ರೈತರಿಗೆ ಸೋಲಾರ್ ಪಂಪ್‌ಸೆಟ್; ಸರ್ಕಾರದ ಮಹತ್ವದ ಆದೇಶ
ಬೆಂಗಳೂರು, ನವೆಂಬರ್ 08; ಕರ್ನಾಟಕ ಸರ್ಕಾರ ಅನಧಿಕೃತ ನೀರಾವರಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವೊಂದನ್ನು ಕೈಗೊಂಡಿದೆ. ಈ ಕುರಿತು ಆದೇಶವನ್ನು ಸಹ ಹೊರಡಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶನಾನುಸಾರ ಮತ್ತು ಅವರ ಹೆಸರಿನಲ್ಲಿ ವಿನೋದ್ ಕುಮಾರ್ ಡಿ. ಎಂ. ಸರ್ಕಾರದ ಅಧೀನ ಕಾರ್ಯದರ್ಶಿ, ಇಂಧನ ಇಲಾಖೆ. ಈ ಕುರಿತು ಆದೇಶ ಹೊರಡಿಸಿದ್ದಾರೆ. ನೀರಾವರಿ ಪಂಪ್‌ಸೆಟ್‌ಗಳಿಗೆ stand-alone/ off grid ಸೋಲಾರ್ ಪಂಪ್‌ಸೆಟ್‌ಗಳನ್ನು ಒದಗಿಸುವ ಮೂಲಕ ನೀರಾವರಿ ಪಂಪ್‌ಸೆಟ್‌ಗಳನ್ನು ಬೆಂಬಲಿಸುವುದು ಮತ್ತು IP set ಫೀಡರ್‌ಗಳನ್ನು ಸೌರೀಕರಣಗೊಳಿಸುವ ಬಗ್ಗೆ ಎಂಬ ವಿಷಯವನ್ನು ಆದೇಶ ಒಳಗೊಂಡಿದೆ.

ಅನಧಿಕೃತ ನೀರಾವರಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಪ್ರಸ್ತಾವನೆಯನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಚರ್ಚೆಯ ನಂತರ, ಈ ಹಿಂದೆ ಅನಧಿಕೃತ ನೀರಾವರಿ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸುವ ಪದ್ಧತಿಯನ್ನು ಕೂಡಲೇ ಬದಲಿಸಿ, ಹೊಸದಾಗಿ ಪದ್ಧತಿಯನ್ನು ಜಾರಿಗೆ ತರಲು ಸಚಿವ ಸಂಪುಟವು ತೀರ್ಮಾನಿಸಿತು. ಅದರಂತೆ ಈ ಆದೇಶವನ್ನು ಹೊರಡಿಸಲಾಗಿದೆ.
ಆದೇಶದ ವಿವರ; ರಾಜ್ಯದಲ್ಲಿ ನೀರಾವರಿ ಪಂಪ್‌ಸೆಟ್‌ಗಳನ್ನು ವಿದ್ಯುತ್ ಜಾಲಕ್ಕೆ ವ್ಯವಸ್ಥಿತವಾಗಿ ಸೇರ್ಪಡೆಗೊಳಿಸಲು ಮತ್ತು ಸೌರ ವಿದ್ಯುತ್ ಅನ್ನು ಸಮರ್ಪಕವಾಗಿ ಬಳಸಲು stand-alone/ off grid ಸೋಲಾರ್ ಪಂಪ್‌ಸೆಟ್‌ಗಳನ್ನು ಹಾಗೂ IP set ಫೀಡರ್‌ಗಳ ಸೌರೀಕರಣವನ್ನು ಅನುಷ್ಠಾನಗೊಳಿಸಿ ರೈತರ ಪಂಪ್‌ಸೆಟ್‌ಗಳಿಗೆ ಹಗಲಿನ ವೇಳೆ ವಿದ್ಯುತ್ ಸೌಕರ್ಯ ಕಲ್ಪಿಸಲು ಈ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಿದೆ ಎಂದು ಹೇಳಿದೆ.
* ವಿದ್ಯುತ್ ಸರಬರಾಜು ಕಂಪನಿಗಳು 2015 ರಿಂದ ಈಚೆಗೆ IP ಸೆಟ್‌ಗಳನ್ನು ಸಕ್ರಮಗೊಳಿಸಿ, ಮೂಲಸೌಕರ್ಯ ರಚಿಸಲು ಕೈಗೊಂಡಿರುವ ಕ್ರಮಕ್ಕಾಗಿ ಘಟನೋತ್ತರ ಅನುಮೋದನೆ ನೀಡಿದೆ.
* ವಿದ್ಯುತ್ ಸರಬರಾಜು ಕಂಪನಿಗಳು 2015 ರಿಂದ ಈಚೆಗೆ ಬಂಡವಾಳ ವೆಚ್ಚದಲ್ಲಿ ಸಕ್ರಮಗೊಂಡ/ ಸಾಮಾನ್ಯ IP ಸೆಟ್‌ಗಳಿಗೆ ವಿದ್ಯುತ್ ಮೂಲಸೌಕರ್ಯ ಕಲ್ಪಿಸಿರುವುದಕ್ಕೆ ಘಟನೋತ್ತರ ಅನುಮೋದನೆ ನೀಡಿದೆ.
* ವಿದ್ಯುತ್ ಸರಬರಾಜು ಕಂಪನಿಗಳು ಸಕ್ರಮಗೊಳಿಸಿದ ಕೃಷಿ ಪಂಪ್‌ಸೆಟ್‌ಗಳಿಗೆ 2022-23 ಮತ್ತು 2023-24 ರಲ್ಲಿ ಟೆಂಡರ್ ಮೂಲಕ ಮೂಲಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಟೆಂಡರ್ ಕರೆಯಲಾದ ಅಂದಾಜುಪಟ್ಟಿಯನ್ನು ಪುನರ್ ಪರಿಶೀಲಿಸಿ, ಪಂಪ್‌ಸೆಟ್‌ಗಳು ಹಾಲಿ ಇರುವ ವಿದ್ಯುತ್ ಜಾಲದಿಂದ 500 ಮೀಟರ್‌ಯಿಂದಾಚೆಯಿದ್ದಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವುದು ಮತ್ತು 500 ಮೀಟರ್ ಒಳಗಿರುವ ಪಂಪ್‌ಸೆಟ್‌ಗಳಿಗೆ ಕನಿಷ್ಠ ಅವಶ್ಯಕತೆಗೆ ತಕ್ಕಂತೆ ಅನುಷ್ಠಾನಗೊಳಿಸಲು ಕ್ರಮವಹಿಸುವುದು.
* ದಿನಾಂಕ 22/9/2023ರೊಳಗೆ ನೋಂದಾಯಿಸಲ್ಪಟ್ಟ IP set ಸಂಖ್ಯೆಗಳನ್ನು ಕೂಡಲೇ ಧೃಡಪಡಿಸಿಕೊಂಡು ಟೆಂಡರ್ ಕರೆಯಬೇಕಾದ ಕಾಮಗಾರಿಗಳನ್ನು ನಿಯಮಾನುಸಾರ ಕ್ರಮವಹಿಸಲು ಅನುಮೋದಿಸಿದೆ.
* ಈಗಾಗಲೇ ನೋಂದಣಿಗೊಂಡು ಮೂಲಸೌಕರ್ಯ ರಚನೆಗೆ ಕಾಯುತ್ತಿರುವ ಅಥವಾ ಹೊಸದಾಗಿ ನೋಂದಣಿಗೊಳ್ಳುವ ಪಂಪ್‌ಸೆಟ್‌ಗಳು, ವಿದ್ಯುತ್ ಜಾಲದಿಂದ 500 ಮೀಟರ್‌ಯಿಂದಾಚೆ ಇದ್ದಲ್ಲಿ, stand-alone/ off-grid solar ಪಂಪ್‌ಸೆಟ್ ಅಳವಡಿಸಲು ಸೂಚಿಸಿದೆ.
* ಸೌರ ಪಂಪ್‌ಸೆಟ್‌ಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರದಿಂದ ಶೇ.30 ರಷ್ಟು ಸಹಾಯಧನ ಅಲ್ಲದೆ ರಾಜ್ಯ ಸರ್ಕಾರದಿಂದ ಶೇಕಡ 30 ರಷ್ಟು ಇರುವ ಸಹಾಯಧನವನ್ನು ಶೇಕಡ 50ಕ್ಕೆ ಹೆಚ್ಚಿಸಿ ಸರ್ಕಾರ ಅನುಮೋದಿಸಿದೆ. ರೈತರು ಈಗಾಗಲೇ ವಿದ್ಯುತ್ ಸಂಪರ್ಕಕ್ಕಾಗಿ ಮೊತ್ತವನ್ನು ಪಾವತಿಸಿದ್ದರೆ, ಪಾವತಿಸಿದ ಮೊತ್ತವನ್ನು ರೈತರ ವಂತಿಗೆ ಎಂದು ಪರಿಗಣಿಸಿ, ಸೌರ ಪಂಪ್‌ಸೆಟ್‌ಗಳನ್ನು ಅಳವಡಿಸುವುದು.
* Stand-alone/ off-grid solar ಪಂಪ್ ಸೆಟ್ ಸೌಲಭ್ಯವನ್ನು ಸ್ಥಳೀಯ ಅವಶ್ಯಕತೆಯಂತೆ ಗುರುತು ಮಾಡಿ 10 HP ಸಾಮರ್ಥ್ಯಕ್ಕೆ ಮಿತಿಗೊಳಿಸುವುದು, ಆದಾಗ್ಯೂ MNRE ಷರತ್ತುಗಳ ಪ್ರಕಾರ 7.5 HP ಸಾಮರ್ಥ್ಯಕ್ಕೆ ಅನುಗುಣವಾಗಿ ಸಬ್ಸಿಡಿ/ ಅನುದಾನವು ಸೀಮಿತವಾಗಿರುತ್ತದೆ.
* ರೈತರು Stand-alone/ off-grid solar ಪಂಪ್‌ಸೆಟ್ ಅಳವಡಿಸಿಕೊಂಡ ನಂತರ, ಅಂತಹ ಪಂಪ್ ಸೆಟ್ ಗಳನ್ನು GRID POWER ಜಾಲದ ಸಂಪರ್ಕದಿಂದ ಕಡಿತಗೊಳಿಸಲು ಎಲ್ಲಾ ESCOM ಗಳು ಕ್ರಮವಹಿಸುವುದು.
* ಇಲಾಖೆಯಿಂದ ಇಲಾಖೆಗೆ ಶುಲ್ಕರಹಿತ ವರ್ಗಾವಣೆ ಆಧಾರದ ಮೇಲೆ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆಯಿಂದ ಇಂಧನ ಇಲಾಖೆಗೆ ಪಡೆಯುವ ಮೂಲಕ ಸಬ್‌ಸ್ಟೇಷನ್‌ನ ಬಳಿ RESCO ಮಾದರಿಯಡಿಯಲ್ಲಿ KUSUM-C ಪ್ರಕಾರ ಫೀಡರ್ ಸೌರೀಕರಣ ಅನುಷ್ಠಾನಗೊಳಿಸುವುದು.
* KERC ನೀಡಿರುವ ಕಾಲಮಿತಿಯೊಳಗೆ ಎಲ್ಲಾ IP ಸೆಟ್ ಗಳನ್ನು ಎಣಿಕೆ ಮಾಡಿ ಅವುಗಳನ್ನು ಆಯಾ ರೈತರ ಆಧಾರ್ ಸಂಖ್ಯೆಗೆ ಲಿಂಕ್ ಮಾಡಲು ESCOM ಗಳು ಅಗತ್ಯ ಕ್ರಮ ತೆಗೆದುಕೊಂಡು ಪೂರ್ಣಗೊಳಿಸುವುದು.
* ದಿನಾಂಕ 22/9/2023ರ ನಂತರ ನೋಂದಾಯಿಸಲ್ಪಡುವ IP ಸೆಟ್‌ಗಳಿಗೆ ಮೂಲಸೌಕರ್ಯವನ್ನು ರೈತರು ಸ್ವಯಂ-ಕಾರ್ಯನಿರ್ವಹಣೆಯಡಿ (self- execution) ರಚಿಸಿಕೊಳ್ಳತಕ್ಕದ್ದು.
ನೀರಾವರಿ ಪಂಪ್‌ಸೆಟ್‌ಗಳ ಬಗ್ಗೆ ಈ ಹಿಂದೆ ಹೊರಡಿಸಲಾಗಿದ್ದ ಎಲ್ಲಾ ಸರ್ಕಾರಿ ಆದೇಶ/ ಸುತ್ತೋಲೆಗಳನ್ನು ಹಿಂಪಡೆಯಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications