2 ವರ್ಷದ ಕೃಷಿ ಡಿಪ್ಲೋಮಾ ಕೋರ್ಸ್, ಅರ್ಜಿ ಹಾಕಲು ಅರ್ಹತೆಗಳು
ಬೆಂಗಳೂರು, ಜುಲೈ 20: ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು ಎರಡು ವರ್ಷದ ಕೃಷಿ ಡಿಪ್ಲೋಮಾ ಕೋರ್ಸ್ ಅಧಿಸೂಚನೆ ಪ್ರಕಟಿಸಿದೆ. 2024-25ನೇ ಶೈಕ್ಷಣಿಕ ವರ್ಷಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಹಾಕಲು 10/8/2024 ಕೊನೆಯ ದಿನವಾಗಿದೆ.
ಸರ್ಕಾರದ ಅಧೀನ ಕಾರ್ಯದರ್ಶಿಗಳು, ಕೃಷಿ ಇಲಾಖೆ, ಶಿಕ್ಷಣ ನಿರ್ದೇಶಕರು, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು ಮತ್ತು ಕುಲಪತಿಗಳು ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು ಇವರ ಅನುಮೋದನೆಯಂತೆ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ.

ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರಿನ ಅಧೀನದಲ್ಲಿರುವ ಕೃಷಿ ಮಹಾವಿದ್ಯಾಲಯ, ವಿ.ಸಿ. ಫಾರಂ, ಮಂಡ್ಯದಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎರಡು ವರ್ಷಗಳ ಡಿಪ್ಲೋಮಾ (ಕೃಷಿ) ಕೋರ್ಸ್‌ಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಡಿಪ್ಲೋಮಾ (ಕೃಷಿ)ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುತ್ತದೆ.
ಪ್ರವೇಶ, ಅರ್ಹತೆ: ಕೃಷಿ ವಿಶ್ವವಿದ್ಯಾನಿಲಯದಲ್ಲಿ ಡಿಪ್ಲೋಮಾ (ಕೃಷಿ) ಕೋರ್ಸ್‌ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್. ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು (ಪ.ಜಾ./ ಪ.ಪಂ./ ಪ್ರವರ್ಗ-1 ರವರುಗಳಿಗೆ ಕನಿಷ್ಠ ಶೇ.40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು).
ದಿನಾಂಕ 30/06/2024ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50ರಷ್ಟು ಸೀಟುಗಳನ್ನು ಡಿಪ್ಲೋಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ.
ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೃಷಿ ವಿಶ್ವವಿದ್ಯಾನಿಲಯ ಜಿ.ಕೆ.ವಿ.ಕೆ., ಬೆಂಗಳೂರು-560065, ವೆಬ್‌ಸೈಟ್ www.uasbangalore.edu.in ನಲ್ಲಿ 10/08/2024ರವರೆಗೆ ಡೌನ್‌ಲೋಡ್ ಮಾಡಬಹುದು.
ಈ ರೀತಿ ವೆಬ್‌ಸೈಟ್ ಮುಖಾಂತರ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು, ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ 10/08/2024ರೊಳಗೆ ಕಳುಹಿಸಿಕೊಡಬೇಕು. ದಿನಾಂಕ 11/08/2024ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದವರಿಗೆ ರೂ. 500, ಪ.ಜಾ./ ಪ.ಪಂ./ ಪ್ರವರ್ಗ-1 ಅವರಿಗೆ ರೂ. 250 ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‌ಗಳ (Nationalised Bank) ಮೂಲಕ ಡಿಡಿಯನ್ನು ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿಗಳನ್ನು ಕುಲಸಚಿವರು, ಕೃಷಿ ವಿಶ್ವವಿದ್ಯಾನಿಲಯ, ಜಿ.ಕೆ.ವಿ.ಕೆ., ಬೆಂಗಳೂರು-560065 ಇಲ್ಲಿಗೆ ದಿನಾಂಕ 10/08/2024ರ (ಸಂಜೆ 4 ಗಂಟೆ) ಒಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು. ದಿನಾಂಕ 11/08/2024ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಆಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‌ಸೈಟ್ ಮುಖಾಂತರ ತಿಳಿಸಲಾಗುವುದು.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಯಾವುದೇ ಉದ್ಯೋಗ ಭರವಸೆಯ ಆಧಾರದ ಮೇಲೆ ಮೇಲ್ಕಂಡ ಕೋರ್ಸ್‌ನ್ನು ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.












Click it and Unblock the Notifications