ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತ-ಕನ್ನಡ-ದಲಿತ ಸಂಘಟನೆಗಳ ಒಗ್ಗೂಡಿಸಿ ವಾಟಾಳ್ ರಿಂದ ಹೊಸ ಪಕ್ಷ

|
Google Oneindia Kannada News

Recommended Video

ಕರ್ನಾಟಕ ಚುನಾವಣಾ ಹೊಸ್ತಿಲಲ್ಲಿ ಹೊಸ ಪಕ್ಷ ಕಟ್ಟಿದ ವಾಟಾಳ್ ನಾಗರಾಜ್ | Oneindia Kannada

ಬೆಂಗಳೂರು, ಮಾರ್ಚ್ 19: ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೊಸ ಪಕ್ಷ ಸ್ಥಾಪನೆಗೆ ಮುಂದಾಗಿದ್ದಾರೆ. ಪಕ್ಷದ ಹೆಸರು ಕರ್ನಾಟಕ ಪ್ರಜಾ ಸಂಯುಕ್ತ ರಂಗ. ವಿಧಾನಸಭೆ ಚುನಾವಣೆಗೆ ಇನ್ನೇನು ಎರಡು ತಿಂಗಳು ಬಾಕಿ ಇರುವಂತೆ ಕನ್ನಡ ಸಂಘಟನೆಗಳು, ಪ್ರಾದೇಶಿಕ ದಲಿತ ಹಾಗೂ ರೈತ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಪಕ್ಷ ಸ್ಥಾಪಿಸಲಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಮೇನಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಪಕ್ಷದಿಂದ ಕಣಕ್ಕೆ ಇಳಿಸಲಾಗುತ್ತದೆ. ರಾಜ್ಯದ ಸಮಸ್ಯೆಗಳಿಗೆ ಸಂಬಂಧಿಸಿದ ಒಂದು ಪ್ರಣಾಳಿಕೆ ಸಿದ್ಧಪಡಿಸಲಾಗುವುದು. ಈ ಬಗ್ಗೆ ರೈತರು ಹಾಗೂ ದಲಿತ ಸಂಘಟನೆಗಳ ಜತೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.

Vatal Nagaraj to form new party ahead of Karnataka assembly polls

ಕನ್ನಡಕ್ಕೆ ಸಂಬಂಧಿಸಿದಂತೆ ವಿಧಾನಸಭೆ, ಲೋಕಸಭೆ, ರಾಜ್ಯ ಸಭೆಯಲ್ಲಿ ಧ್ವನಿ ಎತ್ತುವವರೇ ಇಲ್ಲದಂತಾಗಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಇತ್ತೀಚೆಗೆ ನಡೆದ ಹಲವು ರೈತ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದವರು ವಾಟಾಳ್ ನಾಗರಾಜ್. ಜತೆಗೆ ಕನ್ನಡ ನಾಡು-ನುಡಿ- ಜಲದ ವಿಷಯವಾಗಿ ಹಲವು ಹೋರಾಟಗಳನ್ನು ಮಾಡಿದ್ದಾರೆ. ಕನ್ನಡ ಬಾವುಟ ಬದಲಾವಣೆಯ ವಿರುದ್ಧವಾಗಿಯೂ ವಾಟಾಳ್ ನಾಗರಾಜ್ ಧ್ವನಿ ಎತ್ತಿದ್ದರು.

English summary
Kannada Chaluvali Vatal Paksha leader Vatal Nagaraj has announced that pro-Kannada organisations along with regional Dalit and farmers organisations would form Karnataka Praja Samyukta Ranga ahead of assembly elections in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X