ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಡಿಕೆಯಲ್ಲಿ ಕೊಳೆ ರೋಗ ಹತೋಟಿಗೆ ರೈತರಿಗೆ ಸಲಹೆಗಳು

|
Google Oneindia Kannada News

ಶಿವಮೊಗ್ಗ, ಆಗಸ್ಟ್ 11 : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅಡಿಕೆ ಬೆಳೆಯುವ ರೈತರು ಗಾಳಿಯಿಂದ ಮರಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ಮಳೆಗಾಲದಲ್ಲಿ ಕೊಳೆ ರೋಗ ಅಡಿಕೆ ಮರಗಳನ್ನು ಕಾಡುತ್ತದೆ.

ಕೃಷಿ ಇಲಾಖೆ ಅಡಿಕೆ ಮರಗಳಲ್ಲಿ ಕೊಳೆ ರೋಗ ಹತೋಟಿಗೆ ರೈತರಿಗೆ ಹಲವು ಸಲಹೆಗಳನ್ನು ನೀಡಿದೆ.
ಪ್ರಸ್ತುತ ಹೆಚ್ಚು ಮಳೆ, ಮೋಡಕವಿದ ಮಾತಾವರಣದಿಂದಾಗಿ ತೋಟದಲ್ಲಿ ನೀರು ನಿಲ್ಲುತ್ತಿದೆ. ಹೆಚ್ಚಾದ ಮಣ್ಣಿನ ತೇವಾಂಶ, ಸೂರ್ಯನ ಬೆಳಕಿನ ಕೊರತೆಯಿಂದ ಕೊಳೆ ರೋಗವು ಹೆಚ್ಚಾಗುವ ಸಾಧ್ಯತೆ ಇದೆ.

ಅಡಿಕೆ ಬೆಳೆಯುವ ರೈತರು ಕೈಗೊಳ್ಳಬೇಕಾದ ಚಟುವಟಿಕೆಗಳು ಅಡಿಕೆ ಬೆಳೆಯುವ ರೈತರು ಕೈಗೊಳ್ಳಬೇಕಾದ ಚಟುವಟಿಕೆಗಳು

ಕೊಳೆ ರೋಗವನ್ನು ಹತೋಟಿಗೆ ತರಲು ರೈತರು ಕೆಲವು ಮುಂಜಾಗ್ರತ ಕ್ರಮಗಳನ್ನು ಅನುಸರಿಸಬೇಕು ಎಂದು ಶಿವಮೊಗ್ಗದ ನವಿಲೆ ಅಡಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ನಾಗರಾಜಪ್ಪ ಅವರು ಮಾಹಿತಿ ನೀಡಿದ್ದಾರೆ.

170 ಅಡಿಕೆ ಮರ ಕಡಿದ ಅಧಿಕಾರಿಗಳು: ಅಜ್ಜಿಯ ಆಕ್ರಂದನ 170 ಅಡಿಕೆ ಮರ ಕಡಿದ ಅಧಿಕಾರಿಗಳು: ಅಜ್ಜಿಯ ಆಕ್ರಂದನ

Tips To Protect Arecanut Plant In Rainy Season

ಕೆಳಗೆ ಬಿದ್ದಿರುವ ರೋಗ ಪೀಡಿತ ಕಾಯಿ ಹಾಗೂ ಒಣಗಿದ ಹಿಂಗಾರಗಳನ್ನು ಆರಿಸಿ ತೆಗೆದು ಸುಡಬೇಕು. ತೋಟಗಳಲ್ಲಿ ಹೆಚ್ಚಾಗಿ ನೀರು ನಿಲ್ಲದಂತೆ ಬಸಿಗಾಲುವೆ ಚೊಕ್ಕ ಮಾಡಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಅಡಿಕೆ ಬೆಳೆಗೆ ಹೊಸ ರೋಗ; ಮಲೆನಾಡ ರೈತರಲ್ಲಿ ಆತಂಕಅಡಿಕೆ ಬೆಳೆಗೆ ಹೊಸ ರೋಗ; ಮಲೆನಾಡ ರೈತರಲ್ಲಿ ಆತಂಕ

ಗಾಳಿ ಆಡುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯಬೇಕು. ಮುಂಜಾಗ್ರತವಾಗಿ ಶೇ.1ರ ಬೋರ್ಡೋದ್ರಾವಣ ಅಥವಾ ಶೇ.0.2 ರ ಮೆಟಲಾಕ್ಸಿಲ್ ಎಂ.ಜಡ್ (2 ಗ್ರಾಂ 1 ಲೀ ನೀರಿನಲ್ಲಿ ಕರಗಿಸಿ) ಅಥವಾ ಶೇ. 0.3 ರ ತಾಮ್ರದ ಆಕ್ಸಿಕ್ಲೋರೈಡ್ (3 ಗ್ರಾಂ 1.0 ಲೀ ನೀರಿನಲ್ಲಿ ಕರಗಿಸಿ) ದಿಂದ ಗೊನೆಗಳಿಗೆ ಹಾಗೂ ಎಲೆ ತೊಟ್ಟು, ಹೊಡೆ ಭಾಗ ಮತ್ತು ಸುಳಿಭಾಗಗಳು ಚೆನ್ನಾಗಿ ನೆನೆಯುವಂತೆ ಸೂಕ್ತ ಅಂಟಿನೊಂದಿಗೆ (ರಾಳ) ಸಿಂಪರಣೆ ಮಾಡಬೇಕು ಎಂದು ಹೇಳಿದ್ದಾರೆ.

ಈ ಮೇಲಿನ ಕ್ರಮಗಳನ್ನು ಸಾಮೂಹಿಕವಾಗಿ ಏಕಕಾಲದಲ್ಲಿ ಅನುಸರಿಸಿದಲ್ಲಿ ಮರಗಳನ್ನು ಸುಳಿಕೊಳೆ ಅಥವಾ ಶಿರಕೊಳೆಯಿಂದ ಸಾಯುವುದನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

English summary
Agriculture department tips for farmers to protect Arecanut plant in the rainy season.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X