ಮುಂಗಾರು ಆರಂಭ; ರೈತರ ನೆರವಿಗೆ ಬಂದ ಕೇಂದ್ರ ಸರ್ಕಾರ

ನವದೆಹಲಿ, ಜೂನ್ 07 : ಲಾಕ್ ಡೌನ್ ಸಂಕಷ್ಟದ ನಡುವೆಯೇ ಮುಂಗಾರು ಹಂಗಾಮು ಆರಂಭವಾಗಿದೆ. ಕೃಷಿ ಚಟುವಟಿಕೆಗಳಿಗೆ ರೈತರು ಚಾಲನೆ ನೀಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಪರಿಷ್ಕರಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ರೈತರ ನೆರವಿಗೆ ನಿಂತಿದೆ.

Recommended Video

      Chiranjeevi Sarja | ಸ್ಯಾಡಲ್ ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ | Oneindia Kannada

      ಕೇಂದ್ರ ಸರ್ಕಾರ 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಪರಿಷ್ಕರಿಸಿದೆ. ಮುಂಗಾರು ಋತುವಿನಲ್ಲಿ ಬೆಳೆಯುವ ಪ್ರಮುಖ ಬೆಳೆಯಾದ ಭತ್ತದ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್‌ಗೆ 1,815 ರಿಂದ 1,868ಕ್ಕೆ ಏರಿಕೆಯಾಗಿದೆ.

      ಬೆಳೆಗಳನ್ನು ಬೆಳೆಯುವ ಖರ್ಚು ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಎಂಎಸ್‌ಪಿಯನ್ನು ಪರಿಷ್ಕರಣೆ ಮಾಡಿದೆ. ಈ ಬಾರಿ ಲಾಕ್ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ.

      Union Govt Hikes MSP For 14 Kharif Crops

      ಸರ್ಕಾರದ ಹೊಸ ಆದೇಶದ ಬಳಿಕ 2019-20ಕ್ಕೆ ಹೋಲಿಕೆ ಮಾಡಿದರೆ ಬೆಂಬಲ ಬೆಲೆಯಲ್ಲಿ ಅತಿ ಹೆಚ್ಚು ಏರಿಕೆ ಮಾಡಲಾಗಿದೆ. ಕರಿ ಎಳ್ಳು ಕ್ವಿಂಟಾಲ್‌ಗೆ 755 ರೂ., ಬಿಳಿ ಎಳ್ಳು 370 ರೂ., ಉದ್ದು 300 ರೂ., ಹತ್ತಿ 275 ರೂ. ಏರಿಕೆಯಾಗಿದೆ.

      ಕೇಂದ್ರ ಸರ್ಕಾರ ಬೆಳೆ ಬೆಳೆಯುವ ಖರ್ಚಿನ ಆಧಾರದ ಮೇಲೆ ಬೆಂಬಲ ಬೆಲೆಯನ್ನು ಪ್ರತಿ ವರ್ಷ ಪರಿಷ್ಕರಣೆ ಮಾಡಲಾಗುತ್ತದೆ ಎಂದು 2018-19ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು.

      ಮಳೆಗಾಲ ಆರಂಭವಾಗುವಾಗ ಬೆಳೆದು ಮಳೆಗಾಲದ ಕೊನೆಯಲ್ಲಿ ಕೊಯ್ಲು ಮಾಡುವ ಬೆಳೆಗಳನ್ನು ಖಾರಿಫ್ ಬೆಳೆಗಳು ಎಂದು ಕರೆಯಲಾಗುತ್ತದೆ. ಜೂನ್‌ನಿಂದ ಸೆಪ್ಟೆಂಬರ್ ಅವಧಿಯನ್ನು ಮುಂಗಾರು ಹಂಗಾಮು ಎಂದು ಪರಿಗಣಿಸಲಾಗುತ್ತದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+