ಮೋದಿ ಮಹಾತ್ವಾಕಾಂಕ್ಷೆಯ ಬುಲೆಟ್ ರೈಲಿಗೆ ರೈತರಿಂದ ಕೆಂಪು ಬಾವುಟ
ನವದೆಹಲಿ, ಜನವರಿ 18: ಪ್ರಧಾನಿ ಮೋದಿ ಅವರ ಮಹಾತ್ವಾಕಾಂಕ್ಷೆಯ ಬುಲೆಟ್ ಟ್ರೈನ್ ಯೋಜನೆ ವಿರುದ್ಧ ರೈತರು ದನಿ ಎತ್ತಿದ್ದು, ಯೋಜನಯಿಂದಾಗಿ ರೈತರಿಗಾಗುವ ಸಮಸ್ಯೆಯ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ.
ಬುಲೆಟ್ ಟ್ರೈನ್ ಯೋಜನೆಗಾಗಿ ಜಮೀನು ಕಳೆದುಕೊಳ್ಳಲಿರುವ ರೈತರು ಯೋಜನೆ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ರೈತರ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.
ಬುಲೆಟ್ ಟ್ರೈನ್ ಯೋಜನೆಗಾಗಿ ರಾಜ್ಯ ಸರ್ಕಾರಗಳು ರೈತರ ಜಮೀನು ಸ್ವಾಧೀನಪಡಿಸಿಕೊಳ್ಳುತ್ತಿರುವುದಕ್ಕೆ ತಡೆಯಾಜ್ಞೆ ನೀಡಬೇಕೆಂದು ರೈತರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ಹೇಳಿದೆ.

ಮುಂಬೈ ಮತ್ತು ಅಹ್ಮದಾಬಾದ್ ನಡುವೆ ದೇಶದ ಮೊದಲ ಬುಲೆಟ್ ರೈಲು ಸಂಚರಿಸಲಿದ್ದು, ಇದಕ್ಕಾಗಿ ಭೂ ಸ್ವಾಧೀನ ಜಾರಿಯಲ್ಲಿದೆ. ರೈತರ ಆಕ್ಷೇಪವೆಂದರೆ ಭೂ ಸ್ವಾಧೀನ ಪ್ರಕ್ರಿಯೆಯು ಕಾಯ್ದೆಯ ಅನುಸಾರ ಆಗುತ್ತಿಲ್ಲವೆಂದು, ತಮ್ಮ ವ್ಯಾಪ್ತಿಗೆ ಬರದ ಕಾರ್ಯವನ್ನು ಗುಜರಾತ್ ಮತ್ತು ಕೇಂದ್ರ ಸರ್ಕಾರಗಳು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.
ಗುಜರಾತ್ ಹೈಕೋರ್ಟ್ ಎತ್ತಿಹಿಡಿದಿದ್ದ 'ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವಸತಿಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆಯ ಹಕ್ಕು ಕಾಯ್ದೆ 2013 ಮತ್ತು 2016 ರ ತಿದ್ದುಪಡಿಯನ್ನು ಸಹ ಪ್ರಶ್ನೆ ಮಾಡಿದ್ದಾರೆ ರೈತರು.
ಭೂ ಸ್ವಾಧೀನ ಪ್ರಕ್ರಿಯಿಗೆ ಕೂಡಲೇ ತಡೆನೀಡಬೇಕೆಂದು ರೈತರು ಮನವಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಮಾರ್ಚ್ 20 ರಂದು ಕೈಗೆತ್ತುಕೊಳ್ಳುವುದಾಗಿ ಸುಪ್ರೀಂಕೋರ್ಟ್ನ ದ್ವಿಸದಸ್ಯ ಪೀಠ ತಿಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications