• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆತ್ಮಹತ್ಯೆ ಪರಿಹಾರವಲ್ಲ, ಅನ್ನದಾತರೆ ಆತ್ಮಸ್ಥೈರ್ಯದಿಂದಿರಿ: ಬಿ.ಸಿ.ಪಾಟೀಲ

|

ಕಲಬುರಗಿ ಏಪ್ರಿಲ್ 07: ಇಡೀ ವಿಶ್ವ ಮಹಾಮಾರಿ ಕೊರೋನಾ ಸೊಂಕಿನ ವಿರುದ್ಧ ಹೋರಾಡುತ್ತಿರುವ ಈ ಸಂದರ್ಭದಲ್ಲಿ ರೈತ ಸಮುದಾಯ ಬೆಳೆ ಮಾರಾಟ ಮತ್ತು ಸೂಕ್ತ ಬೆಲೆ ಸಿಗಲಿಲ್ಲ ಅಂತ ಆತ್ಮಹತ್ಯೆಗೆ ಶರಣಾಗುವುದು ಪರಿಹಾರವಲ್ಲ. ಕೃಷಿ ಚಟುವಟಿಕೆಗೆ ನಿರಂತರ ಸಾಗಲು ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ. ರಾಜ್ಯದ ಅನ್ನದಾತ ಆತ್ಮ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ರೈತ ಸಮುದಾಯಕ್ಕೆ ಕರೆ ನೀಡಿದರು.

ಲಾಕ್ ಡೌನ್ ಪರಿಣಾಮ ಬೆಳೆದ ಕಲ್ಲಂಗಡಿಯನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ಆತ್ಮಹತ್ಯೆಗೆ ಶರಣಾದ ಜಿಲ್ಲೆಯ ಆಳಂದ ತಾಲೂಕಿನ ಲಾಡ್ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ ನಾಗೀಂದ್ರಪ್ಪ ಬಿರಾದರ ಅವರ ಮನೆಗೆ ಮಂಗಳವಾರ ಭೇಟಿ ನೀಡಿದ ಸಚಿವರು ಸರ್ಕಾರದಿಂದ 5 ಲಕ್ಷ ರೂ.ಗಳ ಪರಿಹಾರ ಧನದ ಆದೇಶವನ್ನು ಮೃತ ರೈತನ ಪತ್ನಿಗೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಅತ್ಮಹತ್ಯೆ ಪರಿಹಾರವಲ್ಲ.

'ರೈತರಿಗೆ ಆತಂಕ ಬೇಡ, ಬಿತ್ತನೆ ಬೀಜ-ಗೊಬ್ಬರದ ದಾಸ್ತಾನು ಇದೆ'

ಇದರಿಂದ ನಿಮ್ಮನ್ನೆ ನಂಬಿದ ಕುಟುಂಬಸ್ಥರು ತುಂಬಾ ತೊಂದರೆ ಅನುಭವಿಸಬೇಕಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ರೈತಾಪಿ ವರ್ಗ ಆತ್ಮಹತ್ಯೆದಂತಹ ಕಠೋರ ನಿರ್ಣಯ ಕೈಗೊಳ್ಳಬಾರದು. ಸರ್ಕಾರ ನಿಮ್ಮೊಂದಿಗಿದೆ ಎಂದು ಸಚಿವ ಬಿ.ಸಿ.ಪಾಟೀಲ ಅವರು ರೈತರಿಗೆ ಧೈರ್ಯ ತುಂಬಿದರು.

ಸಚಿವರೇ ಇಲ್ನೋಡಿ: ಕೊರೊನಾ ನೆಪದಲ್ಲಿ ರೈತರಿಗೆ ಆಗುತ್ತಿದೆ ಮಹಾ ಮೋಸ.!

ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರದಾದ್ಯಂತ ಲಾಕ್ ಡೌನ್ ಇದೆ. ಇಂತಹ ಸಂದರ್ಭದಲ್ಲಿಯೂ ರೈತನಿಗೆ ಮತ್ತು ಕೃಷಿ ಚಟುವಟಿಕೆಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೃಷಿ ಸಂಬಂಧಿತ ಚಟುವಟಿಕೆಗಳ ಕಾರ್ಯಾರಂಭಕ್ಕೆ ಆದೇಶಿಸಿದ್ದಾರೆ. ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ ವ್ಯವಸ್ಥೆ, ಪೂರಕ ಚಟುವಟಿಕೆಗಳು ನಿರಂತರ ಇರಲಿವೆ ಎಂದರು.

ಕೃಷಿ ಚಟುವಟಿಕೆಗಳನ್ನು ಮುಂದುವರೆಯಲಿ

ಕೃಷಿ ಚಟುವಟಿಕೆಗಳನ್ನು ಮುಂದುವರೆಯಲಿ

ಇದೀಗ ಎಲ್ಲೆಡೆ ಮಹಾಮಾರಿ ಕೊರೋನಾ ಸೋಂಕಿನ ಹರಡುತ್ತಿರುವುದರಿಂದ ಈ ಸೊಂಕು ತಗಲದಂತೆ ಮುಂಜಾಗ್ರತೆ ವಹಿಸಬೇಕು ಮತ್ತು ತಪ್ಪದೆ ಸಾಮಾಜಿಕ ಅಂತರದೊಂದಿಗೆ ಕೃಷಿ ಚಟುವಟಿಕೆಗಳನ್ನು ಮುಂದುವರೆಸಬೇಕು ಎಂದರು.

ತೊಗರಿ ಖರೀದಿ ಮತ್ತೆ ಶುರು: ಬೆಂಬಲ ಬೆಲೆ ಯೋಜನೆಯಡಿ ಈಗಾಗಲೆ ರಾಜ್ಯದಾದ್ಯಂತ ನೋಂದಣಿ ಮಾಡಿಕೊಂಡಿರುವ ರೈತರಿಂದ ತೊಗರಿ ಉತ್ಪನ್ನ ಖರೀದಿಸಲಾಗುವುದು. ಇದಲ್ಲದೆ ಕಡಲೆ ಖರೀದಿಗೂ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು. ತೋಟಗಾರಿಕೆ ಉತ್ಪನ್ನಗಳ ಮಾರಾಟಕ್ಕೆ ನೆರವಾಗಲು ರಾಜ್ಯದ ಎಲ್ಲಾ ಹಾಪ್‍ಕಾಮ್ಸ್ ಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಾಲಾಜಿ, ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ಶಾಸಕರಾದ ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮೂಡ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೆವಾಡಗಿ ಇದ್ದರು.

ರೈತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ ಕೃಷಿ ಸಚಿವರು

ರೈತನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ವಿತರಿಸಿದ ಕೃಷಿ ಸಚಿವರು

ಲಾಕ್ ಡೌನ್ ಪರಿಣಾಮ ಬೆಳೆದ ಕಲ್ಲಂಗಡಿಯನ್ನು ಮಾರಾಟವಾಗದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 31 ರಂದು ಆತ್ಮಹತ್ಯೆಗೆ ಶರಣಾದ ಜಿಲ್ಲೆಯ ಆಳಂದ ತಾಲೂಕಿನ ಲಾಡ್ ಚಿಂಚೋಳಿ ಗ್ರಾಮದ ರೈತ ಚಂದ್ರಕಾಂತ ನಾಗೀಂದ್ರಪ್ಪ ಬಿರಾದರ ಅವರ ಮನೆಗೆ ಮಂಗಳವಾರ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಸರ್ಕಾರದಿಂದ 5 ಲಕ್ಷ ರೂ.ಗಳ ಪರಿಹಾರ ಧನದ ಆದೇಶವನ್ನು ಮೃತ ರೈತನ ಪತ್ನಿಗೆ ನೀಡಿದರು.

ಕಲಬುರಗಿ; ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ 5 ಲಕ್ಷ ಪರಿಹಾರ

ಸಚಿವರು ಮೃತ ರೈತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದಲ್ಲದೆ ರೈತ ಸಮುದಾಯಕ್ಕೆ ಆತ್ಮಹತ್ಯೆ ಪರಿಹಾರವಲ್ಲ, ಇದ್ದು ಜಯಿಸಬೇಕು ಕರೆ ನೀಡಿದರು. ರೈತನ ಕುಟಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ರೀತಿಯ ನೆರವನ್ನು ಸ್ಥಳೀಯ ಶಾಸಕರು, ಜನಪ್ರತಿನಿಧಿಗಳು ನೀಡಲಿದ್ದಾರೆ ಧೈರ್ಯದಿಂದಿರಿ ಎಂದು ಕುಟುಂಬಸ್ಥರಿಗೆ ಸಚಿವ ಬಿ.ಸಿ. ಪಾಟೀಲ ಅಭಯ ನೀಡಿದರು.

ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ಮೊತ್ತ

ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ಮೊತ್ತ

ಶಾಸಕ ಸುಭಾಷ ಗುತ್ತೇದಾರ ಮಾತನಾಡಿ ಮೃತ ರೈತನಿಗೆ ಪತ್ನಿ ಸೇರಿದಂತೆ ಇಬ್ಬರು ಗಂಡು ಮಕ್ಕಳು ಇದ್ದಾರೆ ಎಂದು ಸಚಿವರಿಗೆ ಮಾಹಿತಿ ನೀಡಿದರು. ಇದಲ್ಲದೆ ರಾಷ್ಟ್ರೀಯ ಕೌಟುಂಬಿಕ ನೆರವು ಯೋಜನೆಯಡಿ 20 ಸಾವಿರ ರೂ. ಮತ್ತು ಅಂತ್ಯಸಂಸ್ಕಾರದ ವೆಚ್ಚ 5 ಸಾವಿರ ರೂ. ಸಹ ಕುಟುಂಬಕ್ಕೆ ನೀಡಲಾಯಿತು.

ಪಿಂಚಣಿ ಆದೇಶ: ಮೃತ ರೈತನ ಪತ್ನಿ ಜಗದೇವಿ ಚಂದ್ರಕಾಂತ ಅವರಿಗೆ ಮಾಹೆಯಾನ 2000 ರೂ. ಒದಗಿಸುವ ವಿಧವಾ ಪಿಂಚಣಿ ಆದೇಶದ ಪ್ರತಿಯನ್ನು ಸಹ ಸಚಿವ ಬಿ.ಸಿ.ಪಾಟೀಲ ಇದೇ ಸಂದರ್ಭದಲ್ಲಿ ವಿತರಣೆ ಮಾಡಿದರು. ವೈಯಕ್ತಿಕ ಒಂದು ಲಕ್ಷ ರೂ. ನೀಡಿದ ಸಚಿವರು: ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ವೈಯಕ್ತಿಕವಾಗಿ ರೈತನ ಕುಟುಂಬಕ್ಕೆ ಒಂದು ಲಕ್ಷ ರೂ. ಮೊತ್ತ ನಗದನ್ನು ಇದೇ ಸಂದರ್ಭದಲ್ಲಿ ನೀಡಿ ರೈತನ ಕುಟಂಬಕ್ಕೆ ನೆರವಾದರು.

ಕೃಷಿ ಉತ್ಪನ್ನಗಳ ಸಾಗಾಟ, ಮಾರಾಟಕ್ಕೆ ಅಡ್ಡಿ

ಕೃಷಿ ಉತ್ಪನ್ನಗಳ ಸಾಗಾಟ, ಮಾರಾಟಕ್ಕೆ ಅಡ್ಡಿ

ಕೊರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಲಾಕ್‍ಡೌನ್ ಇದ್ದರೂ, ರೈತರ ಕೃಷಿ ಉತ್ಪನ್ನಗಳ ಸಾಗಾಣಿಕೆ, ಮಾರಾಟ ಹಾಗೂ ವ್ಯಾಪಾರಕ್ಕೆ ಯಾವುದೇ ಅಡ್ಡಿಯುಂಟಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕೊವೀದ್-19 ಸಾಂಕ್ರಾಮಿಕ ರೋಗದ ನಿಮಿತ್ತ ಲಾಕ್‍ಡೌನ್ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡುತ್ತಾ, ಪೊಲೀಸರು ಸೇರಿದಂತೆ ಯಾವುದೇ ಇಲಾಖೆ ಅಧಿಕಾರಿಗಳು ತೊಂದರೆ ಉಂಟು ಮಾಡಬಾರದು ಎಂದು ಅವರು ಹೇಳಿದರು.

ತೋಟಗಾರಿಕೆ ಉಪನಿರ್ದೇಶಕ ಸಂತೋಷ ಸಪ್ಪಂದಿ

ತೋಟಗಾರಿಕೆ ಉಪನಿರ್ದೇಶಕ ಸಂತೋಷ ಸಪ್ಪಂದಿ

ಈ ಸಂದರ್ಭದಲ್ಲಿ ಮಾತನಾಡಿದ ತೋಟಗಾರಿಕೆ ಉಪನಿರ್ದೇಶಕ ಸಂತೋಷ ಸಪ್ಪಂದಿ ಅವರು, ಕಲಬುರಗಿಯಲ್ಲಿ ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ 55 ಟಾಟಾ ಏಸ್ ಮೂಲಕ ತರಕಾರಿಗಳ ಮಾರಾಟಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಈ ಕುರಿತು ಮಾತನಾಡಿದ ಸಚಿವರು ಬೆಂಗಳೂರಿನಲ್ಲಿ ಹಾಪ್‍ಕಾಮ್ಸ್ ರೀತಿಯಲ್ಲಿ ತರಕಾರಿ ಮಳಿಗೆ ತೆರೆದಿರುವಂತೆ ಜಿಲ್ಲೆಯಲ್ಲೂ ವಿಶೇಷ ಮಳಿಗೆ ತೆರೆಯುವಂತೆ ಅವರು ತೋಟಗಾರಿಕೆ ಇಲಾಖೆ ಆಧಿಕಾರಿಗಳಿಗೆ ಅವರು ತಿಳಿಸಿದರು.

ಕೃಷಿ ಉತ್ಪನ್ನ ಮಾರುಕಟ್ಟೆಗೆ ಇಂತಿಷ್ಟೆ ಜನ ಬರಬೇಕೆಂದು ನಿರ್ಬಂಧ ಹೇರಬಾರದು. ಆದರೆ, ಎಲ್ಲಾ ಮಾರಾಟಗಾರರು, ವ್ಯಾಪಾರಿಗಳು ಹಾಗೂ ರೈತರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಕಲ್ಲಂಗಡಿ ಬೆಳೆಗಾರ ಚಂದ್ರಕಾಂತ ನಾಗೀಂದ್ರಪ್ಪ ಬಿರಾದರ ಅವರ ಆತ್ಮಹತ್ಯೆ ಪ್ರಸ್ತಾಪಿಸಿದ ಸಚಿವರು ಯಾವುದೇ ರೈತರು ಧೃತಿಗೆಟ್ಟು ಆತ್ಮಹತ್ಯೆ ಮಾಡಿಕೊಳ್ಳಬಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮೊಂದಿಗಿವೆ ಎಂದು ಧೈರ್ಯತುಂಬಿದರು.

ತೊಗರಿ ರಫ್ತು ಕುರಿತಂತೆ ಹೇಳಿಕೆ

ತೊಗರಿ ರಫ್ತು ಕುರಿತಂತೆ ಹೇಳಿಕೆ

ಇನ್ನು ತೊಗರಿ ಖರೀದಿಗೆ ಕೈಗೊಂಡಿರುವ ಕ್ರಮಗಳ ಕುರಿತು ಕೇಳಲಾಗಿ ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶರತ್. ಬಿ ಅವರು, ಈಗಾಗಲೇ ಮಾರ್ಚ್ 28ರಿಂದ 5000 ಮಟ್ರಿಕ್ ಟನ್ ಕ್ಕಿಂತ ಹೆಚ್ಚು ತೊಗರಿಯನ್ನು ರಫ್ತು ಮಾಡಲಾಗಿದೆ. ಬೇಡಿಕೆಗೆ ಅನುಗುಣವಾಗಿ ಬೆಂಗಳೂರು ಮತ್ತಿತರೆಡೆ ಕಳುಹಿಸಲಾಗಿದೆ ಎಂದು ವಿವರ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ತೊಗರಿಯನ್ನು ಕೇವಲ ಬೆಂಗಳೂರು ಅಲ್ಲದೆ, ದೇಶದ ವಿವಿಧ ಭಾಗಗಳಿಗೆ ರಫ್ತು ಮಾಡುವ ಮೂಲಕ ರೈತರ ನೆರವಿಗೆ ಬರಬೇಕು ಎಂದು ತಿಳಿಸಿದರು.

ಮೇ-ಜೂನ್‍ನಲ್ಲಿ ಆರಂಭವಾಗುವ ಮುಂಗಾರು ಹಿನ್ನೆಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಔಷಧಿ ಮುಂತಾದವುಗಳ ಪೂರೈಕೆ ಕುರಿತು ಸಚಿವರು ಮಾಹಿತಿ ಕೇಳಿದರು.

ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಿತೇಂದ್ರನಾಥ ಸೂಗೂರು 7,55,130 ಹೆಕ್ಟೇರ್‍ನಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. 10280 ಕ್ವಿಂಟಲ್ ತೊಗರಿ, 10870 ಕ್ವಿಟಂಲ್ ಸೋಯಾ ಅವರೆ ಸೇರಿದಂತೆ 24,893 ಕ್ವಿಂಟಲ್ ಬಿತ್ತನೆ ಬೀಜ ಅಗತ್ಯವಿದೆ ಎಂದು ಮಾಹಿತಿ ನೀಡಿದ ಅವರು, ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಏನೂ ಸಮಸ್ಯೆ ಇಲ್ಲ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು

ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು ಅವರು ಮಾತನಾಡಿ, ಕಲ್ಲಂಗಡಿ ಬೆಳೆ ನಷ್ಟದಿಂದ ಸಾವನ್ನಪ್ಪಿದ ರೈತ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು, ತೊಗರಿ ಬೆಂಬಲ ಬೆಲೆಯನ್ನು 6100 ರಿಂದ 7500ಕ್ಕೆ ಹೆಚ್ಚಿಸಬೇಕು, ಪ್ರತಿ ರೈತರಿಂದ 10 ಕ್ವಿಂಟಲ್‍ನಿಂದ 20 ಕ್ವಿಂಟಲ್ ತೊಗರಿ ಖರೀದಿಸಬೇಕು, ರೈತರ ಉತ್ಪನ್ನ ಸಾಗಿಸುವ ಟ್ರ್ಯಾಕ್ಟರ್, ಟಂಟಂ ಮುಂತಾದ ವಾಹನಗಳನ್ನು ತಡೆಯಬಾರದು ಮುಂತಾದ ಮನವಿಯನ್ನು ಸಚಿವರಿಗೆ ಈ ಸಂದರ್ಭದಲ್ಲಿ ಸಲ್ಲಿಸಿದರು

ಕಲ್ಲಂಗಡಿ ಹಣ್ಣು ಸೇವಿಸಿದರೆ ಕೊರೋನಾ ರೋಗ ಬರುತ್ತದೆ ಎಂದು ಅಪಪ್ರಚಾರ ನಡೆಸಲಾಗುತ್ತಿದೆ. ಅದರೆ ಕಲ್ಲಂಗಡಿ ಮತ್ತು ಸೌತೇಕಾಯಿ ಸೇವನೆಯಿಂದ ಶಾಸ್ವಕೋಶ ತೊಂದರೆ ನಿವಾರಿಸಲಿವೆ. ನಿಂಬೆ ಹಣ್ಣು ರೋಗ ನಿರೋಧಕ ಶಕ್ತಿ ಹೆಚ್ಚಿಸಲಿದೆ ಎಂದು ಸಚಿವರು ತಿಳಿ ಹೇಳಿದರು.

English summary
Agriculture minister B. C Patil who is touring Kalaburagi said, Suicide is not the solution and farmers plea, problems will be heard and solved soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X