ಅತ್ಯುತ್ತಮ ರೈತ ಮತ್ತು ರೈತ ಮಹಿಳಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 27: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರಾಜ್ಯ ಮಟ್ಟದ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ (ತನ್ನ ಆಡಳಿತದ ವ್ಯಾಪ್ತಿಯಲ್ಲಿ ಬರುವ 10 ಜಿಲ್ಲೆಗಳ) ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ಅತ್ಯುತ್ತಮ ರೈತ ಮತ್ತು ರೈತ ಮಹಿಳಾ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಿದೆ.
ಈ ಪ್ರಶಸ್ತಿಗಳನ್ನು 2017 ರ ನವೆಂಬರ್ ತಿಂಗಳಿನಲ್ಲಿ ಆಯೋಜಿಸಲಿರುವ ಕೃಷಿಮೇಳ - 2017 ರ ಸಂದರ್ಭದಲ್ಲಿ ನೀಡಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 9 ಕೊನೆಯ ದಿನವಾಗಿರುತ್ತದೆ.

ದಿವಂಗತ ಸಿ. ಬೈರೇಗೌಡ ರಾಜ್ಯ ಮಟ್ಟದ ಪ್ರಶಸ್ತಿ ಹಾಗೂ ಡಾ. ಎಂ.ಹೆಚ್. ಮರಿಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ಪ್ರಶಸ್ತಿ, ಡಾ. ಆರ್ ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ, ಡಾ. ಆರ್. ದ್ವಾರಕೀನಾಥ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ ಹಾಗೂ ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ರೈತ ಮಹಿಳಾ ಪ್ರಶಸ್ತಿಗಾಗಿ ( ರಾಜ್ಯ ಮಟ್ಟದ ಪ್ರಶಸ್ತಿಗಾಗಿ) ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ರೈತ ಮಹಿಳಾ ಪ್ರಶಸ್ತಿ (ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ) ತಾಲ್ಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ ಮತ್ತು ಯುವ ರೈತ ಮಹಿಳಾ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆ ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರವರ ಕಚೇರಿ, ವಿಸ್ತರಣಾ ನಿರ್ದೇಶಕರ ಕಚೇರಿ, ಹೆಬ್ಬಾಳ, ಬೆಂಗಳೂರು ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳೀ-ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ-ಮಾಗಡಿ, ಕಂದಲಿ-ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ. ಫಾರಂ-ಮಂಡ್ಯ, ಕುರುಬೂರು ಫಾರಂ-ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ), ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ-ಮೈಸೂರು) ದಲ್ಲಿ ದೊರೆಯುತ್ತದೆ. ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲೂ (www.uasbangalore.edu.in) ಲಭ್ಯವಿರುತ್ತದೆ.
ಹೆಚ್ಚಿನ ವಿವರಗಳಿಗೆ :
ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು - 560 024 ಇವರನ್ನು ಸಂಪರ್ಕಿಸಬಹುದಾಗಿದೆ ದೂರವಾಣಿ ಸಂಖ್ಯೆ 080-23418883 ಆಗಿರುತ್ತದೆ.












Click it and Unblock the Notifications