ಸಿದ್ದರಾಮಯ್ಯ ಸರ್ಕಾರಕ್ಕೆ ಸಕ್ಕರೆ ಕಾಯಿಲೆ!

ಬೆಂಗಳೂರು, ಡಿ. 2 : ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸಕ್ಕರೆ ಕಾಯಿಲೆ ಆರಂಭವಾಗಿದೆ. ಕಬ್ಬು ಬೆಳೆಗಾರರ ಹೋರಾಟ ಹಾಗೂ ರೈತ ಆತ್ಮಹತ್ಯೆ ಪ್ರಕರಣದ ನಂತರ ಇದೀಗ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸರ್ಕಾರದೊಂದಿಗೆ ಸಂಘರ್ಷಕ್ಕೆ ಇಳಿದಿದಿದ್ದಾರೆ. ಕಬ್ಬಿಗೆ ಸರ್ಕಾರ ನಿಗದಿಪಡಿಸಿರುವ ದರ ನೀಡಲು ಸಾಧ್ಯವಿಲ್ಲ ಎಂದು ಸಕ್ಕರೆ ಕಾರ್ಖಾನೆ ಮಾಲೀಕರು ಸವಾಲು ಹಾಕಿದ್ದಾರೆ.

ಭಾನುವಾರ ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಹಾಗೂ ಎರಡು ಸಕ್ಕರೆ ಕಾರ್ಖಾನೆಗಳ ಮಾಲೀಕ ಉಮೇಶ್‌ ಕತ್ತಿ, ಸರ್ಕಾರ ಹೇಳಿದ ಬೆಂಬಲ ಬೆಲೆ ನೀಡಲು ಸಾಧ್ಯವಿಲ್ಲ. ಇದನ್ನು ಉಲ್ಲಂಘಿಸಿದಕ್ಕೆ ಜೈಲಿಗೆ ಕಳುಹಿಸಿದರೂ 2500 ರೂ. ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ರೈತರಿಗೆ 1000 ರೂ. ಬೆಂಬಲ ಬೆಲೆ ನೀಡಲಿ. ಆದರೆ, ಯಾವುದೇ ಕಾರಣಕ್ಕೂ 2500 ರೂ. ದರ ನೀಡಲು ತಮ್ಮಿಂದ ಸಾಧ್ಯವಿಲ್ಲ. ಈ ಬಗ್ಗೆ ಕಾನೂನು ಹೋರಾಟಕ್ಕೂ ಸಿದ್ಧ ಎಂದು ಘೋಷಿಸಿದ್ದಾರೆ.

Sugar mills

ಈ ನಡುವೆ ಕಬ್ಬು ಬೆಳೆಗಾರರು ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ಟನ್‌ ಕಬ್ಬಿಗೆ 3000 ಸಾವಿರ ರೂ. ದರ ನಿಗದಿ ಪಡಿಸುವಂತೆ ಆಗ್ರಹಿಸಿ ಡಿ.4ರಿಂದ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಸಕ್ಕರೆ ಕಾಯಿಲೆ ಆರಂಭವಾಗಿದೆ. (ಸಕ್ಕರೆ ಪ್ರಾಬ್ಲಂ ಬಗೆಹರಿಸಿದ ಸಿದ್ದು ಸರ್ಕಾರ)

ಕಠಿಣ ಕ್ರಮ : ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಸಂಪುಟದ ಸಹೋದ್ಯೋಗಿಗಳಾದ ಶಾಮನೂರು ಶಿವಶಂಕರಪ್ಪ ಹಾಗೂ ಸತೀಶ್‌ ಜಾರಕಿಹೊಳಿ ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸರ್ಕಾರ ನಿಗದಿ ಮಾಡಿದ ದರವನ್ನು ನೀಡದಿದ್ದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮುಂದುವರೆಸಿದೆ. ರೈತರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸದಾ ಬದ್ಧವಾಗಿದೆ. ಆತ್ಮಹತ್ಯೆಯಂತಹ ಕೃತ್ಯಗಳಿಂದ ಯಾವ ಸಮಸ್ಯೆಯೂ ದೂರವಾಗುವುದಿಲ್ಲ. ಹಾಗಾಗಿ ಯಾವುದೇ ರೈತರೂ ಮುಂದೆ ಇಂತಹ ಕೆಲಸಕ್ಕೆ ಕೈ ಹಾಕಬಾರದು ಎಂದು ಮನವಿ ಮಾಡಿದರು. (ಕೀಟನಾಶಕ ಸೇವಿಸಿ ಬೆಳಗಾವಿಯಲ್ಲಿ ರೈತ ಆತ್ಮಹತ್ಯೆ)

ಜೈಲಿಗೆ ಹೋಗಲೂ ಸಿದ್ಧ : ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಉಮೇಶ್‌ ಕತ್ತಿ, ಸರ್ಕಾರ ನಿಗದಿ ಮಾಡಿದ ದರ ನೀಡಲು ಸಾಧ್ಯವಿಲ್ಲ. ಸರ್ಕಾರ ಕಾನೂನು ಕ್ರಮದ ಬೆದರಿಕೆ ಹಾಕಿದರೂ ಅಂಜುವುದಿಲ್ಲ. ಇದಕ್ಕಾಗಿ ಜೈಲಿಗೆ ಹೋಗಲು ಸಿದ್ಧ ಎಂದು ಸವಾಲು ಹಾಕಿದರು. ನಾನು ಎರಡು ಸಕ್ಕರೆ ಕಾರ್ಖಾನೆಗಳ ಮಾಲೀಕ ಮಾತ್ರವಲ್ಲ, ಕಬ್ಬು ಬೆಳೆಗಾರನೂ ಹೌದು.

ರೈತರು ಮತ್ತು ಕಾರ್ಖನೆಗಳ ಸಮಸ್ಯೆಗಳ ಬಗ್ಗೆ ನನಗೆ ಅರಿವಿದೆ. ಸರ್ಕಾರದ ಆದೇಶದಂತೆ ದರ ಕೊಡಲು ಸಾಧ್ಯವಿಲ್ಲ. ಬೇಕಿದ್ದರೆ ಸರ್ಕಾರವೇ ರೈತರಿಗೆ 1 ಸಾವಿರ ರೂ. ಬೆಂಬಲ ಬೆಲೆ ನೀಡಲಿ ಎಂದರು. ಸರ್ಕಾರಕ್ಕೆ ರೈತರ ಮೇಲೆ ಕಾಳಜಿ ಇದ್ದರೆ, ಕೂಡಲೇ ಕಾರ್ಖಾನೆಗಳ ಮಾಲೀಕರು ಮತ್ತು ರೈತರ ಸಭೆ ಕರೆಯಲಿ. ಅದನ್ನು ಬಿಟ್ಟು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಕಾರ್ಖಾನೆಗಳಿಗೆ ಬೆದರಿಕೆ ಹಾಕುವುದು ಸರಿಯಲ್ಲ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+