ಧಾರವಾಡ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಎರಡು ಹೆಕ್ಟೇರ್ ಕಬ್ಬು ಭಸ್ಮ
ಧಾರವಾಡ, ಅಕ್ಟೋಬರ್, 25: ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಕಬ್ಬಿನ ಹೊಲಕ್ಕೆ ಬೆಂಕಿ ಬಿದ್ದ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೇಟಗೇರಿ ಗ್ರಾಮದ ಜೋಗಮ್ಮನವರು ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದ್ದು, ಎರಡು ಹೆಕ್ಟೇರ್ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಳಿಕ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕ ಆಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಲ್ಲದೆ ಅಗ್ನಿ ಶಾಮಕ ಸಿಬ್ಬಂದಿ ಅಕ್ಕ ಪಕ್ಕದ ಕಬ್ಬಿನ ಗದ್ದೆಗೆ ಬೆಂಕಿ ಆವರಿಸದಂತೆ ಸಮಯ ಪ್ರಜ್ಞೆ ಮೆರೆದಿದ್ದಾರೆ. ಇನ್ನು ಎಷ್ಟು ಹಾನಿಯಾಗಿದೆ ಎನ್ನುವ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ರೇಷ್ಮೆ ಬೆಳೆಗಾರರು ಕಂಗಾಲು
'ಅತಿಯಾದರೆ ಅಮೃತ ಕೂಡ ವಿಷ' ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳೆ ಉಳಿಸಿಕೊಳ್ಳಲು ರೈತರು ಸಿಂಪಡಣೆ ಮಾಡುವ ಔಷಧವೇ ಬೆಳೆ ಹಾನಿ ಮಾಡುತ್ತಿದ್ದು, ಇದು ಅನ್ನದಾತರಿಗೆ ಸಂಕಷ್ಟ ತಂದೊಡ್ಡುತ್ತಿದೆ. ಕಳೆನಾಶಕ ಹಾಗೂ ಇತರ ಬೆಳೆಗಳಿಗೆ ಸಿಂಪಡಿಸುವ ಕೀಟನಾಶಕ ಔಷಧ ಹಿಪ್ಪುನೇರಳೆ ಸೊಪ್ಪನ್ನೇ ವಿಷವಾಗಿಸುತ್ತಿದ್ದು, ಈ ಸೊಪ್ಪು ತಿನ್ನುವ ರೇಷ್ಮೆ ಹುಳುಗಳು ಗೂಡು ಕಟ್ಟದೆ ರೇಷ್ಮೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಗುಣಮಟ್ಟದ ರೇಷ್ಮೆ ಉತ್ಪಾದನೆ ಮತ್ತು ಉತ್ಪಾದಕತೆಯನ್ನೂ ಗಮನದಲ್ಲಿಟ್ಟುಕೊಂಡು ರೇಷ್ಮೆ ಸಂಶೋಧನಾಲಯಗಳು ರೇಷ್ಮೆ ಹುಳುವಿನ ಹಲವಾರು ಹೊಸ ತಳಿಗಳನ್ನು ಅಭಿವೃದ್ಧಿಪಡಿಸಿವೆ. ಇದರ ಹೊರತಾಗಿಯೂ ಮಳೆ ಕೊರತೆ ಮತ್ತು ಕೀಟನಾಶಕ ಔಷಧಗಳ ಅತಿಯಾದ ಬಳಕೆಯಿಂದಾಗಿ ಹಿಪ್ಪುನೇರಳೆ ಇಳುವರಿ ಕುಂಠಿತವಾಗಿದೆ. ಇದು ರೇಷ್ಮೆ ಬೆಳೆಯ ಮೇಲೆ ನೇರ ಪರಿಣಾಮ ಉಂಟು ಮಾಡಿದೆ.
ಕರ್ನಾಟಕ ರಾಜ್ಯದ ದಕ್ಷಿಣ ಭಾಗದಲ್ಲಿ ಮಳೆಯಾಶ್ರಿತ ಪ್ರದೇಶ, ಬಯಲು ಸೀಮೆ, ಮಲೆನಾಡು ಹಾಗೂ ಅಧಿಕ ಉಷ್ಣಾಂಶವುಳ್ಳ ಪ್ರದೇಶಗಳಿದ್ದು, ರಾಜ್ಯದ ಎಲ್ಲಾ ಭೌಗೋಳಿಕ ಹಾಗೂ ವಿವಿಧ ಹವಾಮಾನಗಳಿಗೆ ಹೊಂದಿಕೊಂಡು ಉತ್ತಮ ಫಲಿತಾಂಶ ನೀಡುವ ಗಡಸು ತಳಿಗಳನ್ನು ಅಭಿವೃದ್ಧಿಪಡಿಸುವ ದಿಸೆಯಲ್ಲಿ ತಳಿ ಶಾಸ್ತ್ರಜ್ಞರು ಹಲವಾರು ಬಹುಸಂತತಿ ದ್ವಿತಳಿ/ ಸಂಕರಣ ತಳಿಗಳನ್ನು ಸಹ ಹೊರತಂದಿದ್ದು, ಹೆಚ್ಚಿನ ಮಾಹಿತಿಗಾಗಿ ರೇಷ್ಮೆ ಇಲಾಖೆಯ ಕಚೇರಿಗೆ ಭೇಟಿ ನೀಡಬಹುದಾಗಿದೆ.
ಈ ಬಾರಿ ಮುಂಗಾರು ಕೈಕೊಟ್ಟ ಪರಿಣಾಮವಾಗಿ ಕೃಷಿ ಉತ್ಪನ್ನಗಳ ಉತ್ಪಾದನೆ ಮೇಲೆ ಸಾಕಷ್ಟು ಪ್ರತಿಕೂಲ ಉಂಟು ಮಾಡಿತ್ತು. ಇದರ ಮುಂದುವರಿದ ಭಾಗವಾಗಿ ಜಿಲ್ಲೆಯ ಪ್ರಮುಖ ಬೆಳೆಯಾಗಿರುವ ಹಿಪ್ಪು ನೇರಳೆ ಸೊಪ್ಪು ಹಾಗೂ ರೇಷ್ಮೆಗೂಡು ಉತ್ಪಾದನೆ ಮೇಲೆ ಪ್ರಭಾವ ಬೀರಿದೆ.
ರೇಷ್ಮೆಗೂಡು ಉತ್ಪಾದನೆಯಲ್ಲಿ ಹಿಪ್ಪು ನೇರಳೆ ಸೊಪ್ಪು ಪ್ರಮುಖ ಕಚ್ಚಾಪದಾರ್ಥವಾಗಿ ಬಳಕೆ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಹಿಪ್ಪುನೇರಳೆ ಸೊಪ್ಪಿನ ತೋಟಗಳಲ್ಲಿ ಕೀಟಗಳ ಕಾಟ ಹೆಚ್ಚಾಗಿ ಕಂಡುಬರುತ್ತದೆ. ಅದರಲ್ಲೂ ಈ ಬಾರಿ ಮುಂಗಾರು ಮಳೆಯಾಗದ ಪರಿಣಾಮವಾಗಿ ಕೀಟಗಳ ಹಾವಳಿಯೂ ಹೆಚ್ಚಾಗಿದೆ.
ಇದು ಬೆಳೆ ಉತ್ಪಾದನೆಯ ಮೇಲೆ ನೇರ ಪರಿಣಾಮ ಉಂಟು ಮಾಡುತ್ತಿದೆ. ಬೆಳೆಗಾರರು ಈ ಕೀಟಗಳ ಹಾವಳಿ ತಪ್ಪಿಸುವ ಸಲುವಾಗಿ ವಿವಿಧ ರೀತಿಯ ರಾಸಾಯನಿಕ ಮಿಶ್ರಿತ ಔಷಧಗಳನ್ನು ಅತಿ ಹೆಚ್ಚು ಸಿಂಪಡಣೆ ಮಾಡುತ್ತಿದ್ದಾರೆ. ರಾಸಾಯನಿಕಗಳ ಅತಿಯಾದ ಬಳಕೆಯು ಇಳುವರಿ ಕುಂಠಿತವಾಗುವಂತೆ ಮಾಡುತ್ತಿದೆ.
ಅತಿಯಾದ ರಾಸಾಯನಿಕ ಬಳಕೆಯಿಂದಾಗಿ ಚಂದ್ರಿಕೆಗೆ ಹಳು ಹಾಕಿ ಸೊಪ್ಪು ಹಾಕಿದರೂ ಹುಳುಗಳು ಗೂಡು ಕಟ್ಟುತ್ತಿಲ್ಲ. ಹಿಪ್ಪುನೇರಳೆ ಸೊಪ್ಪು ತಿಂದ ಬಳಿಕವೂ ಹುಳು ಗೂಡು ಕಟ್ಟದ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಇಳುವರಿ ಕಡಿಮೆಯಾಗುತ್ತಿದೆ. ಗುಣಮಟ್ಟದ ರೇಷ್ಮೆಗೂಡು ಉತ್ಪಾದನೆಯೂ ರೈತರಿಗೆ ಸಾಕಷ್ಟು ತಲೆನೋವಾಗಿ ಪರಿಣಮಿಸಿದೆ. ಗುಣಮಟ್ಟದ ಗೂಡು ಇಳುವರಿ ಕಡಿಮೆಯಾಗಿರುವ ಕಾರಣ ರೇಷ್ಮೆ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಗೂಡು ಮಾರಾಟವಾಗುತ್ತಿದೆ.
ರೇಷ್ಮೆ ಬೆಳೆಗಾರರು ಹೇಳುವಂತೆ ಕಳೆದ ಒಂದು ದಶಕದ ಹಿಂದೆ ಹಿಪ್ಪುನೇರಳೆಯನ್ನು ಯಾವುದೇ ಔಷಧ ಸಿಂಪಡಣೆ ಮಾಡದ ರೀತಿಯಲ್ಲಿ ಬೆಳೆಯಲಾಗುತ್ತಿತ್ತು. ಅಂದು ಕೀಟಬಾಧೆಯೂ ಕಡಿಮೆ ಇತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಕೀಟಗಳ ಹಾವಳಿ ಅಧಿಕವಾಗುತ್ತಿದೆ. ಇದು ಸಾಕಷ್ಟು ಸವಾಲುಗಳನ್ನು ಎದುರಿಸುವಂತೆ ಮಾಡಿವೆ.












Click it and Unblock the Notifications