ಸಾಲ ಮನ್ನಾಕ್ಕೆ ಆಗ್ರಹ : ಜೋಶಿ ಮನೆಗೆ ಮುತ್ತಿಗೆ ಯತ್ನ

ರಾಜ್ಯ ಸರ್ಕಾರ ಸಹಕಾರ ಸಂಘಗಳಲ್ಲಿನ ೫೦ ಸಾವಿರದ ವರೆಗಿನ ಸಾಲವನ್ನು ಮನ್ನಾ ಮಾಡಿದ್ದು, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ, ಜುಲೈ 08 : ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಸಂಸದ ಪ್ರಹ್ಲಾದ್ ಜೋಶಿ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ಮಧ್ಯೆ ತೀವ್ರ ವಾಗ್ವಾದ ಶನಿವಾರ ನಡೆಯಿತು.

ರಾಜ್ಯ ಸರ್ಕಾರ ಸಹಕಾರ ಸಂಘಗಳಲ್ಲಿನ 50 ಸಾವಿರದ ವರೆಗಿನ ಸಾಲವನ್ನು ಮನ್ನಾ ಮಾಡಿದ್ದು, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದಲ್ಲಿಂದು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

Youth Congress demand waver of farmer loan by union government

ಎತ್ತಿನ ಬಂಡಿಯೊಂದಿಗೆ ಆಗಮಿಸಿದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಸಂಸದ ಪ್ರಹ್ಲಾದ್ ಜೋಶಿಯವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆಗ ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗ ಮಧ್ಯೆದಲ್ಲಿಯೇ ತಡೆದರು.

Youth Congress demand waver of farmer loan by union government

ನಗರದ ಕೇಶ್ವಾಪುರ ಬಳಿಯ ಮಯೂರ ಎಸ್ಟೇಟ್ ರಸ್ತೆಯಲ್ಲಿಯೇ ಪ್ರತಿಭಟನಾಕಾರರನ್ನು ತಡೆ ಹಿಡಿದಿದ್ದರಿಂದ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.

Youth Congress demand waver of farmer loan by union government
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+