ಬಿ. ಟಿ. ಹತ್ತಿಯ ಬೇಸಾಯ; ರೈತರಿಗೆ ಸಲಹೆಗಳು
ಬೆಂಗಳೂರು, ಜನವರಿ 24: ಬಿ. ಟಿ. ಹತ್ತಿ ಬೆಳೆಯುವ ರೈತರಿಗೆ ರಾಯಚೂರು ವಿಶ್ವ ವಿದ್ಯಾನಿಲಯದ ಕೃಷಿ ವಿಜ್ಞಾನಿಗಳು ಸಲಹೆಗಳನ್ನು ನೀಡಿದ್ದಾರೆ. ಕಳಪೆ ಬೀಜವನ್ನು ಸರಬರಾಜು, ಮಾರಾಟದ ಬಗ್ಗೆಯೂ ಎಚ್ಚರಿಂದ ಇರಬೇಕು ಎಂದು ರೈತರಿಂದ ಸಲಹೆ ನೀಡಲಾಗಿದೆ.
ಬಿ.ಟಿ. ಹತ್ತಿಯ ಬಿತ್ತನೆ ಕಾಲಾವಧಿಯು ಜೂನ್ ಮೊದಲ ವಾರದಿಂದ ಜುಲೈ ಮೂರನೇ ವಾರದವರೆಗೆ ಇದ್ದು, ಈ ಕಾಲಾವಧಿಯ ಶಿಫಾರಸ್ಸನ್ನು ಅನುಸರಿಸುವಂತೆ ಕೃಷಿ ವಿಜ್ಞಾನಿಗಳು ಸೂಚಿಸಿದ್ದಾರೆ.

ಹತ್ತಿ ಬೆಳೆಯುವ ರೈತರಿಗಾಗಿ ವಿವಿಧ ಬೀಜದ ಕಂಪನಿಗಳು ಅನೇಕ ಬಿ.ಟಿ. ಹತ್ತಿ ತಳಿಗಳನ್ನು ಮಾರಾಟಕ್ಕೆ ದಾಸ್ತಾನು ಇಟ್ಟಿರುತ್ತಾರೆ. ಈ ಎಲ್ಲಾ ತಳಿಗಳು ಬಿ.ಟಿ. ತಳಿಗಳಾಗಿದ್ದು, ಅವುಗಳಲ್ಲಿ ಹೆಚ್ಚಿನ ವ್ಯತ್ಯಾಸವಿರುವುದಿಲ್ಲ ಎಂದು ಹೇಳಿದ್ದಾರೆ.
ರೈತರು ಯಾವುದೇ ಒಂದು ಕಂಪನಿಯ ಯಾವುದಾದರೊಂದು ತಳಿಯು ಬೇಕೆಂದಲ್ಲಿ ಮಾರುಕಟ್ಟೆಯಲ್ಲಿ ಅಂತಹ ತಳಿಯ ಕೊರತೆಯುಂಟಾಗಿ, ಅಧಿಕ ಬೆಲೆಗೆ ಮಾರಾಟವಾಗುವುದು ಹಾಗೂ ಕಳಪೆ ಬೀಜವನ್ನು ಸರಬರಾಜು ಮಾಡುವುದು ಇತ್ಯಾದಿ ಅವ್ಯವಹಾರ ಪ್ರಾರಂಭವಾಗಿ, ರೈತರಿಗೆ ಅನ್ಯಾಯ ವಾಗುವುದೆಂಬುದನ್ನು ತಿಳಿಯಬೇಕು.
ಪ್ಯಾಕೆಟ್ ಪರಿಶೀಲನೆ ನಡೆಸಿ; ಹತ್ತಿ ಬೆಳೆಗಾರರು ಮಾರುಕಟ್ಟೆಯಲ್ಲಿರುವ ವಿವಿಧ ತಳಿಗಳಲ್ಲಿ ಲಭ್ಯತೆಯ ಮೇಲೆ ಆಯ್ಕೆ ಮಾಡಿಕೊಳ್ಳಬೇಕು. ಆದರೆ ಕೊಳ್ಳುವ ಮುನ್ನ ಪ್ಯಾಕೇಟ್‌ನ್ನು ಪರಿಶೀಲಿಸಿ, ತಯಾರಕರ ಕಂಪನಿಯ ಪೂರ್ಣ ಹೆಸರು ಹಾಗೂ ವಿಳಾಸ ಸರಿಯಿರುವುದನ್ನು ಹಾಗೂ ಅದರೊಂದಿಗೆ ನಿಜ ಚೀಟಿ ಪತ್ರ ಇರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು.
ಬಿತ್ತನೆ ಬೀಜವನ್ನು ಅಧಿಕೃತ ಪರವಾನಿಗೆ ಹೊಂದಿರುವವರಿಂದ ಕೊಂಡುಕೊಳ್ಳಬೇಕು ಹಾಗೂ ಮಾರಾಟಗಾರರಿಂದ ಕಡ್ಡಾಯವಾಗಿ ತಪ್ಪದೇ ರಸೀದಿಯನ್ನು ಕೇಳಿ ಪಡೆಯಬೇಕು. ಆ ತಳಿಯ ಬೇಸಾಯ ಪದ್ಧತಿಯ ಬಗ್ಗೆ ಕರಪತ್ರವನ್ನು ಪಡೆಯಬೇಕು.
ಬಿತ್ತನೆ ಮಾಡಿದ ನಂತರ ಬೆಳೆ ಕಟಾವು ಆಗುವವರೆಗೆ ಬೀಜದ ಚೀಲ, ಅಲ್ಪ ಪ್ರಮಾಣದ ಬೀಜ, ರಸೀದಿ ಹಾಗೂ ಕರಪತ್ರವನ್ನು ಕಾಯ್ದಿರಿಸಿಕೊಳ್ಳಬೇಕು. ಬೆಳೆಯಲ್ಲಿ ಸಮಸ್ಯೆಯುಂಟಾದಾಗ ಇವುಗಳು ಪ್ರಯೋಜನಕ್ಕೆ ಬರುತ್ತವೆ ಎಂದು ತಿಳಿಸಲಾಗಿದೆ.
ಪ್ರತಿ ಬಿ.ಟಿ. ಹತ್ತಿಯ ಪ್ಯಾಕೇಟ್ ಜೊತೆ 125 ಗ್ರಾಂ. ಬಿ.ಟಿ. ಯೇತರ (ರೆಪ್ಯೂಜಿ) ಬೀಜಗಳನ್ನು ನೀಡುತ್ತಿದ್ದು, ರೈತರು ತಮ್ಮ ಹೊಲದ ಸುತ್ತಲೂ 4 ಸಾಲಿನಲ್ಲಿ ಈ ಬೀಜಗಳನ್ನು ಕಡ್ಡಾಯವಾಗಿ ಬಿತ್ತನೆ ಮಾಡಬೇಕು. ಇದರಿಂದ ಕಾಯಿಕೊರಕ ಹುಳುವಿನಲ್ಲಿ ಬಿ.ಟಿ. ನಿರೋಧಕ ಶಕ್ತಿಯನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಹಾಗೂ ಕಾಯಿಕೊರಕದ ಬಾಧೆಯನ್ನು ಗುರುತಿಸಲು ಅನುಕೂಲವಾಗುತ್ತದೆ.
ಕೆಲವೊಂದು ರೈತರು ಬಿ.ಟಿ. ಯೇತರ ಬೀಜವನ್ನು ಹುಸಿ ಗುಣಿಗಳಲ್ಲಿ ಬಳಸುತ್ತಿರುವುದು ಕಂಡು ಬರುತ್ತದೆ. ಆದರೆ ಹುಸಿಗುಣಿಗಳಿಗಾಗಿ ಬಳಸದೇ ಮೇಲೆ ತಿಳಿಸಿದಂತೆ ಅನುಸರಿಸಲು ರೈತರಿಗೆ ಕೋರಿದೆ.
ಬಿತ್ತನೆ ಬೀಜಕ್ಕಾಗಿ ಹತ್ತಿ ಬೆಳೆಯುವ ರೈತರು ಕಡ್ಡಾಯವಾಗಿ ಕಂಪನಿಯೊಂದಿಗೆ ಅಥವಾ ಸೀಡ್ ಆರ್ಗನೈಸರ್ ಇವರೊಂದಿಗೆ ಒಡಂಬಡಿಕೆ ಮಾಡಿಕೊಂಡಿರಬೇಕು.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಹಾಗೂ ಈ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications