ಕೊಪ್ಪಳ, ಡಿಸೆಂಬರ್ 09 : ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಗರಿಷ್ಠ ಪ್ರಮಾಣವನ್ನು ಪರಿಷ್ಕರಿಸಲಾಗಿದೆ. ಕರ್ನಾಟಕ ಸರ್ಕಾರ ಭತ್ತ ಖರೀದಿಗೆ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ.
2020-21ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಗರಿಷ್ಠ ಪ್ರಮಾಣವನ್ನು ಪರಿಷ್ಕರಣೆ ಮಾಡಲಾಗಿದೆ. ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 25 ಕ್ವಿಂಟಾಲ್‌ನಂತೆ ಗರಿಷ್ಠ 75 ಕ್ವಿಂಟಾಲ್ ಮೀರದಂತೆ ಖರೀದಿಸಲಾಗುತ್ತದೆ.
ಈ ಹಿಂದೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸಾಮಾನ್ಯ ಭತ್ತವನ್ನು ಪ್ರತಿ ರೈತರಿಂದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 16 ಕ್ವಿಂಟಾಲ್‌ನಂತೆ, ಗರಿಷ್ಠ 40 ಕ್ವಿಂಟಾಲ್ ಮೀರದಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿತ್ತು.