Get Updates
Get notified of breaking news, exclusive insights, and must-see stories!

ಕಾಫಿನಾಡಿನ ಹಲವೆಡೆ ಕಾಫಿ, ಬಾಳೆ, ಅಡಿಕೆ ಬೆಳೆಗಳನ್ನು ಧ್ವಂಸ ಮಾಡಿದ ಕಾಡಾನೆಗಳು

ಚಿಕ್ಕಮಗಳೂರು, ಜೂನ್‌, 14: ಮಳೆಯಿಲ್ಲದೆ ಹಲವೆಡೆ ರೈತರು ಬೇಸಿಗೆ ಬೆಳೆಗಳನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದರೆ, ಮತ್ತೊಂದೆಡೆ ಕಾಡಾನೆಗಳನ್ನು ಅಲ್ಪಸ್ವಲ್ಪ ಬಂದಿರುವ ಬೆಳಗಳನ್ನೆಲ್ಲ ನಾಶ ಮಾಡುತ್ತಿವೆ. ಹಾಗೆಯೇ ಕಾಡಾನೆ ದಾಳಿಯಿಂದ ಲಕ್ಷಾಂತರ ಮೌಲ್ಯದ ಕಾಫಿ, ಅಡಿಕೆ, ಬಾಳೆ ಬೆಳೆ ನಾಶ ಆಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಕೆಸವಿನಹಕ್ಲು ಗ್ರಾಮದಲ್ಲಿ ನಡೆದಿದೆ.

ಆಲ್ದೂರು ಸಮೀಪದ ಕೆಸವಿನಹಕ್ಲು ಗ್ರಾಮದ ಸುರೇಶ್‍ಗೌಡ ಎಂಬುವವರ ತೋಟದಲ್ಲಿ ದಾಳಿ ಮಾಡಿರುವ ಕಾಡಾನೆಗಳು ಲಕ್ಷಾಂತರ ಮೌಲ್ಯದ ಕಾಫಿ, ಅಡಿಕೆ, ಬಾಳೆಯನ್ನ ನಾಶ ಮಾಡಿವೆ. ಅಲ್ಲದೆ ಕೆಲ ಅಡಿಕೆ ಮರಗಳನ್ನು ಬುಡಸಮೇತ ಕಿತ್ತು ಹಾಕಿವೆ. ಹೀಗೆ ಫಸಲಿಗೆ ಬಂದಿದ್ದ ಬಾಳೆಯನ್ನು ಸಂಪೂರ್ಣ ನಾಶ ಮಾಡಿವೆ. ಲಕ್ಷಾಂತರ ಮೌಲ್ಯದ ಬೆಳೆಗಳನ್ನು ಕಳೆದುಕೊಂಡಿರುವ ತೋಟದ ಮಾಲೀಕ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ. ಇನ್ನು ಸ್ಥಳಕ್ಕೆ ಆಲ್ದೂರು ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Wild elephant attacks In Chikkamagaluru district, Banana crops loss, Farmerrs are worried

ಇನ್ನು ಎನ್.ಆರ್.ಪುರ ತಾಲೂಕಿನ ಭದ್ರಾ ಹಿನ್ನೀರಿನ ಸಮೀಪವೇ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನ ಆತಂಕದಿಂದ ಇರುವಂತಾಗಿದೆ. ಭದ್ರಾ ಹಿನ್ನೀರಿನಿಂದ ಆಗಾಗ ಬರುತ್ತಿರುವ ಕಾಡಾನೆಗಳು ಗ್ರಾಮಗಳ ಸಮೀಪವೇ ಬೀಡು ಬಿಡುತ್ತಿವೆ. ಹಾಗಾಗಿ, ಗ್ರಾಮೀಣ ಭಾಗದ ಜನ ಆತಂಕದಲ್ಲಿ ಜೀವನ ಸಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿಯಿಂದ ಜೀವ ಹಾನಿ ಕೂಡ ಸಂಭವಿಸಿದೆ. ಆನೆ ದಾಳಿಯಿಂದ ಕಂಗೆಟ್ಟ ಜನ ಶಾಸಕರ ಮೇಲೆ ಹಲ್ಲೆ ಮಾಡಿ, ಅರಣ್ಯ ಅಧಿಕಾರಿಗಳ ಕ್ಯಾಂಪ್‌ ಅನ್ನು ಕೂಡ ಇತ್ತೀಚೆಗಷ್ಟೇ ದ್ವಂಸ ಮಾಡಿದ್ದರು. ಈ ವೇಳೆ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕುವಾಗ ಲಾಠಿ ಚಾರ್ಜ್ ಕೂಡ ನಡೆದಿದೆ. ಆದ್ದರಿಂದ್ ಇದೀಗ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಆನೆಗಳ ಹಿಂಡನ್ನು ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕೊನೆಗೂ ಸೆರೆಯಾದ ಪುಂಡಾನೆ

ಇನ್ನು ಇತ್ತೀಚೆಗಷ್ಟೇ ಚನ್ನಪಟ್ಟಣ ತಾಲೂಕಿನ ವಿರುಪಸಂದ್ರ ಗ್ರಾಮದಲ್ಲಿ ಮಾವಿನ ತೋಟದ ಕಾವಲುಗಾರನನ್ನು ಪುಂಡಾನೆ ತುಳಿದು ಸಾಯಿಸಿದ್ದು, ಈ ಹಿನ್ನೆಲೆ ಅರಣ್ಯ ಇಲಾಖೆ ಎರಡನೇ ಬಾರಿಗೆ ಪುಂಡಾನೆ ಸೆರೆಯಿಡಿಯಲು ಜೂನ್‌ 04ರಂದು 5 ಸಾಕನೆಗಳನ್ನು ಬಳಸಿಕೊಂಡು "ಆಪರೇಷನ್ ಪುಂಡಾನೆ ಸೆರೆ" ಕಾರ್ಯಚರಣೆ ಪ್ರಾರಂಭಿಸಿತ್ತು. ಬಳಿಕ ಅರಳಾಳುಸಂದ್ರ ಗ್ರಾಮದ ಬಳಿ ಪುಂಡಾನೆಯನ್ನು ಸೆರೆಹಿಡಿಯುವ ಮೂಲಕ ಕಾರ್ಯಾಚರಣೆಯನ್ನು ಯಶ್ವಸಿಗೊಳಿಸಿದ್ದರು.

ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಬಳಿಯ ತೆಂಗಿನಕಲ್ಲು ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಪುಂಡಾನೆಯನ್ನು ಸೆರೆಹಿಡಿದಿತ್ತು. ಅರವಳಿ‌ಕೆ ಮದ್ದು ನೀಡಿ ಕಾಡಾನೆಯನ್ನು ಸೆರೆಹಿಡಿದಿದ್ದರು ಎಂದು ತಿಳಿದುಬಂದಿತ್ತು. ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿದ್ದು, ಅಭಿಮನ್ಯು ಸೇರಿ 4 ಆನೆಗಳನ್ನು ಬಳಸಿಕೊಂಡು ಪುಂಡಾನೆಯನ್ನು ಸೆರೆಹಿಡಿಯಲಾಗಿತ್ತು.

ಪುಂಡಾನೆ ದಾಳಿಗೆ ಇತ್ತೀಚೆಗಷ್ಟೇ ಇಬ್ಬರು ಅಮಾಯಕರು ಬಲಿಯಾಗಿದ್ದರು. ಆಗಿಂದ ಇಲ್ಲಿನ ಜನರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದರು. ಬಳಿಕ ಎಚ್ಚೆತ್ತ ಇಲಾಖೆ ಪುಂಡಾನೆಯನ್ನು ಬಲೆಗೆ ಕಡವಿತ್ತು. ಈ ಹಿನ್ನೆಲೆ ಅಲ್ಲಿನ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಹಾಗೆಯೇ ಇನ್ನೂ ಉಳಿದಿರುವ 4-5 ಪುಂಡಾನೆಗಳನ್ನು ಅರಣ್ಯ ಇಲಾಖೆ ಸೆರೆಹಿಡಿಯಲಿದೆ ಎನ್ನುವ ಮಾಹಿತಿಯೂ ಲಭ್ಯವಾಗಿತ್ತು.

ತ್ತೀಚೆಗಷ್ಟೇ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಿರುಪಸಂದ್ರ ಗ್ರಾಮದ ದೇವರಾಜು ಎಂಬುವವರಿಗೆ ಸೇರಿದ ಮಾವಿನತೋಟದ ಕಾವಲುಗಾರನಾಗಿ ಕೆಲಸ ಮಾಡುತಗತಿದ್ದ ಮುತ್ತರಾಯನಪುರ ಮೂಲದ ವೀರಭದ್ರಯ್ಯ ಎಂಬುವವರನ್ನು ಪುಂಡಾನೆ ದಾಳಿ ಮಾಡಿ ತುಳಿದು ಸಾಯಿಸಿತ್ತು. ಪುಂಡಾನೆ ದಾಳಿಗೆ ರೈತ ಬಲಿಯಾದ ಹಿನ್ನೆಲೆಯಲ್ಲಿ ರೈತರು ಸರ್ಕಾರ ಹಾಗೂ ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಪುಂಡಾನೆ ಸೆರೆಗೆ ಮುಂದಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+