ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲಮನ್ನಾಕ್ಕೆ ಪ್ರಧಾನಿಗೆ ಸಿಎಂ ಪತ್ರ
ಬೆಂಗಳೂರು, ಜುಲೈ 4: ವಾಣಿಜ್ಯ, ಖಾಸಗಿ ಹಾಗೂ ಗ್ರಾಮೀಣ ಬ್ಯಾಂಕ್ ಗಳಲ್ಲಿರುವ ರಾಜ್ಯದ 28.73 ಲಕ್ಷ ರೈತರ ರೂ.42 ಸಾವಿರ ಕೋಟಿ ಬೆಳೆ ಸಾಲವನ್ನು ಮನ್ನಾ ಮಾಡುವಂತೆ ಕೋರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
"ಸಹಕಾರಿ ಬ್ಯಾಂಕ್ ಗಳಲ್ಲಿನ 22.27 ಲಕ್ಷ ರೈತರ ರೂ. 50 ಸಾವಿರವರೆಗಿನ ರೂ. 8,165 ಕೋಟಿ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಿದೆ. ರಾಜ್ಯದ ರೈತರ ಒಟ್ಟು ಸಾಲದಲ್ಲಿ ಕೃಷಿ ಸಹಕಾರಿ ಬ್ಯಾಂಕ್ ಗಳಿಂದ ಪಡೆದಿರುವ ಸಾಲ ಶೇ.20 ಮಾತ್ರ. ಉಳಿದ ಶೇ.80ರಷ್ಟು ಸಾಲವನ್ನು ವಾಣಿಜ್ಯ, ಖಾಸಗಿ ಹಾಗೂ ಗ್ರಾಮೀಣ ಬ್ಯಾಂಕ್ ಗಳಲ್ಲಿ ರೈತರು ಪಡೆದಿದ್ದಾರೆ," ಎಂಬ ಮಾಹಿತಿಯನ್ನು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

"ಇವರ ಹಿತವನ್ನು ಕಾಪಾಡಲು ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಬೇಕು," ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಈ ಹಿಂದೆಯೂ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರಧಾನಿಯವರಿಗೆ ಪತ್ರ ಬರೆಯಲಾಗಿತ್ತು.

ರಾಜ್ಯದ ರೈತರು ಸತತ ಆರು ವರ್ಷದಿಂದ ಬರಗಾಲವನ್ನು ಎದುರಿಸಿದ್ದು ಕಳೆದ ಎರಡು ವರ್ಷದಿಂದ ಬರ ಮತ್ತಷ್ಟು ತೀವ್ರವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಶೀಘ್ರವೇ ರಾಜ್ಯದ ರೈತರ ನೆರವಿಗೆ ಧಾವಿಸಬೇಕು ಎಂದು ಪಾತ್ರದ ಮೂಲಕ ಪ್ರಧಾನಿಯವರಿಗೆ ಮುಖ್ಯಮಂತ್ರಿಗಳು ಮನವಿ ಸಲ್ಲಿಸಿದ್ದಾರೆ.
Having provided relief to farmers by waiving short term farm loans of co-ops, Have now asked @PMOIndia to do the same for commercial banks. pic.twitter.com/WdajQM8poL
— CM of Karnataka (@CMofKarnataka) July 4, 2017












Click it and Unblock the Notifications