ಮಳಿಗೆ ಬಾಗಿಲು ಮುಚ್ಚಿದ್ದು, ನೂರಾರು ಜನ ರೈತರು ಹತ್ತಿ ಬೀಜ ಸಿಗದ ಕಾರಣ ಅಂಗಡಿ ಮಾಲೀಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಅಂಗಡಿ ಮಾಲೀಕ ತನಗೆ ಬೇಕಾದವರಿಗೆ ಬೀಜ ಮಾರಾಟ ಮಾಡಿ ಬಾಗಿಲು ಮುಚ್ಚಿದ್ದಾನೆ ಎಂಬ ಆರೋಪ ಕೇಳಿಬಂದೆ. ಇದರಿಂದ ಆಕ್ರೋಶಗೊಂಡ ರೈತರು ಅಂಗಡಿ ಮಾಲೀಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದೆ.

ನೂರಾರು ಮಂದಿ ರೈತರು ಬೀಜ ಸಿಗದೇ ಸ್ಥಳದಲ್ಲೇ ಬೀಡು ಬಿಟ್ಟುವುದರಿಂದ ಪೊಲೀಸರು ದೌಡಾಯಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾಗಿದ್ದಾರೆ. ರೈತರಿಗೆ ಮಳೆ ಬಂದಂತಹ ಸಂದರ್ಭದಲ್ಲಿ ಬಿತ್ತನೆ ಬೀಜ ಸಿಗುತ್ತಿಲ್ಲ, ಮತ್ತೊಂದೆಡೆ ಬೆಳೆ ಬಂದರೆ ಬೆಲೆ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

ದೊಡ್ಡ ನಗರಗಳತ್ತ ಮುಖ ಮಾಡಿದ ರೈತರು

ಮತ್ತೊಂದೆಡೆ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ರಾಯಚೂರು ಜಿಲ್ಲೆಯಾದ್ಯಾಂತ ಉತ್ತಮ ಮಳೆಯಾಗಿದೆ. ಆದರೆ ಹತ್ತಿ ಬೆಳೆಗೆ ಉತ್ತಮ ಬೆಂಬಲ ಬೆಲೆ ಹಾಗೂ ನಿರೀಕ್ಷಿತ ಇಳುವರಿ ಬಾರದ ರೈತರು ನಷ್ಟದ ಸುಳಿಗೆ ಸಿಲುಕಿದ್ದಾರೆ. ಸಾಲ ತೀರಿಸಲು ಆಗಂತಹ ಪರಿಸ್ಥಿತಿ ನಿರ್ಮಾಣ ಆಗಿದ್ದು, ರೈತರು ದೊಡ್ಡ ನಗರಗಳತ್ತ ಮುಖ ಮಾಡಿದ್ದಾರೆ.

Shortage of cotton seeds in Chamarajanagar district, farmers worried

ಜಿಲ್ಲೆಯಾದ್ಯಂತ ವಿಧಾನಸಭೆ ಚುನಾವಣೆ ಕಾವು ಹೆಚ್ಚುತ್ತಿರುವ ಬೆನ್ನಲ್ಲೇ ಜನರು ದುಡಿಮೆ ಅರಸಿ ನಗರಗಳೆಡೆಗೆ ಗುಳೆ ಹೋಗುತ್ತಿದ್ದಾರೆ. ಇನ್ನೊಂದೆಡೆ ತಮ್ಮ ಊರುಗಳಲ್ಲಿ ಮಕ್ಕಳನ್ನು ನೋಡಿಕೊಳ್ಳಲು ಯಾರೂ ಇಲ್ಲದೇ ಇರುವುದರಿಂದ ಮಕ್ಕಳನ್ನೂ ಜೊತೆಯಲ್ಲೇ ಕರೆದೊಯ್ಯುವ ಅನಿವಾರ್ಯತೆ ಬಂದೊದಗಿದೆ. ಇದರಿಂದ ಮಕ್ಕಳ ಕಲಿಕೆಗೂ ತೊಂದರೆ ಆಗುತ್ತಿದೆ.

ಉತ್ತಮ ಬೆಲೆ ಸಿಗದೇ ಕಂಗಾಲಾದ ಹತ್ತಿ ಬೆಳೆಗಾರರು

ಜಿಲ್ಲೆಯಾದ್ಯಂತ ಈ ವರ್ಷ 2,06,299 ಹೆಕ್ಟೇರ್ ಪ್ರದೇಶದಲ್ಲಿ ರೈತರು ಹತ್ತಿ ಬೆಳೆದಿದ್ದರು. ಪ್ರಾರಂಭದಲ್ಲಿ ಉತ್ತಮ ಇಳುವರಿ ಬಂದಿತ್ತು. ಆದರೆ ಕೊನೆ ಹಂತದಲ್ಲಿ ಬೂದು ರೋಗದಿಂದ ಇಳುವರಿ ಕುಂಠಿತಗೊಂಡಿತು. ಅಲ್ಲದೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗದ ಕಾರಣ ಸಾಲ ತೀರಿಸುವ ದಾರಿ ಕಾಣದೆ ಕಂಗಾಲಾಗಿರುವ ರೈತರು ಗಂಟುಮೂಟೆ ಕಟ್ಟಿ ಮಹಾನಗರಗಳತ್ತ ತೆರಳುತ್ತಿದ್ದಾರೆ.

2023ರ ವಿಧಾನಸಭೆ ಚುನಾವಣೆ ಪ್ರಚಾರದ ಕಾವು ದಿನೇದಿನೇ ಹೆಚ್ಚುತ್ತಿದೆ. ಮತ್ತೊಂದೆಡೆ ಗ್ರಾಮೀಣ ಪ್ರದೇಶದ ಜನರು ಕೂಲಿ ಕೆಲಸಕ್ಕಾಗಿ ಊರು ತೊರೆಯುತ್ತಿದ್ದಾರೆ. ನರೇಗಾ ಅಡಿ ಕೆಲಸ ನೀಡಿದರೂ ಸಂಬಳ ಮಾತ್ರ ಯಾವುದಕ್ಕೂ ಸಾಲುವುದಿಲ್ಲ. ಹೀಗಾಗಿ ಗುಳೆ ಅನಿವಾರ್ಯ ಎಂದು ಗ್ರಾಮೀಣ ಭಾಗದ ಜನರು ಅಳಲು ತೋಡಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+