ಮಂಡ್ಯದಲ್ಲಿ ಸಿಡಿಲು ಬಡಿದು 25 ಕುರಿಗಳು ಬಲಿ, ಇಬ್ಬರು ಗಂಭೀರ
ದೊದ್ದನಕಟ್ಟೆ ಗ್ರಾಮದ ಶಶಿಗೌಡ ಅವರ ಪುತ್ರರಾದ ರಮೇಶ್ ಮತ್ತು ರಾಜು ಸಿಡಿಲು ಬಡಿದು ಗಾಯಗೊಂಡಿದ್ದರೆ, ಅವರಿಗೆ ಸೇರಿದ ಸುಮಾರು ಇಪ್ಪತ್ತೈದು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.
ಮಂಡ್ಯ, ಮೇ 10: ರಾಜ್ಯಾದ್ಯಂತ ಸಿಡಿಲಿನ ಆರ್ಭಟ ಜೋರಾಗಿದೆ. ಕೆ.ಆರ್.ಪೇಟೆ ತಾಲೂಕಿನ ಗವೀಮಠದ ಬಳಿ ಕುರಿ ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಇಬ್ಬರು ರೈತರು ಗಂಭೀರ ಗಾಯಗೊಂಡಿದ್ದರೆ, ಇಪ್ಪತ್ತೈದು ಕುರಿಗಳು ಸಾವನಪ್ಪಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ದೊದ್ದನಕಟ್ಟೆ ಗ್ರಾಮದ ಶಶಿಗೌಡ ಅವರ ಪುತ್ರರಾದ ರಮೇಶ್ ಮತ್ತು ರಾಜು ಸಿಡಿಲು ಬಡಿದು ಗಾಯಗೊಂಡಿದ್ದರೆ, ಅವರಿಗೆ ಸೇರಿದ ಸುಮಾರು ಇಪ್ಪತ್ತೈದು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ.

ದೊಡ್ದನಕಟ್ಟೆ ಗ್ರಾಮದ ಗವೀಮಠದ ಬಳಿಯಲ್ಲಿರುವ ತಮ್ಮ ಜಮೀನಿನಲ್ಲಿ ರಮೇಶ್ ಮತ್ತು ರವಿ ಅವರು ಕುರಿ ಮೇಯಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಮಳೆ ಸುರಿದಿದೆ. ಕೂಡಲೇ ಇವರಿಬ್ಬರು ಮರದ ಬಳಿಗೆ ತೆರಳಿ ಆಶ್ರಯ ಪಡೆಯಲು ಮುಂದಾಗಿದ್ದಾರೆ. ಇದೇ ವೇಳೆಗೆ ಕುರಿಗಳು ಕೂಡ ಮರದ ಬಳಿಗೆ ಬಂದಿವೆ.

ಅಷ್ಟರಲ್ಲೇ ಭಾರೀ ಶಬ್ದದೊಂದಿಗೆ ಸಿಡಿಲು ಬಡಿದಿದ್ದು, ಪರಿಣಾಮ ರಮೇಶ್ ಮತ್ತು ರವಿ ಅವರು ಗಾಯಗೊಂಡಿದ್ದರೆ ಇಪ್ಪತ್ತೈದು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು 108 ಆ್ಯಂಬುಲೆನ್ಸ್ ಮೂಲಕ ಇಬ್ಬರು ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications