ಅಡಿಕೆ ಬೆಳೆಗೆ ಹವಾಮಾನ ಆಧಾರಿತ ವಿಮೆ ಯೋಜನೆ, ಮೊತ್ತದ ವಿವರ
ಚಿತ್ರದುರ್ಗ, ಜೂನ್ 30: ನೈಋತ್ಯ ಮುಂಗಾರು ಹಂಗಾಮು 2024ರ ಕೃಷಿ ಚಟುವಟಿಕೆಗಳು ಆರಂಭವಾಗಿದೆ. ರೈತರಿಗೆ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ಯೋಜನೆಯ ಮಾಹಿತಿ ನೀಡಲಾಗಿದೆ. ರೈತರು ಎಷ್ಟು ಪಾವತಿಸಬೇಕು, ಎಷ್ಟು ಮೊತ್ತ ನೀಡಲಾಗುತ್ತದೆ? ಎಂಬ ಮಾಹಿತಿ ಬಿಡುಗಡೆ ಮಾಡಲಾಗಿದೆ.
2024-25ನೇ ಸಾಲಿನಲ್ಲಿ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಬಹುವಾರ್ಷಿಕ ತೋಟಗಾರಿಕೆ ಬೆಳೆಗಳಾದ ಅಡಿಕೆ, ದಾಳಿಂಬೆ ಮತ್ತು ಮಾವು ಬೆಳೆಗಳಿಗೆ ಮರು ವಿನ್ಯಾಸಗೊಳಿಸಿ ಅನುಷ್ಟಾನಗೊಳಿಸಲಾಗಿದೆ.

ರೈತರು ಬೆಳೆ ವಿಮೆ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ. ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆದ್ರತೆ ಇತ್ಯಾದಿ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮಾ ನಷ್ಟವನ್ನು ತೀರ್ಮಾನಿಸಲಾಗುತ್ತದೆ.
ಬೆಳೆ ವಿಮೆ ವಿವರಗಳು: 2024ರ ಮುಂಗಾರು ಹಂಗಾಮಿಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು, ವಿಮಾ ಮೊತ್ತ ಹಾಗೂ ವಿಮಾ ಕಂತಿನ ವಿವರಗಳನ್ನು ರೈತರ ಅನುಕೂಲಕ್ಕಾಗಿ ನೀಡಲಾಗಿದೆ.
ಮಾವು ಬೆಳೆಗೆ ಪ್ರತಿ ಹೆಕ್ಟೇರ್‌ಗೆ ರೂ. 80000 ವಿಮಾ ಮೊತ್ತ ನೀಡಲಾಗುವುದು. ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ ರೂ. 4000. ದಾಳಿಂಬೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ ರೂ. 1,27000 ನೀಡಲಾಗುವುದು, ರೈತರು 5 ಕಂತುಗಳಲ್ಲಿ ಪಾವತಿಸಬೇಕಾದ ವಿಮಾ ಮೊತ್ತ ರೂ. 6,350 ರೂ.ಗಳು.
ಅಡಿಕೆ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ.1,28,000 ವಿಮೆ ಮೊತ್ತ ನೀಡಲಾಗುತ್ತದೆ. ರೈತರು 5 ಕಂತುಗಳಲ್ಲಿ ರೂ. 6,400 ಪಾವತಿಸಬೇಕು. ಬೆಳೆಗಳ ವಿಮೆಯನ್ನು ಬ್ಯಾಂಕ್‍ಗಳಲ್ಲಿ, ಸಾಮಾನ್ಯ ಸೇವಾ ಕೇಂದ್ರ ಆರ್ಥಿಕ ಸಂಸ್ಥೆಗಳಲ್ಲಿ ನೋಂದಣಿ ಮಾಡಿಸಬಹುದು.
ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ದಿನಾಂಕ ವಿಸ್ತರಣೆ ಮಾಡಲು ಶಾಸಕರ ಪತ್ರ: 2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ನೋಂದಣಿಯ ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನಗೆ ಪತ್ರವನ್ನು ಬರೆದಿದ್ದಾರೆ.
ಶಾಸಕರು ಪತ್ರದಲ್ಲಿ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಉಡುಪಿ ಜಿಲ್ಲೆಗೆ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮೆಗೆ ಒಳಪಡಿಸಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಅದರಂತೆ ಪ್ರತಿ ವರ್ಷ ಜೂನ್ 1 ರಿಂದ 30ರ ವರೆಗೆ ವಿಮೆಗೆ ನೋಂದಾವಣಿ ಮಾಡಲು ಕಾಲಾವಕಾಶ ನೀಡಬೇಕಾಗಿರುತ್ತದೆ.
ಆದರೆ ಕಳೆದ ಆರ್ಥಿಕ ವರ್ಷದಲ್ಲೂ ಕೂಡ ವಿಮೆಗೆ ನೋಂದಾವಣಿ ಮಾಡಲು ತೀರಾ ಕಡಿಮೆ ಕಾಲಾವಕಾಶ ಕಲ್ಪಿಸಿ ಅರ್ಹ ರೈತರು ಯೋಜನೆಯಿಂದ ವಂಚಿತರಾಗಿದ್ದು ಅದೇ ರೀತಿ ಈ ವರ್ಷ ಜೂನ್ 26 ರಿಂದ ಜುಲೈ 1 ರವರೆಗೆ ಮಾತ್ರ ರೈತರು ತಮ್ಮ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮೆ ನೋಂದಾವಣಿ ಮಾಡಲು ಕಾಲಾವಕಾಶ ಕಲ್ಪಿಸಲಾಗಿರುತ್ತದೆ ಎಂದು ಬ್ಯಾಂಕ್ ಶಾಖೆಗಳು ರೈತರಿಗೆ ತಿಳಿಸಿರುತ್ತಾರೆ ಎಂಬ ಮಾಹಿತಿ ಲಭಿಸಿದೆ.
ಕಾಲಾವಕಾಶ ತೀರಾ ಕಡಿಮೆ ಇರುವುದರಿಂದ ಎಲ್ಲಾ ಅರ್ಹ ರೈತರು ತಮ್ಮ ಬೆಳೆಗೆ ವಿಮೆ ನೋಂದಾವಣಿ ಮಾಡಿಸುವುದು ಕಷ್ಟವಾಗಿದ್ದು ಸರ್ಕಾರದ ಯೋಜನೆಯಿಂದ ವಂಚಿತರಾಗುವ ಸಾಧ್ಯತೆಗಳಿರುತ್ತದೆ. ಈ ಬಗ್ಗೆ ಈಗಾಗಲೇ ಜಿಲ್ಲಾ ರೈತ ಸಂಘಟನೆ ಹಾಗೂ ರೈತರು ಕಾಲಾವಕಾಶ ವಿಸ್ತರಿಸಲು ಮನವಿ ಮಾಡಿರುತ್ತಾರೆ.
ಆದ್ದರಿಂದ 2024-25ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ವಿಮೆ ನೋಂದಾವಣಿ ಮಾಡಲು ಕಾಲಾವಕಾಶವನ್ನು ವಿಸ್ತರಿಸಬೇಕು ಎಂದು ಶಾಸಕರು ಪತ್ರದಲ್ಲಿ ಮನವಿ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications