• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮೋದಿ ಮಹಾತ್ವಾಕಾಂಕ್ಷೆಯ ಬುಲೆಟ್ ರೈಲಿಗೆ ರೈತರಿಂದ ಕೆಂಪು ಬಾವುಟ

|
Google Oneindia Kannada News

ನವದೆಹಲಿ, ಜನವರಿ 18: ಪ್ರಧಾನಿ ಮೋದಿ ಅವರ ಮಹಾತ್ವಾಕಾಂಕ್ಷೆಯ ಬುಲೆಟ್ ಟ್ರೈನ್ ಯೋಜನೆ ವಿರುದ್ಧ ರೈತರು ದನಿ ಎತ್ತಿದ್ದು, ಯೋಜನಯಿಂದಾಗಿ ರೈತರಿಗಾಗುವ ಸಮಸ್ಯೆಯ ಬಗ್ಗೆ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ.

ಬುಲೆಟ್ ಟ್ರೈನ್ ಯೋಜನೆಗಾಗಿ ಜಮೀನು ಕಳೆದುಕೊಳ್ಳಲಿರುವ ರೈತರು ಯೋಜನೆ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. ರೈತರ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಬುಲೆಟ್ ಟ್ರೈನ್‌ ಯೋಜನೆಗಾಗಿ ರಾಜ್ಯ ಸರ್ಕಾರಗಳು ರೈತರ ಜಮೀನು ಸ್ವಾಧೀನಪಡಿಸಿಕೊಳ್ಳುತ್ತಿರುವುದಕ್ಕೆ ತಡೆಯಾಜ್ಞೆ ನೀಡಬೇಕೆಂದು ರೈತರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ಹೇಳಿದೆ.

ಮುಂಬೈ ಮತ್ತು ಅಹ್ಮದಾಬಾದ್ ನಡುವೆ ದೇಶದ ಮೊದಲ ಬುಲೆಟ್ ರೈಲು ಸಂಚರಿಸಲಿದ್ದು, ಇದಕ್ಕಾಗಿ ಭೂ ಸ್ವಾಧೀನ ಜಾರಿಯಲ್ಲಿದೆ. ರೈತರ ಆಕ್ಷೇಪವೆಂದರೆ ಭೂ ಸ್ವಾಧೀನ ಪ್ರಕ್ರಿಯೆಯು ಕಾಯ್ದೆಯ ಅನುಸಾರ ಆಗುತ್ತಿಲ್ಲವೆಂದು, ತಮ್ಮ ವ್ಯಾಪ್ತಿಗೆ ಬರದ ಕಾರ್ಯವನ್ನು ಗುಜರಾತ್‌ ಮತ್ತು ಕೇಂದ್ರ ಸರ್ಕಾರಗಳು ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ಗುಜರಾತ್ ಹೈಕೋರ್ಟ್ ಎತ್ತಿಹಿಡಿದಿದ್ದ 'ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವಸತಿಯಲ್ಲಿ ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆಯ ಹಕ್ಕು ಕಾಯ್ದೆ 2013 ಮತ್ತು 2016 ರ ತಿದ್ದುಪಡಿಯನ್ನು ಸಹ ಪ್ರಶ್ನೆ ಮಾಡಿದ್ದಾರೆ ರೈತರು.

ಭೂ ಸ್ವಾಧೀನ ಪ್ರಕ್ರಿಯಿಗೆ ಕೂಡಲೇ ತಡೆನೀಡಬೇಕೆಂದು ರೈತರು ಮನವಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ಮಾರ್ಚ್ 20 ರಂದು ಕೈಗೆತ್ತುಕೊಳ್ಳುವುದಾಗಿ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠ ತಿಳಿಸಿದೆ.

English summary
Farmers requested supreme court to order stay on land acquisition for bullet train scheme. Supreme court agrees to hear plea of farmers hearing will start on March 20.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X