ಚನ್ನಗಿರಿ: ಸೂಪರ್ ಬ್ರಾಡ್ ಗೇಜ್‌ನಿಂದ ಅಪಾರ ಪ್ರಮಾಣದ ನೀರು ಪೋಲು, ಆಕ್ರೋಶಗೊಂಡ ರೈತರು ಮಾಡಿದ್ದೇನು ಗೊತ್ತಾ?
ದಾವಣಗೆರೆ, ನವೆಂಬರ್, 02: ಒಂದೆಡೆ ಬರ, ಮತ್ತೊಂದೆಡೆ ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ಭದ್ರಾ ನಾಲೆ ನೀರು ಸಿಗುತ್ತಿಲ್ಲ ಎಂಬ ಆಕ್ರೋಶದ ನಡುವೆ ಇದ್ದ ನೀರು ಉಳಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರು ಗ್ರಾಮದ ಗೋಮಾಳಕ್ಕೆ ಹೋಗುವ ರಸ್ತೆಯಲ್ಲಿ ಭದ್ರಾ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಸೂಪರ್ ಬ್ರಾಡ್ ಗೇಜ್ ಒಡೆದು ಹೋಗಿರುವುದು. ಇದರಿಂದ ಬಹಳಷ್ಟು ಪ್ರಮಾಣದಲ್ಲಿ ನೀರು ಹರಿದು ಪೋಲಾಗುತ್ತಿದೆ.
ಭದ್ರಾ ಕಾಲುವೆಗೆ ಅಡ್ಡಲಾಗಿ ಕಟ್ಟಲಾದ ಸೂಪರ್ ಬ್ರಾಡ್ ಗೇಜ್ ಹೊಡೆದು ಬಹಳ ದಿನಗಳಿಂದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಈ ನೀರು ಸಮೀಪದ ಹಿರೇಕೋಗಲೂರು ಕೆರೆಗೆ ಹರಿಯುತ್ತಿದೆ. ಕೆರೆಯಲ್ಲಿ ನೀರು ಸಂಗ್ರಹ ಹೆಚ್ಚಾಗಿ ಕೋಡಿ ಬಿದ್ದಿದೆ. ಇದರಿಂದ ಕೊನೇ ಭಾಗದ ಹಳ್ಳಿಗಳಾದ ಹೂವಿನಮಡು, ಮತ್ತಿ, ಗೋಣಿವಾಡ, ಹೊನ್ನಮರಡಿ, ಕುಕ್ಕುವಾಡ, ನಾಗರಸನಹಳ್ಳಿ ಮುಂತಾದ ಗ್ರಾಮಗಳಿಗೆ ನೀರು ತಲುಪುತ್ತಿಲ್ಲ.

ನೀರಾವರಿ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ನೀರು ನಿರ್ವಹಣೆ ಮಾಡುತ್ತಿಲ್ಲ. ಈಗ ಭತ್ತದ ಪೈರು ಕಾಳು ಕಟ್ಟುವ ಹಂತದಲ್ಲಿದೆ. ರೈತರು ನೀರು ನೀರು ಎಂದು ಗೊಗರೆಯುತ್ತಿದ್ದಾರೆ. ಇತ್ತ ಕೊನೆ ಭಾಗದ ರೈತರಿಗೆ ಸಿಗಬೇಕಾದ ನೀರು ವ್ಯರ್ಥವಾಗಿ ಹರಿದು ಪೋಲಾಗುತ್ತಿದೆ. ರೈತರ ಕೂಗಿಗೆ ಸ್ಪಂದಿಸದ ಜಿಲ್ಲಾಡಳಿತ ದಿವ್ಯ ಮೌನಕ್ಕೆ ಶರಣಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಭಾಗದಲ್ಲಿ ಭದ್ರಾ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಅನೇಕ ಸೇತುವೆಗಳು ಹೊಡೆದು ಹೋಗಿ ಲೆಕ್ಕವಿಲ್ಲದಷ್ಟು ನೀರು ವ್ಯರ್ಥವಾಗಿ ಹರಿದು ಪೋಲಾಗುತ್ತಿದೆ. ನೀರಾವರಿ ಇಲಾಖೆ ಅಧಿಕಾರಿಗಳು ಕಾಮಗಾರಿಗಳ ಪರಿಶೀಲನೆ ನಡೆಸಿ ಪರ್ಸೆಂಟೇಜ್ ಪಡೆಸುವುದರಲ್ಲಿ ನಿರತರಾಗಿದ್ದಾರೆ. ಅವರಿಗೆ ಅಮೂಲ್ಯವಾದ ನೀರನ್ನು ಸಮರ್ಪಕವಾಗಿ ನಿರ್ವಹಿಸುವ ಇಚ್ಚಾಶಕ್ತಿ ಇಲ್ಲ ಎನ್ನುವ ಆಕ್ರೋಶಗಳು ಭುಗಿಲೆದ್ದಿವೆ.
ತಕ್ಷಣ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಗಮನಿಸಿ ಅಧಿಕಾರಿಗಳ ಕಿವಿ ಹಿಂಡಿ ನೀರು ವ್ಯರ್ಥವಾಗಿ ಹರಿಯುತ್ತಿರುವ ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ನೀರು ನೀರು ಎಂದು ಗೊಗರೆಯುತ್ತಿರುವ ರೈತರ ಸಂಕಷ್ಟಕ್ಕೆ ಧಾವಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಕೊಳೇನಹಳ್ಳಿ ಬಿ.ಎಂ.ಸತೀಶ್ ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಕ್ಷಣ ಭೇಟಿ ನೀಡಿ ನೀರು ಪೋಲಾಗದಂತೆ ದುರಸ್ಥಿ ಕಾಮಗಾರಿ ಪ್ರಾರಂಭಿಸಬೇಕು ಆಗ್ರಹ ಕೇಳಿಬಂದಿದೆ. ಇನ್ನು ಬಿಜೆಪಿ ರೈತ ಮೋರ್ಚಾ ತಂಡದೊಂದಿಗೆ ಒಡೆದು ಹೋಗಿರುವ ಸೂಪರ್ ಬ್ರಾಡ್ ಗೇಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈ ವೇಳೆ ಗೋಣಿವಾಡ ಪಿಎ ನಾಗರಾಜಪ್ಪ, ನೀರು ಬಳಕೆದಾರರ ಸಂಘದ ಅಧ್ಯಕ್ಷ ಎನ್.ಎಂ.ಹಾಲೇಶ್, ಕೊಳೇನಹಳ್ಳಿ ಕೆ.ಶರಣಪ್ಪ, ಎಸ್.ಸಿ.ಸಿದ್ದಪ್ಪ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಅಪಾರ ಪ್ರಮಾಣದ ನೀರು ಪೋಲು
ಒಂದೆಡೆ ಬರ, ಮತ್ತೊಂದೆಡೆ ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ಭದ್ರಾ ನಾಲೆ ನೀರು ಸಿಗುತ್ತಿಲ್ಲ ಎಂಬ ಆಕ್ರೋಶದ ನಡುವೆ ಇದ್ದ ನೀರು ಉಳಿಸಿಕೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಚನ್ನಗಿರಿ ತಾಲ್ಲೂಕಿನ ಹಿರೇಕೋಗಲೂರು ಗ್ರಾಮದ ಗೋಮಾಳಕ್ಕೆ ಹೋಗುವ ರಸ್ತೆಯಲ್ಲಿ ಭದ್ರಾ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಸೂಪರ್ ಬ್ರಾಡ್ ಗೇಜ್ ಒಡೆದು ಹೋಗಿರುವುದು. ಇದರಿಂದ ಬಹಳಷ್ಟು ಪ್ರಮಾಣದಲ್ಲಿ ನೀರು ಹರಿದು ಪೋಲಾಗುತ್ತಿದೆ.
ಭದ್ರಾ ಕಾಲುವೆಗೆ ಅಡ್ಡಲಾಗಿ ಕಟ್ಟಲಾದ ಸೂಪರ್ ಬ್ರಾಡ್ ಗೇಜ್ ಹೊಡೆದು ಬಹಳ ದಿನಗಳಿಂದ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಈ ನೀರು ಸಮೀಪದ ಹಿರೇಕೋಗಲೂರು ಕೆರೆಗೆ ಹರಿಯುತ್ತಿದೆ. ಕೆರೆಯಲ್ಲಿ ನೀರು ಸಂಗ್ರಹ ಹೆಚ್ಚಾಗಿ ಕೋಡಿ ಬಿದ್ದಿದೆ. ಇದರಿಂದ ಕೊನೇ ಭಾಗದ ಹಳ್ಳಿಗಳಾದ ಹೂವಿನಮಡು, ಮತ್ತಿ, ಗೋಣಿವಾಡ, ಹೊನ್ನಮರಡಿ, ಕುಕ್ಕುವಾಡ, ನಾಗರಸನಹಳ್ಳಿ ಮುಂತಾದ ಗ್ರಾಮಗಳಿಗೆ ನೀರು ತಲುಪುತ್ತಿಲ್ಲ.
ನೀರಾವರಿ ಇಲಾಖೆ ಅಧಿಕಾರಿಗಳು ಸಮರ್ಪಕವಾಗಿ ನೀರು ನಿರ್ವಹಣೆ ಮಾಡುತ್ತಿಲ್ಲ. ಈಗ ಭತ್ತದ ಪೈರು ಕಾಳು ಕಟ್ಟುವ ಹಂತದಲ್ಲಿದೆ. ರೈತರು ನೀರು ನೀರು ಎಂದು ಗೊಗರೆಯುತ್ತಿದ್ದಾರೆ. ಇತ್ತ ಕೊನೆ ಭಾಗದ ರೈತರಿಗೆ ಸಿಗಬೇಕಾದ ನೀರು ವ್ಯರ್ಥವಾಗಿ ಹರಿದು ಪೋಲಾಗುತ್ತಿದೆ. ರೈತರ ಕೂಗಿಗೆ ಸ್ಪಂದಿಸದ ಜಿಲ್ಲಾಡಳಿತ ದಿವ್ಯ ಮೌನಕ್ಕೆ ಶರಣಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಈ ಭಾಗದಲ್ಲಿ ಭದ್ರಾ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಅನೇಕ ಸೇತುವೆಗಳು ಹೊಡೆದು ಹೋಗಿ ಲೆಕ್ಕವಿಲ್ಲದಷ್ಟು ನೀರು ವ್ಯರ್ಥವಾಗಿ ಹರಿದು ಪೋಲಾಗುತ್ತಿದೆ. ನೀರಾವರಿ ಇಲಾಖೆ ಅಧಿಕಾರಿಗಳು ಕಾಮಗಾರಿಗಳ ಪರಿಶೀಲನೆ ನಡೆಸಿ ಪರ್ಸೆಂಟೇಜ್ ಪಡೆಸುವುದರಲ್ಲಿ ನಿರತರಾಗಿದ್ದಾರೆ. ಅವರಿಗೆ ಅಮೂಲ್ಯವಾದ ನೀರನ್ನು ಸಮರ್ಪಕವಾಗಿ ನಿರ್ವಹಿಸುವ ಇಚ್ಚಾಶಕ್ತಿ ಇಲ್ಲ ಎನ್ನುವ ಆಕ್ರೋಶಗಳು ಭುಗಿಲೆದ್ದಿವೆ.
ತಕ್ಷಣ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಗಮನಿಸಿ ಅಧಿಕಾರಿಗಳ ಕಿವಿ ಹಿಂಡಿ ನೀರು ವ್ಯರ್ಥವಾಗಿ ಹರಿಯುತ್ತಿರುವ ಇಂತಹ ಪ್ರಕರಣಗಳನ್ನು ಪತ್ತೆಹಚ್ಚಿ ನೀರು ನೀರು ಎಂದು ಗೊಗರೆಯುತ್ತಿರುವ ರೈತರ ಸಂಕಷ್ಟಕ್ಕೆ ಧಾವಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಕೊಳೇನಹಳ್ಳಿ ಬಿ.ಎಂ.ಸತೀಶ್ ಒತ್ತಾಯಿಸಿದ್ದಾರೆ.

Click it and Unblock the Notifications