'ಸಿದ್ದರಾಮಯ್ಯ ಸರ್ಕಾರ ಕಿತ್ತೆಸೆಯುವವರೆಗೂ ನಿರ್ಗಮಿಸಲ್ಲ'

ಶಿರಸಿ, ಅಕ್ಟೋಬರ್. 05: ಬಜೆಟ್ ಮಂಡಿಸಿ ರೈತರ ಪರ ಎಂದು ಹೇಳಿಕೊಂಡಿದ್ದ ಸಿದ್ದರಾಮಯ್ಯ ಇದೀಗ ರೈತರ ಸಾಲಮನ್ನಾ ಮಾಡಲು ಯಾಕೆ ಹಿಂದೆ ಮುಂದೆ ನೋಡುತ್ತಿದ್ದಾರೆ ಎಂದು ಮಾಜಿ ಸಿಎಂ, ಶಿವಮೊಗ್ಗ ಸಂಸದ ಬಿ ಎಸ್ ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಶಿರಸಿಯಲ್ಲಿ ನಡೆದ ರೈತ ಚೈತನ್ಯ ಯಾತ್ರೆ ಸಭೆಯಲ್ಲಿ ಮಾತನಾಡಿದ ಬಿಎಸ್ ವೈ, ಅಡಿಕೆ ಬೆಳೆಗಾರರ ಆಸಾಮಿ ಖಾತೆ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಯಾವ ಪ್ರಯತ್ನವನ್ನು ಮಾಡುವಂತೆ ಕಾಣುತ್ತಿಲ್ಲ. ಈ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.[ಒನ್ ಇಂಡಿಯಾ ಕನ್ನಡದ ಜೊತೆ ಯಡಿಯೂರಪ್ಪ ಮನ್ ಕೀ ಬಾತ್]

bjp

ರಾಜ್ಯ ಸರ್ಕಾರ ಜನರಿಗೆ ಯಾವ ನೆರವನ್ನು ನೀಡುತ್ತಿಲ್ಲ. ಸಿದ್ದರಾಮಯ್ಯನವರ ಸರ್ಕಾರವನ್ನು ಕಿತ್ತೆಸೆಯುವವರೆಗೂ ರಾಜಕಾರಣದಿಂದ ನಿರ್ಗಮಿಸುವ ಮಾತೇ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.[ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪಗೆ ಸರಿಸಾಟಿ ಯಾರಾದ್ರೂ ಇದ್ದಾರಾ?]

ಶಿರಸಿ, ಕುಮಟಾದಲ್ಲೂ ಬಿ.ಎಸ್.ಯಡಿಯೂರಪ್ಪ, ಸಂಸದ ಅನಂತಕುಮಾರ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿಎಂ ಉದಾಸಿ, ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು. ಹುಮನಾಬಾದ್, ಆಳಂದ, ಅ-ಜಲಪುರದಲ್ಲಿ ನಡೆದ ರೈತ ಚೈತನ್ಯ ಯಾತ್ರೆಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಆರ್.ಅಶೋಕ್, ಬಸವನ ಬಾಗೇವಾಡಿ, ಮುದ್ದೇಬಿಹಾಳ, ಆಲಮಟ್ಟಿಯಲ್ಲಿ ನಡೆದ ರೈತ ಚೈತನ್ಯ ಯಾತ್ರೆಯಲ್ಲಿ ನಡೆದಿದ್ದು, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ವಿ.ಸೋಮಣ್ಣ ಭಾಗವಹಿಸಿದ್ದರು.

bjp
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+