ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರವಾಡ ಕೃಷಿ ವಿವಿಯಲ್ಲಿ ವಿವಿಧ ಹುದ್ದೆಗೆ ನೇರ ಸಂದರ್ಶನ

|
Google Oneindia Kannada News

ಧಾರವಾಡ, ಆಗಸ್ಟ್ 02; ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ತಾತ್ಕಾಲಿಕ ಹುದ್ದೆಗಳಿಗೆ ಆಗಸ್ಟ್ 16 ಮತ್ತು 17 ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಕೃಷಿ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ಮತ್ತು ಕೃಷಿ ರಸಾಯನಶಾಸ್ತ್ರ ವಿಭಾಗದಲ್ಲಿ ಕನ್ಸಲ್ಟಂಟ್, ಎಸ್. ಆರ್. ಎಫ್ ಮತ್ತು ಯೋಜನಾ ಸಹಾಯಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ.

ಕೆಎಸ್‌ಆರ್‌ಟಿಸಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿ ಕೆಎಸ್‌ಆರ್‌ಟಿಸಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿ

ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಆಗಸ್ಟ್‌ 16 ಮತ್ತು 17ರಂದು ಬೆಳಗ್ಗೆ 9 ರಿಂದ 11 ಗಂಟೆಯೊಳಗಾಗಿ ಡೀನ್ (ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡ ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

 ಇನ್ಫೋಸಿಸ್ ಸಂಸ್ಥೆಯಲ್ಲಿ 50 ಸಾವಿರ ಹೊಸ ನೇಮಕಾತಿ! ಇನ್ಫೋಸಿಸ್ ಸಂಸ್ಥೆಯಲ್ಲಿ 50 ಸಾವಿರ ಹೊಸ ನೇಮಕಾತಿ!

Walk In Interview At Dharwad Agricultural University On August 16, 17

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.uasd.edu ವೆಬ್‍ಸೈಟ್ ವೀಕ್ಷಣೆ ಮಾಡಬಹುದು ಅಥವಾ 9343167764 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಕೊಪ್ಪಳ; ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೊಪ್ಪಳ; ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ತರಬೇತಿಗೆ ಅರ್ಜಿ ಹಾಕಿ; ಭಾರತೀಯ ಸೇನೆ/ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ಆಯೋಜಿಸಿದೆ.

ಈ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳು (ಬಾಲಕರಿಗೆ ಮಾತ್ರ) ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ. 2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ)ಗಳಿಗೆ ರೂ.1 ಲಕ್ಷ. ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕ ಪಡೆದಿರಬೇಕು.

ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು. ಅಕ್ಟೋಬರ್ 1, 2022ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸು ಪರಿಗಣಿಸಲಾಗುತ್ತದೆ. (ಅಭ್ಯರ್ಥಿಯು 1 ಅಕ್ಟೋಬರ್ 2000 ದಿಂದ 1 ಏಪ್ರಿಲ್ 2005ರ ದಿನಾಂಕಗಳ ನಡುವೆ ಜನಿಸಿರಬೇಕು).

ಈ ತರಬೇತಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನಡೆಯಲಿದೆ. ಅಭ್ಯರ್ಥಿಗಳು ಈ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವರ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆ ಮಾಡಲು ಆಗಸ್ಟ್, 16 ಕೊನೆ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: ದಕ್ಷಿಣ ಕನ್ನಡ ಜಿಲ್ಲೆ 0824-2225078, ಉಡುಪಿ ಜಿಲ್ಲೆ 0820-2574881, ಉತ್ತರ ಕನ್ನಡ ಜಿಲ್ಲೆ 08382-226589.

ಪತ್ರಿಕೋದ್ಯಮ ತರಬೇತಿಗೆ ಅರ್ಜಿ ಹಾಕಿ; ಆದಿಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಮಾದಿಗ ಮತ್ತು ಸಂಬಂಧಿತ ಸಮುದಾಯದ ಯುವಕ ಯುವತಿಯರಿಗೆ 2022-23ನೇ ಸಾಲಿನಲ್ಲಿ ಟೆಲಿವಿಷನ್ ಪತ್ರಿಕೋದ್ಯಮ, ವೀಡಿಯೋ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ, ಕಾಫಿ ಎಡಿಟರ್, ಬುಲೆಟಿನ್ ಪ್ರೊಡ್ಯೂಸರ್ ತರಬೇತಿ ನೀಡಲಾಗುತ್ತದೆ.

ತರಬೇತಿ ಪಡೆಯು ಇಚ್ಚಿಸುವವರು ಮಡಿಕೇರಿ ಜಿಲ್ಲಾ ಕಚೇರಿಯಿಂದ ಅರ್ಜಿ ಪಡೆದು ದಾಖಲೆಗಳೊಂದಿಗೆ ಆಗಸ್ಟ್, 10ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ನಿಯಮಿತ, ರೇಸ್‍ಕೋರ್ಸ್ ರಸ್ತೆ, ಹೊಸಬಡಾವಣೆ ಮಡಿಕೇರಿ, ಕೊಡಗು ಜಿಲ್ಲೆ, ಇಲ್ಲಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-228857ಗೆ ಕರೆ ಮಾಡಬಹುದಾಗಿದೆ ಎಂದು ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಚಂದ್ರಶೇಖರ್ ತಿಳಿಸಿದ್ದಾರೆ.

Recommended Video

Team India ಆಟಗಾರರು ಅರ್ಶದೀಪ್ ಜೆರ್ಸಿ ತೊಡಲು ಇದೇ ಕಾರಣ | *Cricket | OneIndia Kannada

English summary
Walk in interview at Dharwad university of agricultural on August 16 and 17th. Candidates can attend interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X