ಕಬ್ಬನ್‌ ಪಾರ್ಕ್‌ನಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧ

ಬೆಂಗಳೂರು, ಆಗಸ್ಟ್ 22 : ಕಬ್ಬನ್ ಪಾರ್ಕ್‌ನಲ್ಲಿ ವಾಯು ಮಾಲಿನ್ಯ ತಡೆಗಟ್ಟಲು ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲು ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಉದ್ಯಾನದ ಮೂಲಕ ಪ್ರತಿದಿನ ಸುಮಾರು 5 ಲಕ್ಷ ವಾಹನಗಳು ಸಂಚಾರ ನಡೆಸುತ್ತವೆ.

ತೋಟಗಾರಿಕಾ ಇಲಾಖೆ ಕಬ್ಬನ್ ಉದ್ಯಾನದಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸುವ ಪ್ರಸ್ತಾವನೆ ಸಿದ್ಧಪಡಿಸಿದೆ. ಸರ್ಕಾರಕ್ಕೆ ಇದನ್ನು ಶೀಘ್ರದಲ್ಲಿಯೇ ಸಲ್ಲಿಕೆ ಮಾಡಲಾಗುತ್ತದೆ. ಬೆಂಗಳೂರು ಸಂಚಾರಿ ಪೊಲೀಸರ ಒಪ್ಪಿಗೆಯೂ ಇದಕ್ಕೆ ಬೇಕಾಗಿದೆ.

ಉದ್ಯಾನದ 7 ಗೇಟ್‌ಗಳ ಪೈಕಿ 5 ಗೇಟ್‌ಗಳಿಂದ ವಾಹನಗಳು ಸಂಚಾರ ನಡೆಸುತ್ತವೆ. ಇದರಿಂದಾಗಿ ಉದ್ಯಾನದವೊಳಗೆ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಆದ್ದರಿಂದ, ತೋಟಗಾರಿಕಾ ಇಲಾಖೆ ವಾಹನ ಸಂಚಾರ ಸಂಪೂರ್ಣ ನಿಷೇಧಿಸುವ ಪ್ರಸ್ತಾವನೆ ಸಿದ್ಧಪಡಿಸಿದೆ.

Vehicle Movement Ban In Cubbon Park

ಕಬ್ಬನ್ ಉದ್ಯಾನದಲ್ಲಿ ಪ್ರತಿ ಭಾನುವಾರ ವಾಹನ ಸಂಚಾರ ನಿಷೇಧ ಮಾಡಲಾಗಿದೆ. ಪ್ರಸ್ತುತ ವಾರದ ಎಲ್ಲಾ ದಿನಗಳು ವಾಹನ ಸಂಚಾರ ನಿಷೇಧಿಸಲು ತೀರ್ಮಾನಿಸಲಾಗಿದೆ. ಉದ್ಯಾನದ ಮೂಲಕ ಸಾಗುವ ವಾಹನಗಳು ಹೊರಸೂಸುವ ಹೊಗೆಯಿಂದಾಗಿ ಮಾಲಿನ್ಯ ಹೆಚ್ಚಾಗಿದೆ.

ನಮ್ಮ ಮೆಟ್ರೋ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಉದ್ಯಾನದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಕಬ್ಬನ್ ಉದ್ಯಾನದ ಸುತ್ತಮುತ್ತ ಈಗ ಮೆಟ್ರೋ ಕಾಮಗಾರಿ ಮುಗಿದಿದೆ. ಆದ್ದರಿಂದ, ಉದ್ಯಾನದಲ್ಲಿ ವಾಹನ ಸಂಚಾರ ನಡೆಸುವ ಅನಿವಾರ್ಯತೆ ಇಲ್ಲ ಎಂಬುದು ಇಲಾಖೆಯವಾದ.

ತೋಟಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಕಬ್ಬನ್ ಉದ್ಯಾನದಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ನಿಷೇಧ ಮಾಡುವ ವಿವರವಾದ ಪ್ರಸ್ತಾವನೆ ಸಿದ್ಧಪಡಿಸಿದ್ದಾರೆ. ಸರ್ಕಾರ ಇದಕ್ಕೆ ಒಪ್ಪಿಗೆ ಕೊಡಲಿದೆಯೇ? ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+