ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 11: ರಾಜ್ಯದ ರೈತರಿಗೆ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ನವೆಂಬರ್ ತಿಂಗಳ ಮಧ್ಯ ಭಾಗಕ್ಕೆ ಬರುತ್ತಿದ್ದರೂ ರಾಜ್ಯದಲ್ಲಿ ಮಳೆ ನಿಲ್ಲುತ್ತಿಲ್ಲ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳುಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಂದಿದೆ. ಇದರಿಂದ ಕೊಯಿಲಿಗೆ ಬಂದ ಬೆಳೆಗಳು ಹೊಲ, ಗದ್ದೆಗಳಲ್ಲಿ ಕೊಳೆತು ಹೋಗಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ವಾಡಿಕೆಯಂತೆ ಸಾಮಾನ್ಯವಾಗಿ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಆದರೆ ಕೊರೊನಾ ಸಮಸ್ಯೆ ಬಂದ ನಂತರ ಜನರು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆದರೆ ಮಳೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡಿ ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಆಗ್ರಹಿಸಿದ್ದಾರೆ.

 ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ

ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ

ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಅಂದರೆ 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ 1.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹೆಚ್ಚಾಗಿ ಬಿತ್ತನೆಯಾಗಿದೆ.

ಮುಂಗಾರು ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದವುಗಳ ಕೊಯಿಲಿನ ಕೆಲಸ ನಡೆಯುತ್ತಿದೆ. ಆದರೆ ಸೆಪ್ಟೆಂಬರ್ ತಿಂಗಳಿನಲ್ಲಿ ಪ್ರಾರಂಭವಾದ ಮಳೆ ಇನ್ನೂ ನಿಂತಿಲ್ಲ. ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ.

 ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ

ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ

ಜೊತೆಗೆ ಸರಿಯಾದ ಸಮಯಕ್ಕೆ ರೈತರಿಗೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ. ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಅಂತ ಪತ್ರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ. ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ

ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ

ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಆದರೆ ಕೃಷಿ ಇಲಾಖೆಯ ಮಾಹಿತಿಗಳಲ್ಲಿ ಕಳೆದ ಒಂದೂವರೆ ತಿಂಗಳಿಂದ ಅತಿ ಹೆಚ್ಚು ಮಳೆ ಬಿದ್ದು ಹಾನಿಯಾಗಿರುವ ಜಿಲ್ಲೆಗಳ ಮಾಹಿತಿಯೇ ಇಲ್ಲ. ಮಲೆನಾಡು, ಕರಾವಳಿ ಜಿಲ್ಲೆಗಳ ಅಡಿಕೆ, ಮೆಣಸು, ಕಾಫಿಗೆ ಆಗಿರುವ ನಷ್ಟದ ಮಾಹಿತಿ ಇಲ್ಲ ಹೀಗಾಗಿ ಈ ಬಗ್ಗೆ ಗಮನಹರಿಸಿ ಪರಿಹಾರ ನೀಡಬೇಕು ಅಂತ ಸಿದ್ದರಾಮಯ್ಯ ಪತ್ರದಲ್ಲಿ ಆಗ್ರಹಿಸಿದ್ದಾರೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆಯೇ ನಡೆಸಿಲ್ಲ. ಇನ್ನು ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳ ಬೆಳೆಗಳಲ್ಲಿ ಜುಲೈ ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದ ರೈತರು ವ್ಯಾಪಕ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಅನೇಕ ಕಡೆ ಬರದ ಸಮಸ್ಯೆಯೂ ಇದೆ.

 ಕೇಂದ್ರ ಸರ್ಕಾರ ಸಮರ್ಪಕ ಪರಿಹಾರ ನೀಡುತ್ತಿಲ್ಲ

ಕೇಂದ್ರ ಸರ್ಕಾರ ಸಮರ್ಪಕ ಪರಿಹಾರ ನೀಡುತ್ತಿಲ್ಲ

ಇಷ್ಟೆಲ್ಲ ಆದರೂ ಸಹ ಸರ್ಕಾರ ಕೈಕಟ್ಟಿ ಕುಳಿತಿದೆ. ನಷ್ಟವಾಗಿರುವ ರೈತರ ಬೆಳೆಗಳನ್ನು ಸಮರ್ಪಕವಾಗಿ ಸಮೀಕ್ಷೆ ಮಾಡುವುದಾಗಲಿ, ಪರಿಹಾರ ನೀಡುವುದಾಗಲಿ ಮಾಡುತ್ತಿಲ್ಲ. ಕೇಂದ್ರ ಸರ್ಕಾರವೂ ಕೂಡ ಸಮರ್ಪಕ ಪರಿಹಾರ ನೀಡುತ್ತಿಲ್ಲ. 2019-20, 2020-21ರ ವರ್ಷಗಳಲ್ಲಿ ಸುಮಾರು 1.5ರಿಂದ 2 ಲಕ್ಷ ಕೋಟಿ ರೂಪಾಯಿಗಳವರೆಗೆ ನಷ್ಟವಾಗಿತ್ತು. ಆದರೆ ಕೇಂದ್ರ ಸರ್ಕಾರ 2019-20ರಲ್ಲಿ 1652.85, 2020-21ರಲ್ಲಿ 1328.15 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿದೆ. ಅಂದರೆ ಕೇವಲ 2981.15 ರೂ.ಗಳು ಮಾತ್ರ. 2021-22ರ ನಷ್ಟಕ್ಕೆ ಒಂದು ರೂಪಾಯಿಯನ್ನು ನೀಡಿಲ್ಲ ಎಂದು ಆರೋಪಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯಗಳೆರಡೂ ಈ ಮಟ್ಟದ ನಿರ್ಲಕ್ಷ್ಯ ತೋರಿಸುವುದು ಅತ್ಯಂತ ಅಮಾನವೀಯ ನಡವಳಿಕೆಯಾಗಿದೆ. ಕೊರೊನಾದಿಂದ ಸಂಕಟದಲ್ಲಿರುವ ರೈತಾಪಿ ಸಮುದಾಯದಲ್ಲಿ ಆತ್ಮಹತ್ಯೆಗಳ ಪ್ರಮಾಣ ಮತ್ತೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ತೊಂದರೆಗೊಳಗಾಗಿರುವ ರೈತರ ಬೆಳೆಗಳನ್ನು ಈ ಕೂಡಲೇ ಸಮರ್ಪಕವಾಗಿ ಸಮೀಕ್ಷೆ ಮಾಡಿಸಿ ಪರಿಹಾರ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+