ಕಡಬಗೆರೆ ಸೀನ ಶೂಟೌಟ್: ನನ್ನ ಪಾತ್ರ ಏನಿಲ್ಲ: ಶಾಸಕ ವಿಶ್ವನಾಥ್
ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲಿನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೂ ಸಿದ್ಧ ಹಾಗೂ ಯಾವುದೇ ರೀತಿಯ ತನಿಖೆಗೂ ಸಿದ್ಧ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ಹೇಳಿದ್ದಾರೆ.
ಬೆಂಗಳೂರು, ಫೆಬ್ರವರಿ 09: ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಮೇಲಿನ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿಚಾರಣೆಗೂ ಸಿದ್ಧ ಹಾಗೂ ಯಾವುದೇ ರೀತಿಯ ತನಿಖೆಗೂ ಸಿದ್ಧ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರು ವಿಧಾನಸೌಧದಲ್ಲಿ ಅಂಗಳದಲ್ಲಿ ಸುದ್ದಿಗಾರರ ಮುಂದೆ ಈ ರೀತಿ ಹೇಳಿದರು.
ನಾಲ್ಕು ವರ್ಷದ ಹಿಂದೆ ಶ್ರೀನಿವಾಸ್ ನನ್ನ ಆತ್ಮೀಯರಾಗಿದ್ದರು. ನಮ್ಮಿಬ್ಬರದು ರಾಜಕೀಯ ನಂಟು. ನಾಲ್ಕು ವರ್ಷಗಳಿಂದ ನಾನು, ಶ್ರೀನಿವಾಸ್ ಸಂಪರ್ಕದಲ್ಲಿಲ್ಲ ಎಂದರು. ಆದರೆ, ಶೂಟೌಟ್ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲದಿದ್ದರೂ ಕೆಲ ಮಾಧ್ಯಮಗಳಲ್ಲಿ ನನ್ನ ತೇಜೋವಧೆ ಮಾಡಲಾಗುತ್ತಿದೆ ಎಂದರು.[ಕಡಬಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣ: ಮತ್ತೆ ಇಬ್ಬರ ಬಂಧನ]

ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿ ಮಾಡಿ ತನಿಖೆಗೆ ಸಿದ್ಧ ಎಂದು ಹೇಳಿದ್ದೇನೆ. ಮಂಪರು ಪರೀಕ್ಷೆಗೂ ಒಳಪಡಿಸಲಿ. ಈ ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಎಂದರು. ಮಾಧ್ಯಮಗಳು ತಮ್ಮ ಕುಟುಂಬದ ಸದಸ್ಯರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು. ಸತೀಶ್ ಎಂಬುವರು ಸ್ನೇಹಿತ.
ಆದರೆ, ಬಲಗೈ ಭಂಟ ಎಂಬ ರೀತಿಯಲ್ಲಿ ತಮ್ಮೊಂದಿಗೆ ಲಿಂಕ್ ಮಾಡುವುದು ಸರಿಯಲ್ಲ. ಜನಪ್ರತಿನಿಧಿಯಾಗಿ ಹಲವು ರೀತಿಯ ಜನರ ಸಂಪರ್ಕವಿರುತ್ತದೆ. ಸತ್ಯಾಸತ್ಯತೆ ಪರಿಶೀಲಿಸದೆ ತಮ್ಮನ್ನೇ ಆರೋಪಿ ಎಂಬ ರೀತಿ ಬಂಬಿಸುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications