ಧಾರವಾಡ: ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಸಾವು
ಧಾರವಾಡ, ಜೂನ್ 02 : ಕಬ್ಬಿನ ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಬಸವರಾಜ್ ಕ್ಯಾರಕೊಪ್ಪ (52) ಮತ್ತು ಚನ್ನಬಸಪ್ಪ ಧೂಳಿಕೊಪ್ಪ (45) ಮೃತ ದುರ್ದೈವಿಗಳು. ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಆಕಸ್ಮಿಕವಾಗಿ ತುಂಡರಿಸಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.












Click it and Unblock the Notifications