• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚಿತ್ರದುರ್ಗ: ಕರ್ನಾಟಕ ಬಂದ್ ಗೆ ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳ ಬೆಂಬಲ

By ಚಿತ್ರದುರ್ಗ ಪ್ರತಿನಿಧಿ
|

ಚಿತ್ರದುರ್ಗ, ಸೆಪ್ಟೆಂಬರ್ 27: ಭೂ ಸುಧಾರಣೆ ತಿದ್ದುಪಡಿ ವಿಧೇಯಕ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಮಾಡಲಾಗುತ್ತಿದೆ.

ಕರ್ನಾಟಕ ಬಂದ್ ಗೆ ಕೋಟೆನಾಡು ಚಿತ್ರದುರ್ಗದಲ್ಲಿ ಜೆಡಿಎಸ್, ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳಿಂದ ವ್ಯಾಪಕ ಬೆಂಬಲ ದೊರೆಯಲಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ನಾಳೆ ಅಗತ್ಯ ಸೇವೆಗಳನ್ನು ಬಿಟ್ಟು ಬೇರೆ ಎಲ್ಲ ಸೇವೆಗಳು ಬಂದ್ ಆಗಿರಲಿವೆ.

ಕರ್ನಾಟಕ ಬಂದ್ ಗೆ ಉಡುಪಿ‌ ಜಿಲ್ಲೆಯ 14 ಸಂಘಟನೆಗಳ‌ ಬೆಂಬಲಕರ್ನಾಟಕ ಬಂದ್ ಗೆ ಉಡುಪಿ‌ ಜಿಲ್ಲೆಯ 14 ಸಂಘಟನೆಗಳ‌ ಬೆಂಬಲ

ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು, AITUC & CITU ಸಂಘಟನೆಗಳಿಂದಲೂ ಬೆಂಬಲ ನೀಡಲಿದ್ದಾರೆ. ನಾಳಿನ ಬಂದ್ ಗೆ ಕನ್ನಡ ಪರ ಸಂಘಟನೆಗಳು ಬೆಂಬಲ ನೀಡಲಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬಣ ಹಾಗೂ ಪ್ರವೀಣ್ ಶೆಟ್ಟಿ ಬಣಗಳಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ. ಸೋಮವಾರದ ಬಂದ್ ಗೆ ಚಿತ್ರದುರ್ಗ ಜಿಲ್ಲಾ ವಾಹನ ಚಾಲಕರ ಸಂಘಟನೆಯಿಂದಲೂ ಬೆಂಬಲ ವ್ಯಕ್ತಪಡಿಸಿದ್ದಾರೆ.

ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವರ್ತಕರ ಸಂಘಟನೆಗಳು ನಾಳಿನ ಕರ್ನಾಟಕ ಬಂದ್ ಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಚಿತ್ರದುರ್ಗ ಜಿಲ್ಲೆಯಲ್ಲಿ ನಾಳೆ ವಾಹನ ಸಂಚಾರ ಸ್ಥಗಿತಗೊಳ್ಳಲಿದ್ದು, ಕೋಟೆನಾಡು ನಾಳೆ ಸಂಪೂರ್ಣ ಸ್ತಬ್ಧಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

English summary
Many organizations in Chitradurga district had announce their support for the Karnataka bandh on September 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X