• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನೈಸರ್ಗಿಕವಾಗಿ ಮಾವು ಮಾಗಿಸಲು ರೈತರಿಗೆ ಸಲಹೆಗಳು

|
Google Oneindia Kannada News

ಕೊಪ್ಪಳ, ಮೇ 18; ಮಾವಿನ ಹಣ್ಣಿನ ಋತುಮಾನ ಆರಂಭವಾಗಿದೆ. ಮಾವು ಬೆಳೆದಿರುವ ರೈತರು ಹಣ್ಣುಗಳನ್ನು ಮಾರುಕಟ್ಟೆಗೆ ಸಾಗಾಟ ಮಾಡುವುದಲ್ಲಿ ತೊಡಗಿದ್ದಾರೆ. ಮಾವಿನಲ್ಲಿ ಹೂ ಕಚ್ಚಿದ ನಂತರ ತಳಿಗಳನ್ನಾಧರಿಸಿ 5 ತಿಂಗಳಿಗೆ ಕಟಾವಿಗೆ ಸಿದ್ಧವಾಗುತ್ತವೆ.

ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಮತ್ತು ನೈಸರ್ಗಿಕವಾಗಿ ಮಾವು ಮಾಗಿಸುವ ವಿಧಾನದ ಬಗ್ಗೆ ರೈತರಿಗೆ ಸಲಹೆಗಳನ್ನು ನೀಡಲಾಗಿದೆ. ನೈಸರ್ಗಿಕವಾಗಿ ಮಾಗಿದ ಮಾವಿನ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆಯೂ ಹೆಚ್ಚಿದೆ.

ರಾಮನಗರ ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!ರಾಮನಗರ ಮಾವು ಮೇಳದಲ್ಲಿ ಬಗೆಬಗೆಯ ಮಾವುಗಳು!

ತಳಿಗಳನ್ನಾಧರಿಸಿ ಕೆಲವು ಬೇಗ ಪಕ್ವವಾಗುವ ಹಣ್ಣುಗಳು ಮಾರ್ಚ್‌ನಲ್ಲಿ ಕಟಾವಿಗೆ ಬರುತ್ತವೆ. ಕೊಪ್ಪಳ ಜಿಲ್ಲೆಯಲ್ಲಿ ಸಾಮಾನ್ಯವಾಗಿ ಬೆನೆಶಾನ್, ರಸಪುರಿ, ಕೇಸರ್ ಇವುಗಳು ಏಪ್ರಿಲ್, ಮೇ ಸುಮಾರಿಗೆ ಕಟಾವಿಗೆ ಬರುತ್ತದೆ. ತೋತಾಪೂರಿ, ಮಲ್ಲಿಕಾ ಮೇ, ಜೂನ್ ನಂತರ ಕಟಾವಿಗೆ ಸಿದ್ಧವಾಗುತ್ತದೆ.

ಮೇ ತಿಂಗಳ ಮಳೆ; ಮಾವು ಕೊಯ್ಲು, ರೈತರು ಅನುಸರಿಸಬೇಕಾದ ಕ್ರಮ ಮೇ ತಿಂಗಳ ಮಳೆ; ಮಾವು ಕೊಯ್ಲು, ರೈತರು ಅನುಸರಿಸಬೇಕಾದ ಕ್ರಮ

ಮಾವು ಕಟಾವಿಗೆ ಬಂದಾಗ ಹಳದಿ ಬಣ್ಣಕ್ಕೆ ತಿರುಗುತ್ತವೆ ಮತ್ತು ಭುಜಗಳು ಹಳದಿಯಾಗಿ ಕಾಣುತ್ತವೆ. ಸೋನೆ ಕಡಿಮೆಯಾಗುತ್ತದೆ. 5-6 ಪಕ್ವಗೊಂಡ ಹಣ್ಣುಗಳು ಉದುರಿ ಕೆಳಗೆ ಬೀಳುತ್ತವೆ. ಪಕ್ವಗೊಂಡ ಕಾಯಿಗಳು ನೀರಿನಲ್ಲಿ ಮುಳುಗಿಸಿದಾಗ ಮುಳುಗುತ್ತವೆ.

ರಾಮನಗರ; ಶೇಕಡಾ 90 ರಷ್ಟು ಮಾವು ಬೆಳೆ ನಾಶ, ಪರಿಹಾರಕ್ಕೆ ರೈತರ ಮೊರೆ ರಾಮನಗರ; ಶೇಕಡಾ 90 ರಷ್ಟು ಮಾವು ಬೆಳೆ ನಾಶ, ಪರಿಹಾರಕ್ಕೆ ರೈತರ ಮೊರೆ

ಹಣ್ಣು ಮಾಗಿಸುವ ವಿಧಾನ

ಹಣ್ಣು ಮಾಗಿಸುವ ವಿಧಾನ

ಚೆನ್ನಾಗಿ ಬಲಿತ ಕಾಯಿಗಳು ಕಟಾವಿನ ನಂತರ 4-5 ದಿನಗಳಲ್ಲಿಯೇ ಹಣ್ಣಾಗುತ್ತವೆ. ಮಾವಿನಲ್ಲಿ ಸಹಜವಾಗಿ ಹಣ್ಣಾಗಲು ಸಮಯ ತಗಲುತ್ತದೆ. ಆದ್ದರಿಂದ ವೈಜ್ಞಾನಿಕವಾಗಿ, ಸುರಕ್ಷಿತವಾಗಿ ಮತ್ತು ನೈಸರ್ಗಿಕವಾಗಿ ಹಣ್ಣು ಮಾಗಿಸಿದರೆ ಉತ್ತಮ ಗುಣಮಟ್ಟ ಹಾಗೂ ಮಾರುಕಟ್ಟೆ ದೊರೆಯುತ್ತದೆ. ಹಣ್ಣು ಮಾಗುವಾಗ ತೊಟ್ಟಿನ ಬುಡದಲ್ಲಿ ಇಥಲೀನ್ ಎಂಬ ರಾಸಾಯನಿಕ ಉತ್ಪತ್ತಿಯಾಗಿ ಆಮ್ಲಗಳು ವಿಭಜನೆಯಾಗಿ ಸಕ್ಕರೆಯಾಗಿ ರೂಪಾಂತರಗೊಳ್ಳುತ್ತವೆ. ಇದರಿಂದ ಹಣ್ಣಿನಲ್ಲಿ ತಳಿ ಆಧರಿಸಿ ಮಧುರವಾದ ಸುವಾಸನೆ ಬರುತ್ತದೆ.

ಕಟಾವಿನ ನಂತರದ ಪ್ರಕ್ರಿಯೆ

ಕಟಾವಿನ ನಂತರದ ಪ್ರಕ್ರಿಯೆ

ರೈತರು ಕಾಯಿಗಳನ್ನು ಕಟಾವು ಮಾಡಿದ ನಂತರ ಒಂದೆರೆಡು ಗಂಟೆಗಳ ಕಾಲ ನೆರಳಿನಲ್ಲಿಡಬೇಕು. ಸೋನೆ ಅಂಟಿಕೊಂಡಿದ್ದನ್ನು ಚೆನ್ನಾಗಿ ತೊಳೆದು ನಂತರ ಬಟ್ಟೆಯಿಂದ ಒರೆಸಿ ಪ್ಲಾಸ್ಟಿಕ್ ಕ್ರೇಟ್‌ಗಳಲ್ಲಿ ಸಂಗ್ರಹಿಸಬೇಕು. ಅನಂತರ 55 ಡಿಗ್ರಿ ಸೆಂಟಿಗ್ರೇಡ್ ಉಷ್ಣತೆಯ ಬಿಸಿ ನೀರಿನಲ್ಲಿ ಐದು ನಿಮಿಷಗಳ ಕಾಲ ಮುಳುಗಿಸಬೇಕು. ಅನಂತರ ಬಟ್ಟೆಯಿಂದ ಒರೆಸಬೇಕು. ಇದರಿಂದಾಗಿ ತೊಟ್ಟಿನ ಬುಡ ಕೊಳೆಯುವ ರೋಗ ನಿಯಂತ್ರಿಸಬಹುದು. ಸಿಪ್ಪೆಯ ಅಡಿಯಲ್ಲಿ ಹಣ್ಣಿನ ನೊಣ ಮೊಟ್ಟೆ ಇಟ್ಟಿದ್ದರೂ ನಾಶವಾಗುತ್ತದೆ. ಒಣಗಿದ ಕಾಯಿಗಳನ್ನು ಪ್ಲಾಸ್ಟಿಕ್ ಬುಟ್ಟಿಯಲ್ಲಿ ತಲೆ ಕೆಳಗಾಗಿ ಇಟ್ಟು ಮೇಲೆ ಭತ್ತದ ಹುಲ್ಲು ಅಥವಾ ಪೇಪರ್ ಚೂರುಗಳನ್ನು ಹರಡಬೇಕು.

ಬಾಳೆ ಹಣ್ಣು ಇಟ್ಟರೆ ಬೇಗ ಹಣ್ಣಾಗುತ್ತದೆ

ಬಾಳೆ ಹಣ್ಣು ಇಟ್ಟರೆ ಬೇಗ ಹಣ್ಣಾಗುತ್ತದೆ

ರೈತರು ಹೀಗೆ ಶೇಖರಿಸಿದ ಕಾಯಿಗಳು 4-5 ದಿನಗಳಲ್ಲಿ ಹಣ್ಣಾಗುತ್ತದೆ. ಮಾವಿನ ಕಾಯಿಗಳ ಜೊತೆಗೆ 4-5 ಬಾಳೆ ಹಣ್ಣುಗಳನ್ನು ಇಟ್ಟರೆ ಬೇಗ ಹಣ್ಣಾಗುವುದು. ಸ್ವಲ್ಪ ಎಳೆ ಕಾಯಿಗಳನ್ನು ಕೊಯ್ದಿದ್ದರೆ ಬುಟ್ಟಿಯಲ್ಲಿ ಸಂಗ್ರಹಿಸುವ ಮೊದಲು 10 ಲೀಟರ್ ನೀರಿಗೆ 1-2 ಮಿ.ಲೀ. ಇಥಲೀನ್ ದ್ರಾವಣ ಬೆರೆಸಿಕೊಂಡು ಕಾಯಿಗಳನ್ನು 5-10 ಸೆಕೆಂಡು ಮುಳುಗಿಸಿ ತೆಗೆಯಿರಿ. ಅನಂತರ ಬುಟ್ಟಿಯಲ್ಲಿ ಹರಡಿಕೊಳ್ಳಿ. ಪ್ಲಾಸ್ಟಿಕ್ ಕ್ರೇಟ್‌ಗಳಲ್ಲಿ ಸಂಗ್ರಹಿಸಿದ ಹಣ್ಣುಗಳನ್ನು ಶುದ್ಧ ಇಥಲೀನ್ ಅನಿಲ ಹಾಯಿಸಿ ಹಣ್ಣಾಗಿಸುವ ಕೊಠಡಿಗಳಲ್ಲಿ ಗಾಳಿಯಾಡದಂತೆ ಇಡಬೇಕು.

  Mumbai Indians ಗೆಲ್ಲುವಂತಹ ಪಂದ್ಯದಲ್ಲಿ ಸೋತಿದ್ದು ಹೀಗೆ | Oneindia Kannada
  ನೆಲದ ಮೇಲೆ ಹಲ್ಲು ಹಾಕಿ ಹರಡಿ

  ನೆಲದ ಮೇಲೆ ಹಲ್ಲು ಹಾಕಿ ಹರಡಿ

  ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ , ಬೆಂಗಳೂರು ಮಾವಿನ ಹಣ್ಣನ್ನು ಮಾಗಿಸುವ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸಿದೆ. 1 ಟನ್ ಅಥವಾ ಹೆಚ್ಚಿನ ಪ್ರಮಾಣದ ಹಣ್ಣುಗಳನ್ನು ಮಾಗಿಸಲು ಪಾಲಿಥೀನ್ ಕೊಠಡಿಗಳು ಲಭ್ಯವಿದ್ದು ಇವುಗಳಲ್ಲಿ ಹಣ್ಣುಗಳನ್ನು ಶೇಖರಿಸಿ ಇಥಲೀನ ದ್ರಾವಣ ಹಾಯಿಸುವುದರ ಮೂಲಕ ಹಣ್ಣುಗಳನ್ನು ಬೇಗನೆ ಮತ್ತು ಒಂದೇ ಸಮನಾಗಿ ಮಾಗಿಸಬಹುದು.

  ಗ್ರಾಮೀಣ ಭಾಗದಲ್ಲಿ ರೈತರು ಇಂತಹ ಯಾವುದೇ ಸೌಲಭ್ಯಗಳಿಲ್ಲದಿದ್ದಲ್ಲಿ ಪೂರ್ಣವಾಗಿ ಪಕ್ವಗೊಂಡ ಹಣ್ಣುಗಳನ್ನು ಗಾಳಿಯಾಡದ ಕೋಣೆಯಲ್ಲಿ ಒಂದೇ ಪದರಿನಲ್ಲಿ ಹರಡಿ ನೆಲ್ಲು ಹುಲ್ಲು ಹಾಕಿ ಮಾಗಲು ಬಿಟ್ಟರೆ ಒಂದೇ ವಾರದಲ್ಲಿ ಹಣ್ಣುಗಳು ಮಾಗುತ್ತವೆ.

  ಯಾವುದೇ ಕಾರಣಕ್ಕೂ ಹಾನಿಕಾರಕ ರಾಸಾಯನಿಕಗಳನ್ನು ಬಳಸಿ ಹಣ್ಣುಗಳನ್ನು ಮಾಗಿಸಬಾರದು. ಇದು ಕಾನೂನು ಬಾಹಿರವಾಗಿದ್ದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತೋಟಗಾರಿಕೆ ಇಲಾಖೆ ಎಚ್ಚರಿಸಿದೆ.

  English summary
  Mango season started. Horticulture department tips to farmers for Mango ripening process naturally.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X