ಯೂರಿಯಾ ರಸಗೊಬ್ಬರ ಬಳಕೆಗೆ ರೈತರಿಗೆ ಸಲಹೆಗಳು

ಬೆಂಗಳೂರು, ಆಗಸ್ಟ್ 18 : ದಾವಣಗೆರೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆಗಳು ಆರಂಭವಾಗಿವೆ. ಯೂರಿಯಾ ಹಾಗೂ ಇನ್ನಿತರ ರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿದೆ.

ಕೃಷಿ ಇಲಾಖೆ ಜಿಲ್ಲೆಯಲ್ಲಿ ಪ್ರಮುಖವಾಗಿ ಖುಷ್ಕಿಯಲ್ಲಿ ಬೆಳೆಯಲಾಗುತ್ತಿರುವ ಮುಸುಕಿನ ಜೋಳದ ಬೆಳೆಗೆ ಪ್ರತಿ ಎಕರೆಗೆ 25 ಕೆಜಿ ಯೂರಿಯಾ ಮಾತ್ರವೇ ಮೇಲುಗೊಬ್ಬರವಾಗಿ ಬಳಕೆ ಮಾಡಬೇಕು. ರೈತರು ಹೆಚ್ಚಿನ ಪ್ರಮಾಣದಲ್ಲಿ ರಸಗೊಬ್ಬರವನ್ನು ದಯವಿಟ್ಟು ಬಳಕೆ ಮಾಡಬೇಡಿ ಎಂದು ಸಲಹೆ ನೀಡಿದೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೈತರು ರಸಗೊಬ್ಬರಗಳನ್ನು ಖರೀದಿ ಮಾಡಬೇಕು. ರಸಗೊಬ್ಬರ ಖರೀದಿ ಮಾಡುವಾಗ ಗರಿಷ್ಠ ಚಿಲ್ಲರೆ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆ ನೀಡಬಾರದು ಎಂದು ಸೂಚಿಸಲಾಗಿದೆ.

Suggestion To Farmers For Use Of Urea Fertilizer

ಯಾರಾದರೂ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರೆ ಅಥವಾ ಬೇಕಾಗಿರುವ ರಸಗೊಬ್ಬರದ ಜೊತೆ ಬೇರೆ ಪರಿಕರಗಳನ್ನು ಕಡ್ಡಾಯವಾಗಿ ಖರೀದಿ ಮಾಡಲೇಬೇಕೆಂದು ರೈತರನ್ನು ಒತ್ತಾಯಿಸಿದರೆ ದೂರು ನೀಡಲು ಮನವಿ ಮಾಡಲಾಗಿದೆ.

ಕೃಷಿ ಇಲಾಖೆಯ ವಿಚಕ್ಷಣಾ ದಳದ ಅಧಿಕಾರಿಗಳಿಗೆ ರೈತರು ದೂರು ನೀಡಬಹುದು. ದೂರು ನೀಡಲು ದೂರವಾಣಿ ಸಂಖ್ಯೆ 8277931207.

ರೈತರು ಸಂಬಂಧಿಸಿದ ತಾಲೂಕುಗಳ ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+