ಕೃಷಿ ಚಟುವಟಿಕೆ ಆರಂಭ: ರಸಗೊಬ್ಬರ ಬಳಸಲು ರೈತರಿಗೆ ಸಲಹೆಗಳು
ಬೆಂಗಳೂರು, ಜೂನ್ 06: ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದಿದೆ. ನೈಋತ್ಯ ಮುಂಗಾರು ಮಳೆ ಆರಂಭಾಗಿದೆ. ರೈತರು ಕೃಷಿ ಚಟುವಟಿಕೆಯಲ್ಲಿ ಬ್ಯುಸಿಯಾಗಿದ್ದು, ಕೃಷಿ ಇಲಾಖೆ ರಸಗೊಬ್ಬರ ಬಳಕೆ ಮಾಡುವ ಕುರಿತು ರೈತರಿಗೆ ಸಲಹೆಗಳನ್ನು ನೀಡಿದೆ.
ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ 17 ಫೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ.

ಉಳಿದ 14 ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೋಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು, ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ.
ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ. ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ.
ರೈತರಿಗೆ ಸಲಹೆಗಳು: ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ ಹಿಂಡಿ ಮತ್ತಿತರ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೋಟ್ಯಾಷ್ ಲಭ್ಯವಿರುವುದಿಲ್ಲ.
ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೋಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.
ಶಿಫಾರಸು ಅನ್ವಯ ಬೆಳೆಗಳಿಗೆ ಸಾರಜನಕ, ರಂಜಕ, ಪೋಟ್ಯಾಷ್ ರಸಗೊಬ್ಬರಗಳನ್ನು 4:2:1ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೋಟ್ಯಾಷ್ ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಾಗಿರುತ್ತದೆ.
ಅಲ್ಲದೆ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೋಟ್ಯಾಷ್ ಒದಗಿಸುವ ಇತರೆ ಸಂಯುಕ್ತ (ಕಾಂಪ್ಲೆಕ್ಸ್) ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10 ಮತ್ತಿತರ ರಸಗೊಬ್ಬರಗಳನ್ನೂ ಸಹ ಬಳಸಬಹುದಾಗಿದೆ.
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದಿದೆ. 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದು ಈಗಾಗಲೇ ಮುನ್ಸೂಚನೆ ನೀಡಲಾಗಿದೆ. ರೈತರು ಈಗಾಗಲೇ ಮುಂಗಾರು ಹಂಗಾಮಿನ ಪೂರ್ವ ಸಿದ್ದತೆಯಲ್ಲಿದ್ದು, ಜೂನ್‌ನಲ್ಲಿ ಹಲವು ಜಿಲ್ಲೆಗಳಲ್ಲಿ ಭತ್ತ, ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಮುಸುಕಿನ ಜೋಳದ ಬಿತ್ತನೆ ಕಾರ್ಯ ಕೈಗೊಳ್ಳಲಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications