ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ವಿವಿ ತಾತ್ಕಾಲಿಕ ಹುದ್ದೆಗಳಿಗೆ ಜು.21 ರಂದು ನೇರ ಸಂದರ್ಶನ

|
Google Oneindia Kannada News

ಧಾರವಾಡ, ಜುಲೈ 08; ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಸ್ತರಣೆ ಹಾಗೂ ಸಂವಹನಾ ನಿರ್ವಹಣೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಜುಲೈ 21ರಂದು ನೇರ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

ಸಹಾಯಕ ಪ್ರಾಧ್ಯಾಪಕರು, ಪದವೀಧರ ಸಹಾಯಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಜುಲೈ 21ರ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೊಸಕೋಟೆ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ ಹೊಸಕೋಟೆ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಗೃಹ ವಿಜ್ಞಾನದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಈ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದು.

ಬಿಎಂಟಿಸಿ ನೇಮಕಾತಿ; ಜುಲೈ 8ರೊಳಗೆ ಅರ್ಜಿ ಹಾಕಿ ಬಿಎಂಟಿಸಿ ನೇಮಕಾತಿ; ಜುಲೈ 8ರೊಳಗೆ ಅರ್ಜಿ ಹಾಕಿ

Walk In Interview At Dharwad Agricultural University On July 21

ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜುಲೈ 21 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಉದ್ಯೋಗವಕಾಶ: 13 ಪ್ರಾದೇಶಿಕ ಸೇನಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ ಉದ್ಯೋಗವಕಾಶ: 13 ಪ್ರಾದೇಶಿಕ ಸೇನಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಸಂದರ್ಶನ ನಡೆಯುವ ವಿಳಾಸ; ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ಮಹಾವಿದ್ಯಾಲಯ, ಧಾರವಾಡ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 0836-2443714, 2214233 ಸಂಪರ್ಕಿಸಬಹುದು.

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ; ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಾಕ ಕಾರ್ಯಗಳಿಂದ ವಿಶಿಷ್ಟ ಮತ್ತು ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಶ್ರೇಯೋಭಿವೃದ್ದಿಗೆ ಅಪಾರ ಕೊಡುಗೆ ನೀಡುತ್ತಿರುವ ಪರಿಣಿತರಿಗೆ ಕೃಷಿ ಇಲಾಖೆಯಿಂದ 'ಕೃಷಿ ಪಂಡಿತ' ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸಲು ಇಚ್ಚಿಸುವ ರೈತರ ಸಂಶೋಧನೆ/ ಸಾಧನೆಗಳು ಮೂಲ ಸ್ವರೂಪದಾಗಿದ್ದು, ಬೇರೆಯವರ ಸಾಧನೆಗಿಂತ ವಿಭಿನ್ನವಾಗಿರಬೇಕು ಹಾಗೂ ವ್ಯಾಪಕವಾಗಿ ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು.

ಈ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು ಬಯಸುವ ರೈತ/ ರೈತ ಮಹಿಳೆಯರು ಸ್ಥಳೀಯ ರೈತ ಸಂಪರ್ಕ ಕೇಂದ್ರ ಅಥವಾ ಸಹಯಕ ಕೃಷಿ ನಿರ್ದೇಶಕರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜುಲೈ 22ರೊಳಗೆ ಸಲ್ಲಿಸಬೇಕು.

ರೈತರು ಅರ್ಜಿಗಳನ್ನು ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು. ನಿಗದಿತ ಸಮಯದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಪ್ರಥಮ ಬಹುಮಾನ ರೂ.1.25 ಲಕ್ಷ. ದ್ವೀತಿಯ ಬಹುಮಾನ ರೂ.1 ಲಕ್ಷ. ತೃತೀಯ ಬಹುಮಾನ ರೂ. 75 ಸಾವಿರ ಮತ್ತು ಕೃಷಿ ಪಂಡಿತ ಉದಯೋನ್ಮುಕರಿಗೆ ರೂ. 50 ಸಾವಿರ ಬಹುಮಾನ ನೀಡಲಾಗುತ್ತದೆ.

ರೈತ ಮಹಿಳೆಯರಿಂದ ಅರ್ಜಿ ಆಹ್ವಾನ; ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ/ ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖೆ ನೀಡುತ್ತಿದೆ.

2022-23 ನೇ ಸಾಲಿಗೆ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಸ್ತುತ ವರ್ಷದಲ್ಲಿ ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಹಾಗೂ ಇತರ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ಮಹಿಳೆಯರಿಂದ ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಲ್ಲಾ ಮಟ್ಟಗಳಿಗೆ ಅನ್ವಯಿಸುವಂತೆ ಸಾಮಾನ್ಯ ರೈತ/ ರೈತ ಮಹಿಳೆಯರಿಗೆ ರೂ.100, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತ/ ರೈತ ಮಹಿಳೆಯರಿಗೆ ರೂ. 25 ನೋಂದಣಿ ಶುಲ್ಕವಿದೆ.
ಕನಿಷ್ಠ ಒಂದು ಎಕರೆ ಪ್ರದೇಶದಲ್ಲಿ ಸ್ಪರ್ಧಾ ಬೆಳೆ ಬೆಳೆದಿರಬೇಕು. ಸ್ವಂತ ಜಮೀನು ಇರುವ ಬಗ್ಗೆ ಪಹಣಿ ಪತ್ರ ಹೊಂದಿರಬೇಕು.

ಯಾವುದೇ ಹಂತದಲ್ಲಿ ಒಮ್ಮೆ ಬಹುಮಾನ ಪಡೆದ ರೈತ/ ರೈತ ಕುಟುಂಬದವರು ಮುಂದಿನ ಐದು ವರ್ಷಗಳ ಅವಧಿಗೆ ಆ ಹಂತದ ಬೆಳೆ ಸ್ಪರ್ಧೆಯ ಬಹುಮಾನಕ್ಕೆ ಅರ್ಹನಾಗಿರುವುದಿಲ್ಲ. ಆದರೆ ಆ ಬೆಳೆಯ ಮೇಲಿನ ಹಂತದ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ತಾಲ್ಲೂಕು ಮಟ್ಟದಲ್ಲಿ ಬಹುಮಾನ ಪಡೆದವರು ಜಿಲ್ಲಾ ಮಟ್ಟಕ್ಕೆ ಸ್ಪರ್ಧಿಸಬಹುದು ಮತ್ತು ಜಿಲ್ಲಾ ಮಟ್ಟದಲ್ಲಿ ಬಹುಮಾನ ಪಡೆದವರು ರಾಜ್ಯ ಮಟ್ಟಕ್ಕೆ ಸ್ಪರ್ಧಿಸಬಹುದು.

ಬೆಳೆ ಕಟಾವಿಗೆ 15 ದಿನಗಳ ಮುಂಚಿತವಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಕಟಾವು ದಿನಾಂಕವನ್ನು ತಿಳಿಸಬೇಕು. ಆಯ್ಕೆಯಾದ ರೈತರಿಗೆ ತಾಲ್ಲೂಕು ಮಟ್ಟ ಪ್ರಥಮ ಬಹುಮಾನ ರೂ.15 ಸಾವಿರ, ದ್ವಿತೀಯ ಬಹುಮಾನ ರೂ.10 ಸಾವಿರ ಮತ್ತು ತೃತೀಯ ಬಹುಮಾನ ರೂ.5 ಸಾವಿರ.

ಜಿಲ್ಲಾ ಮಟ್ಟ ಪ್ರಥಮ ಬಹುಮಾನ ರೂ.30 ಸಾವಿರ, ದ್ವಿತೀಯ ಬಹುಮಾನ ರೂ.25 ಸಾವಿರ ಮತ್ತು ತೃತೀಯ ಬಹುಮಾನ ರೂ. 20 ಸಾವಿರ, ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ರೂ.50 ಸಾವಿರ, ದ್ವಿತೀಯ ಬಹುಮಾನ ರೂ.40 ಸಾವಿರ ಮತ್ತು ತೃತೀಯ ಬಹುಮಾನ ರೂ.35 ಸಾವಿರ ನೀಡಲಾಗುತ್ತದೆ.

ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛೆಯುಳ್ಳ ರೈತ/ ರೈತ ಮಹಿಳೆಯರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಕಂದಾಯ ಇಲಾಖೆಯಿಂದ ಪಡೆದ ಪಹಣಿ ಪತ್ರದೊಂದಿಗೆ ನಿಗದಿತ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್, 31 ಕೊನೆಯ ದಿನವಾಗಿದೆ.

Recommended Video

T20 ವಿಶ್ವಕಪ್ ನಿಂದ ವಿರಾಟ್ ಕೊಹ್ಲಿ ಔಟ್!! ಮತ್ತಷ್ಟು ಅವಕಾಶ ಕೊಡೋದಕ್ಕೆ ಆಗಲ್ಲ BCCI | *Cricket | OneIndia

English summary
Walk-in-interview at University of Agricultural Sciences, Dharwad (UASD) on July 21, 2022 for various post. Candidates can attend interview.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X